ಪ್ರಧಾನ ಸುದ್ದಿ

ಚಾಲಕನ ನಿಯಂತ್ರಣ ತಪ್ಪಿ ಕ್ರೂಸರ್ ಪಲ್ಟಿ: 3 ಸಾವು, 7 ಮಂದಿಗೆ ಗಂಭೀರ ಗಾಯ

ಚಾಲಕನ ನಿಯಂತ್ರಣ ತಪ್ಪಿ ಕ್ರೂಸರ್ ಪಲ್ಟಿ ಹೊಡೆದ ಪರಿಣಾಮ ಮೂವರು ಸಾವನ್ನಪ್ಪಿರುವ ಘಟನೆ ಕೆರೂರು ಗ್ರಾಮದಲ್ಲಿ ನಡೆದಿದೆ...

ಚಾಲಕನ ನಿಯಂತ್ರಣ ತಪ್ಪಿ ಕ್ರೂಸರ್ ಪಲ್ಟಿ: 3 ಸಾವು, 7 ಮಂದಿಗೆ ಗಂಭೀರ ಗಾಯ
ಕ್ರೂಸರ್
Published On :

ಬಾದಾಮಿ: ಚಾಲಕನ ನಿಯಂತ್ರಣ ತಪ್ಪಿ ಕ್ರೂಸರ್ ಪಲ್ಟಿ ಹೊಡೆದ ಪರಿಣಾಮ ಮೂವರು ಸಾವನ್ನಪ್ಪಿರುವ ಘಟನೆ ಕೆರೂರು ಗ್ರಾಮದಲ್ಲಿ ನಡೆದಿದೆ.

ಬಾಗಲಕೋಟೆಯ ಬಾದಾಮಿಯ ಕೆರೂರು ಗ್ರಾಮದಲ್ಲಿ ಈ ದುರ್ಘಟನೆ ಸಂಭವಿಸಿದೆ. ಕೌಟುಂಬಿಕ ಕಲಹ ಸಂಧಾನ ವಿಚಾರವಾಗಿ ಅಕ್ಕಲಕೋಟೆಯಿಂದ ಬಾದಾಮಿಯ ಮುಕವಿಗೆ ಬರುತ್ತಿದ್ದಾಗ ಕೆರೂರು ಗ್ರಾಮದಲ್ಲಿ ಚಾಲಕನ ನಿಯಂತ್ರಣ ತಲ್ಟಿ ಹೊಡೆದಿದೆ. ಪರಿಣಾಮ ಮೂರು ಮಂದಿ ಸಾವನ್ನಪ್ಪಿದ್ದು, 7 ಮಂದಿಗೆ ಗಂಭೀರ ಗಾಯಗಳಾಗಿವೆ.

ಮೃತರನ್ನು ಮಹಾರಾಷ್ಟ್ರದ ಕರಿಯಪ್ಪ(40), ವಿಜಯಪುರದ ಗುಂಡಪ್ಪ(60) ಹಾಗೂ ಕಬ್ಬಾ(50) ಎಂದು ಗುರುತಿಸಲಾಗಿದೆ. ಇನ್ನುಳಿದಂತೆ ಗಾಯಾಳುಗಳನ್ನು ಬಾದಾಮಿಯ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿ ಚಿಕಿತ್ಸೆ ನೀಡಲಾಗುತ್ತಿದೆ. ಕೆರೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.