ದೆಹಲಿ ಚುನಾವಣೆ ಫಲಿತಾಂಶ: ಬಿಜೆಪಿಗೆ ಆಘಾತ; ಉತ್ತರಕ್ಕಾಗಿ ಹುಡುಕಾಟ
ಆಮ್ ಆದ್ಮಿ ಪಕ್ಷದ ಅಬ್ಬರಕ್ಕೆ ಧೂಳಿಪಟವಾಗಿರುವ ಭಾರತೀಯ ಜನತಾ ಪಕ್ಷಕ್ಕೆ ತೀವ್ರ ಆಘಾತವಾಗಿದ್ದು, ಉತ್ತರಕ್ಕಾಗಿ ಹುಡುಕಾಟ ನಡೆಸಿದೆ.

ನವದೆಹಲಿ: ಆಮ್ ಆದ್ಮಿ ಪಕ್ಷದ ಅಬ್ಬರಕ್ಕೆ ಧೂಳಿಪಟವಾಗಿರುವ ಭಾರತೀಯ ಜನತಾ ಪಕ್ಷಕ್ಕೆ ತೀವ್ರ ಆಘಾತವಾಗಿದ್ದು, ಉತ್ತರಕ್ಕಾಗಿ ಹುಡುಕಾಟ ನಡೆಸಿದೆ.
ಆಮ್ ಆದ್ಮಿ ಪಕ್ಷದ ಐತಿಹಾಸಿಕ ಗೆಲುವಿನ ಬಗ್ಗೆ ಬಿಜೆಪಿ ಕೇಂದ್ರ ಕಚೇರಿಯಲ್ಲಿ ಬಿಸಿ ಬಿಸಿ ಚರ್ಚೆ ನಡೆಯುತ್ತಿದ್ದು, ಎಎಪಿ ಕ್ಲೀನ್ ಸ್ವೀಪ್‌ಗೆ ಕಾಂಗ್ರೆಸ್‌ನ ದಶಕಗಳ ದುರಾಡಳಿತವೇ ಕಾರಣ ಎಂದು ಬಿಜೆಪಿ ಆರೋಪಿಸಿದೆ.
ಇನ್ನು ಕೊನೆ ಕ್ಷಣದಲ್ಲಿ ಕಿರಣ್ ಬೇಡಿ ಅವರನ್ನು ಪಕ್ಷಕ್ಕೆ ಕರೆತಂದು, ಅವರನ್ನು ಮುಖ್ಯಮಂತ್ರಿ ಅಭ್ಯರ್ಥಿ ಮಾಡಿದ್ದೇ ದೊಡ್ಡ ತಪ್ಪು ಎಂದು ಹೆಸರು ಹೇಳಲಿಚ್ಚಸದ ರಾಜ್ಯ ಬಿಜೆಪಿ ನಾಯಕರು ಆರೋಪಿಸಿದ್ದಾರೆ.
ಎಎಪಿ ಚಂದ್ರನನ್ನೇ ಧರೆಗಿಳಿಸುವುದಾಗಿ ಭರವಸೆ ನೀಡಿತ್ತು. ಆದರೂ ನಾವು ಎಚ್ಚೆತ್ತುಕೊಂಡು ಉತ್ತಮ ಭರವಸೆಗಳನ್ನು ನೀಡಲಿಲ್ಲ ಎಂದು ರಾಜ್ಯ ನಾಯಕರು ತಿಳಿಸಿದ್ದಾರೆ. ನಾವು ಸಹ ಉಚಿತ ವೈಫೈ, ಉಚಿತ ನೀರು ಹಾಗೂ ವಿದ್ಯುತ್‌ನಂತಹ ದೊಡ್ಡ ದೊಡ್ಡ ಭರವಸೆಗಳನ್ನು ಕೊಡಬೇಕಿತ್ತು ಎಂದು ಅವರು ಹೇಳಿದ್ದಾರೆ.
ನಾವು ಚುನಾವಣೆ ಫಲಿತಾಂಶದ ಕುರಿತು ಆತ್ಮಾವಲೋಕನ ಮಾಡಿಕೊಳ್ಳುತ್ತೇವೆ. ಕಾಂಗ್ರೆಸ್ ಮತ ಎಎಪಿ ಮತವಾಗಿ ಪರಿವರ್ತನೆಯಾಗಿದೆ ಎಂದು ಕೇಂದ್ರ ಪರಿಸರ ಸಚಿವ ಪ್ರಕಾಶ್ ಜಾವೇಡ್ಕರ್ ಅವರು ಹೇಳಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


