ಪ್ರಧಾನ ಸುದ್ದಿ

ಜೇಟ್ಲಿ ದೋಷಮುಕ್ತವಾಗಿ ಹೊರಹೊಮ್ಮಲಿದ್ದಾರೆ: ಮೋದಿ

ಕೇಂದ್ರ ವಿತ್ತ ಸಚಿವ ಅರುಣ್ ಜೇಟ್ಲಿ ಅವರ ಬೆಂಬಲಕ್ಕೆ ಬಂದಿರುವ ಪ್ರಧಾನಿ ನರೇಂದ್ರ ಮೋದಿ, ಜೇಟ್ಲಿ ಡಿಡಿಸಿಎ ಬ್ರಷ್ಟಾಚಾರದ ಆರೋಪದಿಂದ ಮುಕ್ತರಾಗಿ ಹೊರಬರಲಿದ್ದಾರೆ

ಜೇಟ್ಲಿ ದೋಷಮುಕ್ತವಾಗಿ ಹೊರಹೊಮ್ಮಲಿದ್ದಾರೆ: ಮೋದಿ
ಕೇಂದ್ರ ವಿತ್ತ ಸಚಿವ ಅರುಣ್ ಜೇಟ್ಲಿ
Published On :

ನವದೆಹಲಿ: ಕೇಂದ್ರ ವಿತ್ತ ಸಚಿವ ಅರುಣ್ ಜೇಟ್ಲಿ ಅವರ ಬೆಂಬಲಕ್ಕೆ ಬಂದಿರುವ ಪ್ರಧಾನಿ ನರೇಂದ್ರ ಮೋದಿ, ಜೇಟ್ಲಿ ಡಿಡಿಸಿಎ ಬ್ರಷ್ಟಾಚಾರದ ಆರೋಪದಿಂದ ಮುಕ್ತರಾಗಿ ಹೊರಬರಲಿದ್ದಾರೆ ಎಂದಿದ್ದಾರೆ.

"ಹವಾಲಾ ಹಗರಣದಲ್ಲಿ ಎಲ್ ಕೆ ಅಡ್ವಾಣಿ ಹೊರಬಂದಂತೆ ಜೇಟ್ಲಿ ಕೂಡ ದೋಷಮುಕ್ತರಾಗಿ ಹೊರಹೊಮ್ಮಲಿದ್ದಾರೆ" ಎಂದು ಬಿಜೆಪಿ ಸಂಸದೀಯ ಸಭೆಯಲ್ಲಿ ಮೋದಿ ಹೇಳಿದರು ಎಂದು ಸಂಸದೀಯ ವ್ಯವಹಾರಗಳ ಸಚಿವ ಎಂ ವೆಂಕಯ್ಯ ನಾಯ್ಡು ಹೇಳಿದ್ದಾರೆ.

"ಬಿಜೆಪಿ ಮುಂದಾಳತ್ವದ ಸರ್ಕಾರದ ವಿರುದ್ಧ ಕಾಂಗ್ರೆಸ್ ಆರೋಪಗಳ ಪಿತೂರಿ ನಡೆಸುತ್ತಿದೆ" ಎಂದು ಕೂಡ ಮೋದಿ ದೂರಿದ್ದಾರೆ.

ಕೇಂದ್ರ ವಿತ್ತ ಸಚಿವ, ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ವಿರುದ್ಧ ಮಾನನಷ್ಟ ಮೊಕದ್ದಮೆ ಹೂಡಿರುವ ಹಿನ್ನಲೆಯಲ್ಲಿ ಭಾರತೀಯ ಜನತಾ ಪಕ್ಷದ ಅಧ್ಯಕ್ಷ ಅಮಿತಾ ಷಾ ಜೇಟ್ಲಿ ಅವರನ್ನು ಪ್ರಾಮಾಣಿಕ ಮನುಷ್ಯ ಎಂದಿದ್ದರು. ಇದರ ಬೆನ್ನಲ್ಲೇ ಪ್ರಧಾನಿ ಕೂಡ ಜೇಟ್ಲಿ ಅವರ ಬೆಂಬಲಕ್ಕೆ ನಿಂತಿದ್ದಾರೆ.

ವಿದೇಶಾಂಗ ಸಚಿವೆ ಸುಷ್ಮಾ ಸ್ವರಾಜ್, ರಾಜಸ್ಥಾನ ಮುಖ್ಯಮಂತ್ರಿ ವಸುಂಧರಾ ರಾಜೆ ಮತ್ತು ಮಧ್ಯಪ್ರದೇಶದ ಮುಖ್ಯಮಂತ್ರಿ ಶಿವರಾಜ್ ಚೌಹಾನ್ ವಿರುದ್ಧ ಕೂಡ ಕಾಂಗ್ರೆಸ್ ಪಿತೂರಿ ಮಾಡಿತ್ತು ಎಂದು ಪ್ರಧಾನಿ ಹೇಳಿದ್ದಾರೆ.

ದೆಹಲಿ ಮತ್ತು ಜಿಲ್ಲಾ ಕ್ರಿಕೆಟ್ ಮಂಡಲಿಯಲ್ಲಿ (ಡಿಡಿಸಿಎ) ಅರುಣ್ ಜೇಟ್ಲಿ ಅಧ್ಯಕ್ಷರಾಗಿದ್ದಾಗ ಹಗರಣ ನಡೆದಿದೆ ಎಂದು ಆರೋಪಿಸಿದ್ದ ಬಿಜೆಪಿ ಸಂಸದ ಕೀರ್ತಿ ಅಜಾದ್ ಸಂಸದೀಯ ಸಭೆಯಲ್ಲಿ ಭಾಗವಹಿಸಿಲ್ಲ. ತಮಗೆ ಮೊದಲೇ ನಿಗದಿಯಾಗಿದ್ದ ಕಾರ್ಯಕ್ರಮವಿದ್ದುದರಿಂದ ಭಾಗವಹಿಸಲು ಸಾಧ್ಯವಾಗಿಲ್ಲ, ಇದು ಬಹಿಷ್ಕಾರವಲ್ಲ ಎಂದು ಕೀರ್ತಿ ಸ್ಪಷ್ಟಪಡಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.