ಪ್ರಧಾನ ಸುದ್ದಿ

ಕೆಎಸ್ಆರ್ಟಿಸಿ ಬಸ್ ಗಳ ನಡುವೆ ಡಿಕ್ಕಿ: 8 ಮಂದಿ ದಾರುಣ ಸಾವು

ಎರಡು ಕೆಎಸ್ಆರ್ಟಿಸಿ ಬಸ್ ಗಳ ನಡುವೆ ಸಂಭವಿಸಿದ ಮುಖಾಮುಖಿ ಡಿಕ್ಕಿಯಲ್ಲಿ ಇಬ್ಬರು ಚಾಲಕರು ಸೇರಿ 8 ಮಂದಿ ದಾರುಣ ಸಾವನ್ನಪ್ಪಿದ್ದಾರೆ...

ಕೆಎಸ್ಆರ್ಟಿಸಿ ಬಸ್ ಗಳ ನಡುವೆ ಡಿಕ್ಕಿ: 8 ಮಂದಿ ದಾರುಣ ಸಾವು
ಅಪಘಾತ
Published On :
ಬಿದರೆಗುಡಿ(ಶಿವಮೊಗ್ಗ): ಎರಡು ಕೆಎಸ್ಆರ್ಟಿಸಿ ಬಸ್ ಗಳ ನಡುವೆ ಸಂಭವಿಸಿದ ಮುಖಾಮುಖಿ ಡಿಕ್ಕಿಯಲ್ಲಿ ಇಬ್ಬರು ಚಾಲಕರು ಸೇರಿ 8 ಮಂದಿ ದಾರುಣ ಸಾವನ್ನಪ್ಪಿದ್ದಾರೆ. 
ಶಿವಮೊಗ್ಗದಲ್ಲಿ ಬೆಂಗಳೂರಿಗೆ ಹಾಗೂ ಬೆಂಗಳೂರಿನಿಂದ ಶಿವಮೊಗ್ಗಕ್ಕೆ ತೆರಳುತ್ತಿದ್ದ ಕೆಎಸ್ಆರ್ಟಿಸಿ ಬಸ್ ಗಳ ನಡುವೆ ತುಮಕೂರು ಜಿಲ್ಲೆಯ ತಿಪಟೂರು ತಾಲೂಕಿನ ಬಿದರೆಗುಡಿ ಗ್ರಾಮದ ಬಳಿ ರಾಷ್ಟ್ರೀಯ ಹೆದ್ದಾರಿ 206ರಲ್ಲಿ ಅಪಘಾತ ಸಂಭವಿಸಿದೆ. ಭೀಕರ ಅಪಘಾತದಲ್ಲಿ ನಾಲ್ವರು ಪುರುಷರು ಸೇರಿ 8 ಮಂದಿ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಇಳಿದಂತೆ 10ಕ್ಕೂ ಹೆಚ್ಚು ಪ್ರಯಾಣಿಕರಿಗೆ ಗಾಯಗಳಾಗಿದ್ದು, ಗಾಯಾಳುಗಳು ಜಿಲ್ಲಾಸ್ಪತ್ರೆ ಹಾಗೂ ಬೆಂಗಳೂರು ಆಸ್ಪತ್ರೆಗೆ ರವಾನಿಸಲಾಗಿದೆ. 
ಕಳೆದ ರಾತ್ರಿ 2 ಗಂಟೆ ಸುಮಾರಿಗೆ ಭೀಕರ ಅಪಘಾತ ಸಂಭವಿಸಿದೆ. ಘಟನಾ ಸ್ಥಳಕ್ಕೆ ತುಮಕೂರು ಜಿಲ್ಲೆಯ ಎಸ್ಪಿ ಕಾರ್ತಿಕ್ ರೆಡ್ಡಿ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಹೊನ್ನವಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.