ಬಿಹಾರದ ಬಿಕ್ಕಟ್ಟು: ಗವರ್ನರ್ ಭೇಟಿ ಮಾಡಿದ ಜೆಡಿ(ಯು) ಶಾಸಕರು
ನಾಟಕೀಯ ಬೆಳವಣಿಗೆಯಲ್ಲಿ ಬಂಡಾಯ ಸಾರಿದ್ದ ಬಿಹಾರ ಸಿಎಂ ಜಿತನ್‌ರಾಂ ಮಾಂಝಿ ಅವರನ್ನು ವಜಾಗೊಳಿಸಿರುವ...

ಪಾಟ್ನಾ: ನಾಟಕೀಯ ಬೆಳವಣಿಗೆಯಲ್ಲಿ ಬಂಡಾಯ ಸಾರಿದ್ದ ಬಿಹಾರ ಸಿಎಂ ಜಿತನ್‌ರಾಂ ಮಾಂಝಿ ಅವರನ್ನು ವಜಾಗೊಳಿಸಿರುವ ಜೆಡಿಯು ಶಾಸಕಾಂಗ ಸಭೆ ನಿತೀಶ್ ಕುಮಾರ್ ಅವರನ್ನು ಶಾಸಕಾಂಗ ನಾಯಕನನ್ನಾಗಿ ಶನಿವಾರ ಆಯ್ಕೆ ಮಾಡಿತ್ತು.
ಇದೀಗ ತಮ್ಮ ಪಕ್ಷದಲ್ಲಿ ಬಿಕ್ಕಟ್ಟು ಉಂಟಾಗಲು ಬಿಜೆಪಿಯೇ ಕಾರಣ ಎಂದು ಜೆಡಿಯು ದೂರಿದ್ದು, ಗರ್ವನರ್ ಅಥವಾ ರಾಷ್ಟ್ರಪತಿಯನ್ನು ಭೇಟಿ ಮಾಡುವ ಮುನ್ನ ತಾವು 130 ಶಾಸಕರನ್ನು ಕರೆತಂದು ಬಹುಮತ ಸಾಬೀತುಪಡಿಸುವುದಾಗಿ ಹೇಳಿದೆ.
ಬಿಹಾರ ಮುಖ್ಯಮಂತ್ರಿಯಾಗಿದ್ದ ಜಿತನ್ ರಾಂ ಮಾಂಝು ಅವರು ಬಿಜೆಪಿ ಪರ ಕೆಲಸ ಮಾಡುತ್ತಿದ್ದು, ಅವರು ನೀತಿ ಆಯೋಗದ ಸಭೆಯಲ್ಲಿ ಭಾಗವಹಿಸಲು ಹಕ್ಕು ಇಲ್ಲ ಎಂದು ಜೆಡಿಯು ವಕ್ತಾರ ಕೆಸಿ ತ್ಯಾಗಿ ಹೇಳಿದ್ದಾರೆ.
ಭಾನುವಾರ ಜೆಡಿಯು ಶಾಸಕರು ಗವರ್ನರ್ ಕೇಸರಿನಾಥ್ ತ್ರಿಪಾಠಿ ಅವರನ್ನು ಭೇಟಿ ಮಾಡಿದ್ದು, ನಿತೀಶ್ ಕುಮಾರ್ ನೇತೃತ್ವದ ಸರ್ಕಾರ ರಚಿಸುತ್ತಿರುವ ಪ್ರಸ್ತಾಪದ ಬಗ್ಗೆ ಹೇಳಿದ್ದಾರೆ. ಆ ಭೇಟಿಯಲ್ಲಿ ಕಾಂಗ್ರೆಸ್, ಆರ್‌ಜೆಡಿ ನೇತಾರರು ಸೇರಿದಂತೆ ಸ್ವತಂತ್ರ ಅಭ್ಯರ್ಥಿಗಳು ಭಾಗಿಯಾಗಿದ್ದರು.
ಆದಾಗ್ಯೂ ಉಚ್ಛಾಟಿತ ಮುಖ್ಯಮಂತ್ರಿ ಮಾಂಝಿ ಅವರು ಇಂದು ಸಂಜೆ 5 ಗಂಟೆಗೆ ನವದೆಹಲಿಯಲ್ಲಿ ಪ್ರಧಾನಿ ನರೇಂದ್ರಮೋದಿ ಅವರನ್ನು ಭೇಟಿಯಾಗಲಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


