ಕೀರ್ತಿ ಆಜಾದ್ ವಿರುದ್ಧ ಶಿಸ್ತು ಕ್ರಮಕ್ಕೆ ಸುಶೀಲ್ ಕುಮಾರ್ ಮೋದಿ ಆಗ್ರಹ
ದೆಹಲಿ ಕ್ರಿಕೆಟ್ ಮಂಡಲಿಯಲ್ಲಿ ಅಕ್ರಮವೆಸಗಿದ್ದಾರೆ ಎಂದು ವಿತ್ತ ಸಚಿವ ಅರುಣ್ ಜೇಟ್ಲಿ ವಿರುದ್ಧ ಕಾಂಗ್ರೆಸ್ ಮತ್ತು ಆಮ್ ಆದ್ಮಿ ಪಕ್ಷ ಆರೋಪಿಸಿರುವ ಹಿನ್ನಲೆಯಲ್ಲಿ ಮತ್ತು

ಪಾಟ್ನಾ: ದೆಹಲಿ ಕ್ರಿಕೆಟ್ ಮಂಡಲಿಯಲ್ಲಿ ಅಕ್ರಮವೆಸಗಿದ್ದಾರೆ ಎಂದು ವಿತ್ತ ಸಚಿವ ಅರುಣ್ ಜೇಟ್ಲಿ ವಿರುದ್ಧ ಕಾಂಗ್ರೆಸ್ ಮತ್ತು ಆಮ್ ಆದ್ಮಿ ಪಕ್ಷ ಆರೋಪಿಸಿರುವ ಹಿನ್ನಲೆಯಲ್ಲಿ ಮತ್ತು ಇದಕ್ಕೆ ಬಿಜೆಪಿ ಸಂಸದ ಕೀರ್ತಿ ಆಜಾದ್ ಕೂಡ ಸಹಮತ ವ್ಯಕ್ತಪಡಿಸಿರುವ ಹಿನ್ನಲೆಯಲ್ಲಿ ಜೇಟ್ಲಿ ಅವರ ಬೆಂಬಲಕ್ಕೆ ನಿಂತಿರುವ ಬಿಜೆಪಿ ಮುಖಂಡ ಸುಶೀಲ್ ಕುಮಾರ್ ಮೋದಿ, ಕೀರ್ತಿ ಆಜಾದ್ ಅವರು ವಿರೋಧ ಪಕ್ಷಗಳ ಕೈಗೊಂಬೆಯಾಗುತ್ತಿದ್ದಾರೆ ಅವರ ವಿರುದ್ಧ ಶಿಸ್ತು ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದ್ದಾರೆ.
"ರಾಜಕೀಯ ವಿಪಕ್ಷಗಳ ಕೈಗೊಂಬೆಯಾಗಿ ಪಕ್ಷಕ್ಕೆ ಮುಜುಗರ ತರುತ್ತಿರುವ ಕೀರ್ತಿ ಆಜಾದ್ ಮತ್ತು ಇನ್ನಿತರ ಸಂಸದರ ವಿರುದ್ಧ ಬಿಜೆಪಿ ಶಿಸ್ತು ಕ್ರಮ ತೆಗೆದುಕೊಳ್ಳಬೇಕು" ಎಂದು ಮೋದಿ ಟ್ವೀಟ್ ಮಾಡಿದ್ದಾರೆ.
"@ಅರುಣ್ ಜೇಟ್ಲಿ ಜೊತೆಗೆ ಬಿಹಾರ ಬಿಜೆಪಿ ಇದೆ" ಎಂದಿರುವ ಅವರು "ಪಕ್ಷದ ವಿರುದ್ಧ ಮಾತನಾಡುವವರ ವಿರುದ್ಧ ಶಿಸ್ತು ಕ್ರಮ ತೆಗೆದುಕೊಳ್ಳುವುದಕ್ಕೆ ಪಕ್ಷ ಹಿಂಜರಿಯಬಾರದು" ಎಂದು ಕೂಡ ಅವರು ತಿಳಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


