ಎಪಿಎಲ್ ಕಾರ್ಡುದಾರರಿಗೂ ಪಡಿತರ ಅಕ್ಕಿ ವಿತರಣೆ: ಸಿಎಂ ಸಿದ್ದರಾಮಯ್ಯ
ಬಡತನ ರೇಖೆಗಿಂತ ಮೇಲಿನ(ಎಪಿಎಲ್) ವರ್ಗದ ಜನರಿಗೂ ಅತಿ ಕಡಿಮೆ ದರದಲ್ಲಿ ಪಡಿತರ ಅಕ್ಕಿ ವಿತರಿಸಲು ರಾಜ್ಯ ಸರ್ಕಾರ ನಿರ್ಧರಿಸಿದೆ.

ಬೆಂಗಳೂರು: ಬಡತನ ರೇಖೆಗಿಂತ ಮೇಲಿನ(ಎಪಿಎಲ್) ವರ್ಗದ ಜನರಿಗೂ ಅತಿ ಕಡಿಮೆ ದರದಲ್ಲಿ ಪಡಿತರ ಅಕ್ಕಿ ವಿತರಿಸಲು ರಾಜ್ಯ ಸರ್ಕಾರ ನಿರ್ಧರಿಸಿದೆ.
ಎಪಿಎಲ್ ಕಾರ್ಡುದಾರರಿಗೂ ಪಡಿತರ ಅಕ್ಕಿ ವಿತರಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು ವಿಧಾನಸಭೆಯಲ್ಲಿ ನಡೆದ ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆಯಲ್ಲಿ ಘೋಷಿಸಿದ್ದಾರೆ.
ಈ ವೇಳೆ ಎಪಿಎಲ್ ಕಾರ್ಡುದಾರರಿಗೆ ಪ್ರತಿ ಕೆ.ಜಿ. ಅಕ್ಕಿಗೆ 10 ರುಪಾಯಿ ದರ ನಿಗದಿ ಮಾಡುವಂತೆ ಶಾಸಕರ ಮನವಿ ಮಾಡಿದರು. ಅಲ್ಲದೆ ನ್ಯಾಯ ಬೆಲೆ ಅಂಗಡಿಯಲ್ಲಿ ನಕಲಿ ಕಾರ್ಡ್ ಪತ್ತೆಯಾದರೆ, ಅಂಗಡಿ ಮಾಲೀಕರ ವಿರುದ್ಧ ಕ್ರಿಮಿನಲ್ ಕೇಸ್ ದಾಖಲಿಸಬೇಕು ಮತ್ತು ಅವರ ಲೈಸನ್ಸ್ ರದ್ದು ಮಾಡಬೇಕು ಎಂದು ಶಾಸಕ ರಮೇಶ್ ಕುಮಾರ್ ಅವರು ಸಿಎಂಗೆ ಸಲಹೆ ನೀಡಿದರು.
ಇನ್ನು ರಾಜ್ಯದಲ್ಲಿ ಮತ್ತೆ ಲಾಟರಿ ಜಾರಿಗೆ ತರಬೇಕು ಎಂಬ ಯೋಜನಾ ಆಯೋಗದ ಶಿಫಾರಸಿಗೆ ಕಾಂಗ್ರೆಸ್ ಶಾಸಕರು ತೀವ್ರ ವಿರೋಧ ವ್ಯಕ್ತಪಡಿಸಿದರು. ಆದರೆ ತಮಿಳುನಾಡು ಮಾದರಿಯಲ್ಲಿ ರಾಜ್ಯದಲ್ಲೂ ಕ್ಯಾಂಟಿನ್ ವ್ಯವಸ್ಥೆ ಜಾರಿಗೆ ತರುವಂತೆ ಮನವಿ ಮಾಡಿದರು ಎನ್ನಲಾಗಿದೆ.
ಶಾಸಕಾಂಗ ಪಕ್ಷದ ಸಭೆಯ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಆಹಾರ ಮತ್ತು ನಾಗರಿಕ ಪೂರೈಕೆ ಸಚಿವ ದಿನೇಶ್ ಗುಂಡೂರಾವ್ ಅವರು, ಎಪಿಎಲ್ ಕಾರ್ಡುದಾರರಿಗೂ ಪಡಿತರ ಅಕ್ಕಿ ವಿತರಿಸುವ ಬಗ್ಗೆ ಮತ್ತು ಬಿಪಿಎಲ್ ಕಾರ್ಡುದಾರರಿಗೆ 1 ಲೀಟರ್ ಅಡುಗೆ ಎಣ್ಣೆ ಹಾಗೂ 1 ಕೆ.ಜಿ. ಬೆಳೆ ನೀಡುವ ಬಗ್ಗೆಯೂ ಚರ್ಚೆಯಾಯಿತು ಎಂದು ಹೇಳಿದರು.
ಕೇರಳ ರಾಜ್ಯದಲ್ಲಿ ಜಾರಿಯಲ್ಲಿರುವ ಕಾರುಣ್ಯ ಬೆನೋವಲೆಂಟ್ ಅಂಡ್ ಮಾದರಿಯಲ್ಲಿ ರಾಜ್ಯದಲ್ಲಿ `ಅಣ್ಣಾ ಕಾರುಣ್ಯ ಆರೋಗ್ಯಯೋಜನೆ ' ಎಂಬಹೊಸ ಲಾಟರಿ ವ್ಯವಸ್ಥೆಯನ್ನು ರಾಜ್ಯ ಸರ್ಕಾರ ಜಾರಿಗೆ ತರಬೇಕೆಂಬ ಮಹಾನ್ `ಕಲ್ಯಾಣ' ಸಲಹೆಯನ್ನು ಯೋಜನಾ ಮಂಡಳಿ ಉಪಾಧ್ಯಕ್ಷ ಸಿ.ಎಂ.ಇಬ್ರಾಹಿಂ ಸರ್ಕಾರದ ಮುಂದೆ ಇಟ್ಟಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


