ಬೆಂಗಳೂರಿಗೆ ಬರದಂತೆ ಪ್ರವೀಣ್ ತೊಗಾಡಿಯಾಗೆ ನಿಷೇಧ

ಬೆಂಗಳೂರು: ವಿಶ್ವ ಹಿಂದೂ ಪರಿಷತ್‌ನ ಅಂತರಾಷ್ಟ್ರೀಯ ಕಾರ್ಯದರ್ಶಿ ಪ್ರವೀಣ್ ತೊಗಾಡಿಯಾ ಅವರಿಗೆ ಬೆಂಗಳೂರು ನಗರ ಪ್ರವೇಶಿಸದಂತೆ ಬೆಂಗಳೂರು ಪೊಲೀಸರು ನಿಷೇಧ ಹೇರಿದ್ದಾರೆ.
ಫೆಬ್ರವರಿ 8ರಂದು ನಗರದ ನ್ಯಾಷನಲ್ ಕಾಲೇಜ್ ಮೈದಾನದಲ್ಲಿ ನಡೆಯುವ ಹಿಂದೂ ಸಮಾಜೋತ್ಸವದಲ್ಲಿ ಭಾಗವಹಿಸಲು ತೊಗಾಡಿಯಾ ಬೆಂಗಳೂರಿಗೆ ಬರುತ್ತಿದ್ದರು. ಆದರೆ ತೊಗಾಡಿಯಾ ಅವರು ಕಾರ್ಯಕ್ರಮದಲ್ಲಿ ಪ್ರಚೋದನಕಾರಿ ಭಾಷಣ ಮಾಡಬಹುದು ಎಂಬ ಮಾಹಿತಿ ಹಿನ್ನೆಲೆಯಲ್ಲಿ ನಗರ ಪೊಲೀಸ್ ಆಯುಕ್ತ ಎಂ.ಎನ್.ರೆಡ್ಡಿ ಅವರು ತೊಗಾಡಿಯಾ ನಗರ ಪ್ರವೇಶಕ್ಕೆ ನಿಷೇಧ ಹೇರಿ ಆದೇಶ ಹೊರಡಿಸಿದ್ದಾರೆ.
ನಗರ ಪೊಲೀಸ್ ಆಯುಕ್ತರ ಆದೇಶದನ್ವಯ ಪ್ರವೀಣ್ ತೊಗಾಡಿಯಾ ಅವರು ಫೆಬ್ರವರಿ 5ರಿಂದ ಫೆಬ್ರುವರಿ 10ರವರೆಗೆ ಬೆಂಗಳೂರು ನಗರಕ್ಕೆ ಪ್ರವೇಶ ಮಾಡುವಂತಿಲ್ಲ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


