ಅರುಣ್ ಜೇಟ್ಲಿ ವಿರುದ್ಧ ಆರೋಪ: ಬಿಜೆಪಿಯಿಂದ ಕೀರ್ತಿ ಆಜಾದ್ ಅಮಾನತು
ದೆಹಲಿ ಮತ್ತು ಜಿಲ್ಲಾ ಕ್ರಿಕೆಟ್ ಸಂಸ್ಥೆ(ಡಿಡಿಸಿಎ)ಯ ಹಗರಣ ಸಂಬಂಧ ತಮ್ಮದೇ ಪಕ್ಷದ ಕೇಂದ್ರ ಸಚಿವ ಅರುಣ್ ಜೇಟ್ಲಿ ವಿರುದ್ಧ...

Published On :
ನವದೆಹಲಿ: ದೆಹಲಿ ಮತ್ತು ಜಿಲ್ಲಾ ಕ್ರಿಕೆಟ್ ಸಂಸ್ಥೆ(ಡಿಡಿಸಿಎ)ಯ ಹಗರಣ ಸಂಬಂಧ ತಮ್ಮದೇ ಪಕ್ಷದ ಕೇಂದ್ರ ಸಚಿವ ಅರುಣ್ ಜೇಟ್ಲಿ ವಿರುದ್ಧ ಬಹಿರಂಗ ವಾಗ್ದಾಳಿ ನಡೆಸಿದ್ದ ಮಾಜಿ ಕ್ರಿಕೆಟಿಗ ಹಾಗೂ ಬಿಜೆಪಿ ಸಂಸದ ಕೀರ್ತಿ ಆಜಾದ್ ಅವರನ್ನು ಬುಧವಾರ ಪಕ್ಷದಿಂದ ಅಮಾನತು ಮಾಡಲಾಗಿದೆ.
ಪಕ್ಷ ವಿರೋದಿ ಚಟುವಟಿಕೆ ಆರೋಪದ ಮೇಲೆ ಬಿಜೆಪಿ ಅಧ್ಯಕ್ಷ ಅಮಿತ್ ಶಾ ಅವರು ಆಜಾದ್ ಅವರನ್ನು ಪಕ್ಷದಿಂದ ಅಮಾನತುಗೊಳಿಸಿದ್ದಾರೆ.
ಅರುಣ್ ಜೇಟ್ಲಿ ಅವರು ಡಿಡಿಸಿಎನಲ್ಲಿ ಭಾರಿ ಭ್ರಷ್ಟಾಚಾರ ಎಸಗಿದ್ದಾರೆ ಎಂದು ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಹಾಗೂ ಇತರೆ ಎಎಪಿ ನಾಯಕರು ಆರೋಪಿಸಿದ್ದರು, ಇದಕ್ಕೆ ಸಾಥ್ ನೀಡಿದ್ದ ಕೀರ್ತಿ ಆಜಾದ್, ಡಿಡಿಸಿಎಯ ಅತ್ಯಂತ ದೊಡ್ಡ ಭ್ರಷ್ಟಾಚಾರವನ್ನು ಬಯಲಿಗೆಳೆಯುತ್ತೇನೆ ಮತ್ತು ಅಪರಾಧಿಯ ಮುಖವಾಡ ಕಳಚುತ್ತೇನೆ ಎಂದಿದ್ದರು. ಅಲ್ಲದೆ ಈ ಸಂಬಂಧ ಆಡಿಯೊ– ವಿಡಿಯೊ ಸಾಕ್ಷ್ಯಗಳ ಜತೆ ಭಾನುವಾರ ಸಂಜೆ ಡಿಡಿಸಿಎಯ ಭ್ರಷ್ಟ ಮುಖ ಬಹಿರಂಗಪಡಿಸುತ್ತೇನೆ ಎಂದು ಗುಡುಗಿದ್ದರು.
ಬಳಿಕ ಅರುಣ್ ಜೇಟ್ಲಿ ಅವರನ್ನು ಗುರಿಯಾಗಿಸಿಕೊಂಡು ಮಾಡುತ್ತಿರುವ ಆರೋಪದಿಂದ ಹಿಂದೆ ಸರಿಯುವಂತೆ ಅಮಿತ್ ಷಾ ಅವರು ಕೀರ್ತಿ ಅವರಲ್ಲಿ ಮನವಿ ಮಾಡಿದ್ದರು. ಆದರೆ ತಮ್ಮ ನಿರ್ಧಾರದಿಂದ ಹಿಂದೆ ಸರಿಯುವುದಿಲ್ಲ ಎಂದು ಕೀರ್ತಿ ಸ್ಪಷ್ಟಪಡಿಸಿದ್ದರಿಂದ ಅವರನ್ನು ಇಂದು ಪಕ್ಷದಿಂದ ಅಮಾನತುಗೊಳಿಸಲಾಗಿದೆ.
ಜೇಟ್ಲಿ ಅವರು ಡಿಡಿಸಿಎ ಅಧ್ಯಕ್ಷರಾಗುವಂತಕ್ಕಿಂತ ಎರಡು ವರ್ಷಗಳ ಹಿಂದೆ ಕೀರ್ತಿ ಆಜಾದ್ ಅಧ್ಯಕ್ಷರಾಗಿದ್ದರು.
ತಮ್ಮ ವಿರುದ್ಧ ಭ್ರಷ್ಟಾಚಾರ ಆರೋಪ ಮಾಡಿದ್ದ ಕೇಜ್ರಿವಾಲ್ ಸೇರಿದಂತೆ ಎಎಪಿ ನಾಯಕರ ವಿರುದ್ಧ ಅರುಣ್ ಜೇಟ್ಲಿ ಕ್ರಿಮಿನಲ್ ಹಾಗೂ ಮಾನನಷ್ಟ ಮೊಕದ್ದಮೆ ದಾಖಲಿಸಿದ್ದಾರೆ. ಆದರೆ ತಮ್ಮದೇ ಪಕ್ಷದ ಕೀರ್ತಿ ಆಜಾದ್ ವಿರುದ್ಧ ಇದುವರೆಗೂ ಯಾವುದೇ ಕೇಸ್ ದಾಖಲಿಸಿಲ್ಲ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


