ನಟ ದರ್ಶನ್ ತಾಯಿ ಮೀನಾ ತೂಗುದೀಪ ವಿರುದ್ಧ ಎಫ್ಐಆರ್
ಸ್ಯಾಂಡಲ್ ವುಡ್ ನಟ ದರ್ಶನ್ ತಾಯಿ ಮೀನಾ ತೂಗುದೀಪ ಶ್ರೀನಿವಾಸ್ ವಿರುದ್ಧ ಕಳ್ಳತನ ಪ್ರಕರಣ ದಾಖಲಾಗಿದೆ...

ಬೆಂಗಳೂರು: ಸ್ಯಾಂಡಲ್ ವುಡ್ ನಟ ದರ್ಶನ್ ತಾಯಿ ಮೀನಾ ತೂಗುದೀಪ ಶ್ರೀನಿವಾಸ್ ವಿರುದ್ಧ ಕಳ್ಳತನ ಪ್ರಕರಣ ದಾಖಲಾಗಿದೆ.
ಮನೆಯ ಹೆಂಚು, ಮರದ ಸಾಮಗ್ರಿ ಕಳ್ಳತನ ಮಾಡಿದ್ದಾರೆ ಎಂದು ಮೀನಾ ಸಹೋದರಿಯರಾದ ಪಾರ್ವತಿ ರವಿಕುಮಾರ್, ದಮಯಂತಿ ಮಕರಂದನಾಯ್ಡು ವಿರುದ್ಧ ಚಾಮರಾಜನಾಯ್ಡು ಅವರು ಪೊನ್ನಂಪೇಟೆ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದು, ಎಫ್ ಐಆರ್ ದಾಖಲಾಗಿದೆ.
ಮೀನಾ ಸಹೋದರ ಚಾಮರಾಜನಾಯ್ಡು ಮೊದಲಿಗೆ ಮೀನಾ ತೂಗುದೀಪ ವಿರುದ್ಧ ಪೊನ್ನಂಪೇಟೆಯ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದರು. ಆದರೆ ಪೊಲೀಸರು ಪ್ರಕರಣ ದಾಖಲಿಸಲು ನಿರಾಕರಿಸಿದ ಹಿನ್ನೆಲೆಯಲ್ಲಿ ಚಾಮರಾಜನಾಯ್ಡು ಅವರು ಪೊನ್ನಂಪೇಟೆಯ ಜೆಎಂಎಫ್ ಸಿ ನ್ಯಾಯಾಲಯದಲ್ಲಿ ಖಾಸಗಿ ದೂರು ಸಲ್ಲಿಸಿದ್ದರು. ನ್ಯಾಯಾಲಯದ ತೀರ್ಪು ಆಧರಿಸಿ ಮೀನಾ ಹಾಗೂ ಸಹೋದರಿಯರ ವಿರುದ್ಧ ಐಪಿಸಿ ಸೆಕ್ಷನ್ 421, 448, 380ರ ಅಡಿ ಕೇಸ್ ದಾಖಲಿಸಲಾಗಿದೆ.
ಪೊನ್ನಂಪೇಟೆಯ ಸರ್ವೆ ನಂಬರ್ 123\4ರಲ್ಲಿರುವ ಜಾಗ 0,10 ಸೆಂಟ್ ಜಾಗದಲ್ಲಿದ್ದ ಮನೆ ಧ್ವಂಸ ಮಾಡಿದ ಆರೋಪವನ್ನು ದರ್ಶನ್ ತಾಯಿ ಎದುರಿಸುತ್ತಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


