ಪ್ರಧಾನ ಸುದ್ದಿ

ಸರಿ ಬೆಸ ವಾಹನ ಚಾಲನೆ ನಿಯಮದಿಂದ ದ್ವಿಚಕ್ರ ವಾಹನಗಳಿಗೆ ವಿನಾಯಿತಿ

ವಾಯುಮಾಲಿನ್ಯಕ್ಕೆ ಕಡಿವಾಣ ಹಾಕಲು ಬದಲಿ ದಿನಗಳಂದು ಸರಿ ಬೆಸ ನೋಂದಣಿ ಸಂಖ್ಯೆಯುಳ್ಳ ವಾಹನ ಚಾಲನೆಯನ್ನು ದೆಹಲಿ ಸರ್ಕಾರ ಜನವರಿಯಿಂದ ಜಾರಿಗೆ ತರಲಿದ್ದು

ಸರಿ ಬೆಸ ವಾಹನ ಚಾಲನೆ ನಿಯಮದಿಂದ ದ್ವಿಚಕ್ರ ವಾಹನಗಳಿಗೆ ವಿನಾಯಿತಿ
ಸಾಂದರ್ಭಿಕ ಚಿತ್ರ
Published On :

ನವದೆಹಲಿ: ವಾಯುಮಾಲಿನ್ಯಕ್ಕೆ ಕಡಿವಾಣ ಹಾಕಲು ಬದಲಿ ದಿನಗಳಂದು ಸರಿ ಬೆಸ ನೋಂದಣಿ ಸಂಖ್ಯೆಯುಳ್ಳ ವಾಹನ ಚಾಲನೆಯನ್ನು ದೆಹಲಿ ಸರ್ಕಾರ ಜನವರಿಯಿಂದ ಜಾರಿಗೆ ತರಲಿದ್ದು ಈ ನಿಯಮದಿಂದ ದ್ವಿಚಕ್ರ ವಾಹನಗಳಿಗೆ ವಿನಾಯಿತೆ ಇದೆ ಎಂದು ಅಧಿಕಾರಿಯೊಬ್ಬರು ಬುಧವಾರ ತಿಳಿಸಿದ್ದಾರೆ.

"ಈ ಯೋಜನೆಯಿಂದ ದ್ವಿಚಕ್ರ ವಾಹನಗಳಿಗೆ ವಿನಾಯಿತಿ ನೀಡಲಾಗುತ್ತದೆ ಎಕೆಂದರ ಅವುಗಳ ಸಂಖ್ಯೆ ಅತಿ ಹೆಚ್ಚು ಹಾಗೂ ಸಾರ್ವಜನಿಕ ಸಂಪರ್ಕ ಅಷ್ಟೇನೂ ಪರಿಣಾಮಕಾರಿಯಾಗಿಲ್ಲ" ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಮಹಿಳೆಯರು ಚಾಲನೆ ಮಾಡುವ ಕಾರುಗಳಿಗೂ ಈ ನಿಯಮದಿಂದ ವಿನಾಯಿತಿ ನೀಡುವ ಸಾಧ್ಯತೆಯಿದೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ರಾಜಧಾನಿಯಲ್ಲಿ ೯೦ ಲಕ್ಷ ವಾಹನಗಳಲ್ಲಿ ಸುಮಾರು ೫೦ ಲಕ್ಷ ದ್ವಿಚಕ್ರ ವಾಹನಗಳಿವೆ ಎಂದು ತಿಳಿಯಲಾಗಿದೆ.

ಈ ನಿಯಮ ಸಿ ಎನ್ ಜಿ ಚಾಲಿತ ವಾಹನಗಳು, ಸಾರ್ವಜನಿಕ ವಾಹನಗಳು ಮತ್ತು ತುರ್ತು ಪರಿಸ್ಥಿತಿಯ ವಾಹನಗಳಿಗೆ ಅನ್ವಯವಾಗುವುದಿಲ್ಲ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.