ವೈಬರ್‌ನಲ್ಲಿ ಮೋದಿ; ಒಂದು ವಾರದಲ್ಲೇ 6 ಲಕ್ಷ ಹಿಂಬಾಲಕರು!
ಸಾಮಾಜಿಕ ಜಾಲತಾಣಗಳಲ್ಲಿ ಸಾಕಷ್ಟು ಫಾಲೋವರ್ ಗಳನ್ನು ಹೊಂದಿ ಮುಂಚೂಣಿಯಲ್ಲಿರುವ ಪ್ರಧಾನಿ ನರೇಂದ್ರ ಮೋದಿ ಈಗ...

ನವದೆಹಲಿ: ಸಾಮಾಜಿಕ ಜಾಲತಾಣಗಳಲ್ಲಿ ಸಾಕಷ್ಟು ಫಾಲೋವರ್ ಗಳನ್ನು ಹೊಂದಿ ಮುಂಚೂಣಿಯಲ್ಲಿರುವ ಪ್ರಧಾನಿ ನರೇಂದ್ರ ಮೋದಿ ಈಗ ಮತ್ತೊಂದು ಚಾಟಿಂಗ್ ಸೈಟ್ ವೈಬರ್ ಬಳಸಲು ಆರಂಭಿಸಿದ್ದಾರೆ. ವೈಬರ್‌ಗೆ ಸೇರಿದ ಮೊದಲ ವಾರದಲ್ಲೇ 6 ಲಕ್ಷ ಹಿಂಬಾಲಕರನ್ನು ಗಳಿಸಿರುವ ಮೋದಿ ಇಲ್ಲಿಯೂ 'ಮೋದಿ ಹವಾ' ಸೃಷ್ಟಿಸಿದ್ದಾರೆ.
ಈಗಾಗಲೇ ಫೇಸ್‌ಬುಕ್, ಟ್ವೀಟರ್ ಮತ್ತು ಇನ್‌ಸ್ಟಾ ಗ್ರಾಂ ಬಳಸುತ್ತಿರುವ ಮೋದಿಯವರಿಗೆ ಎಲ್ಲಾ ಜಾಲತಾಣಗಳಲ್ಲಿ ಅಸಂಖ್ಯಾತ ಹಿಂಬಾಲಕರು ಇದ್ದಾರೆ. ಸಾಮಾಜಿಕ ತಾಣಗಳ ಮೂಲಕ ಸಾರ್ವಜನಿಕರೊಂದಿಗೆ ಮೋದಿ ನೇರ ಸಂಪರ್ಕವನ್ನಿಟ್ಟುಕೊಳ್ಳುವ ಮೂಲಕ ಜನರಿಗೆ ಹತ್ತಿರವಾಗುತ್ತಿದ್ದಾರೆ.
ವೈಬರ್ ಬಳಸಲಾರಂಭಿಸಿದ ಮೋದಿ ಇದರಲ್ಲಿ ಗಣರಾಜ್ಯೋತ್ಸವದ ಪರೇಡ್ ಚಿತ್ರಗಳನ್ನು ಮತ್ತು 1950ಜನವರಿ 26ರಂದು ಬಿಡುಗಡೆಯಾದ ಅಂಚೆಚೀಟಿಯ ಚಿತ್ರವನ್ನು ಶೇರ್ ಮಾಡಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


