ಪ್ರಧಾನ ಸುದ್ದಿ

ಕೇಜ್ರಿವಾಲ್ ಪ್ರಮಾಣ ವಚನಕ್ಕೆ ಮೋದಿ, ಅಣ್ಣಾ ಹಜಾರೆ, ಕಿರಣ್ ಬೇಡಿಗೆ ಆಹ್ವಾನ

ನಿಯೋಜಿತ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರ ಪ್ರಮಾಣವಚನ ಸ್ವೀಕಾರ ಸಮಾರಂಭಕ್ಕೆ ಪ್ರಧಾನಿ ನರೇಂದ್ರ ಮೋದಿ, ಹಿರಿಯ ಸಾಮಾಜಿಕ...

ಕೇಜ್ರಿವಾಲ್ ಪ್ರಮಾಣ ವಚನಕ್ಕೆ ಮೋದಿ, ಅಣ್ಣಾ ಹಜಾರೆ, ಕಿರಣ್ ಬೇಡಿಗೆ ಆಹ್ವಾನ
ಅರವಿಂದ್ ಕೇಜ್ರಿವಾಲ್
Published On :

ನವದೆಹಲಿ: ನಿಯೋಜಿತ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರ ಪ್ರಮಾಣವಚನ ಸ್ವೀಕಾರ ಸಮಾರಂಭಕ್ಕೆ ಪ್ರಧಾನಿ ನರೇಂದ್ರ ಮೋದಿ, ಹಿರಿಯ ಸಾಮಾಜಿಕ ಹೋರಾಟಗಾರ ಅಣ್ಣಾ ಹಜಾರೆ, ದೆಹಲಿ ಮಾಜಿ ಮುಖ್ಯಮಂತ್ರಿ ಶೀಲಾ ದಿಕ್ಷಿತ್ ಹಾಗೂ ಬಿಜೆಪಿ ಮುಖ್ಯಮಂತ್ರಿ ಅಭ್ಯರ್ಥಿಯಾಗಿದ್ದ ಕಿರಣ್ ಬೇಡಿ ಅವರಿಗೆ ಆಹ್ವಾನ ನೀಡಲು ಆಮ್ ಆದ್ಮಿ ಪಕ್ಷ ನಿರ್ಧರಿಸಿದೆ.

ಫೆಬ್ರವರಿ 14ರಂದು ದೆಹಲಿಯ ರಾಮ್‌ಲೀಲಾ ಮೈದಾನದಲ್ಲಿ ಕೇಜ್ರಿವಾಲ್ ಅವರು ಎರಡನೇ ಬಾರಿ ದೆಹಲಿ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸುತ್ತಿದ್ದು, ಈ ಸಮಾರಂಭದಲ್ಲಿ ಮೋದಿ, ಸೇರಿದಂತೆ ಹಲವು ಗಣ್ಯರು ಭಾಗವಹಿಸುವ ಸಾಧ್ಯತೆ ಇದೆ.

ಪ್ರಮಾಣವಚನ ಸ್ವೀಕಾರ ಸಮಾರಂಭಕ್ಕೂ ಮುನ್ನ ಎಎಪಿ ಕೌಶಂಬಿಯಿಂದ ರಾಮ್‌ಲೀಲಾ ಮೈದಾನದವರೆಗೂ ರೋಡ್ ಶೋ ನಡೆಸಲಿದೆ. ಇನ್ನು ಉತ್ತರ ಪ್ರದೇಶ ಪೊಲೀಸರು ಕೌಶಂಬಿಯಲ್ಲಿರುವ ನಿಯೋಜಿತ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರ ನಿವಾಸಕ್ಕೆ ಭಾರ ಭದ್ರತೆ ಒದಗಿಸಿದ್ದಾರೆ.

ಈ ಮಧ್ಯೆ, ಹಿಂದೆ ಕೇಜ್ರಿವಾಲ್ ಸರ್ಕಾರದಲ್ಲಿ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆಯಾಗಿದ್ದ ರಾಖಿ ಬಿರ್ಲಾ ಅವರಿಗೆ ಈ ಬಾರಿ ಸಂಪುಟದಲ್ಲಿ ಸ್ಥಾನ ಸಿಗುವ ಸಾಧ್ಯತೆ ಕಡಿಮೆ ಎನ್ನಲಾಗುತ್ತಿದೆ. ಆದರೆ ಮನಿಶ್ ಸಿಸೋಡಿಯಾ, ಜರ್ನೈಲ್ ಸಿಂಗ್, ಗೋಪಾಲ್ ರೈ ಮತ್ತು ಆದರ್ಶ ಶಾಸ್ತ್ರಿ ಅವರಿಗೆ ಪ್ರಮುಖ ಖಾತೆಗಳನ್ನು ನೀಡುವ ಸಾಧ್ಯತೆ ಇದೆ ಎಂದು ಮೂಲಗಳು ತಿಳಿಸಿವೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.