ಪಾಕ್, ಅಫ್ಘನ್ ನಲ್ಲಿ ಭೂಕಂಪ; ನಡುಗಿದ ಉತ್ತರ ಭಾರತ
ಅಫ್ಘಾನಿಸ್ತಾನ ಮತ್ತು ಪಾಕಿಸ್ತಾನದಲ್ಲಿ ಶುಕ್ರವಾರ ರಾತ್ರಿ ಭೂಕಂಪ ಸಂಭವಿಸಿದೆ. ಎರಡು ತಿಂಗಳ ನಂತರ ಮತ್ತೆ ಎರಡು ದೇಶಗಳಲ್ಲಿ...

Published On :
ಕಾಬುಲ್: ಅಫ್ಘಾನಿಸ್ತಾನ ಮತ್ತು ಪಾಕಿಸ್ತಾನದಲ್ಲಿ ಶುಕ್ರವಾರ ರಾತ್ರಿ ಭೂಕಂಪ ಸಂಭವಿಸಿದೆ. ಎರಡು ತಿಂಗಳ ನಂತರ ಮತ್ತೆ ಎರಡು ದೇಶಗಳಲ್ಲಿ ಭೂಕಂಪ ಸಂಭವಿಸಿದ್ದು, ಇದರ ಪರಿಣಾಮವಾಗಿ ಉತ್ತರ ಭಾರತದಲ್ಲಿ ಭೂ ಕಂಪನದ ಅನುಭವವಾಗಿದೆ.
ನಿನ್ನೆ ರಾತ್ರಿ ಸುಮಾರು 11.14ರ ಸುಮಾರಿಗೆ 6.2 ರಷ್ಟು ಹಾಗೂ ಪಾಕಿಸ್ತಾನದಲ್ಲಿ 6.9 ರಷ್ಟು ತೀವ್ರತೆ ರಿಕ್ಟರ್ ಮಾಪಕದಲ್ಲಿ ದಾಖಲಾಗಿದೆ.
ದೆಹಲಿ, ಕಾಶ್ಮೀರ ಸೇರಿದಂತೆ ಉತ್ತರ ಭಾರತದಲ್ಲಿ ಕಂಪನದ ಅನುಭವವಾಗಿದೆ. ಆದರೆ ಈವರೆಗೆ ಯಾವುದೇ ಸಾವು ನೋವು ಬಗ್ಗೆ ವರದಿಯಾಗಿಲ್ಲ.
ಪಾಕಿಸ್ತಾನದ ರಾಜಧಾನಿ ಇಸ್ಲಾಮಾಬಾದ್, ಪಂಜಾಬ್ ಪ್ರಾಂತ್ಯದ ಲಾಹೋರ್, ಪಾಕಿಸ್ತಾನ ಮತ್ತು ತಜಕಿಸ್ತಾನ ಗಡಿ ಭಾಗದಲ್ಲಿ ಸೇರಿದಂತೆ ಇತರ ಸ್ಥಳಗಳಲ್ಲಿ ಭೂಕಂಪಿಸಿದೆ. ಇನ್ನು ದೆಹಲಿ ಹಾಗೂ ಕಾಶ್ಮೀರದಲ್ಲಿ ಕಂಪನದ ಅನುಭವವಾಗಿರುವ ಬಗ್ಗೆ ರಾಷ್ಟ್ರೀಯ ಭೂ ವಿಜ್ಞಾನ ಸಚಿವಾಲಯದ ಮೂಲಗಳು ತಿಳಿಸಿವೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


