ಸಂಪುಟದಲ್ಲಿ ಮಹಿಳೆಯರೆಲ್ಲಿ? ಟ್ವೀಟ್ ಮೂಲಕ ಅಸಮಧಾನ
ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರ ಮೇಲೆ ನಟಿ ಹುಮಾ ಖುರೇಷಿ ಅವರಿಗೆ ಅಪಾರ ಗೌರವ, ಆದರೆ ಅವರ ಸಂಪುಟದ ಬಗ್ಗೆ ಅವರಿಗೆ ಅಸಮಧಾನವಿದೆ.

ನವದೆಹಲಿ: ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರ ಮೇಲೆ ನಟಿ ಹುಮಾ ಖುರೇಷಿ ಅವರಿಗೆ ಅಪಾರ ಗೌರವ, ಆದರೆ ಅವರ ಸಂಪುಟದ ಬಗ್ಗೆ ಅವರಿಗೆ ಅಸಮಧಾನವಿದೆ.
ಇಂದು ರಾಮಲೀಲಾ ಮೈದಾನದಲ್ಲಿ ಅರವಿಂದ್ ಕೇಜ್ರಿವಾಲ್ ಅವರು ಪ್ರಮಾಣ ವಚನ ಸ್ವೀಕರಿಸಿದರು. ಇವರ ಜೊತೆ ಇನ್ನೂ ೬ ಸಚಿವರು ಪ್ರಮಾಣವಚನ ಸ್ವೀಕರಿಸಿದ್ದು ಅವರಲ್ಲಿ ಎಲ್ಲರೂ ಪುರುಷರೇ!
"ಅರವಿಂದ್ ಕೇಜ್ರಿವಾಲ್ ಅವರಿಗೆ ಬದಲಾವಣೆ ತರಲು ಈಗ ಹೆಚ್ಚಿನ ಅಧಿಕಾರ ಸಿಕ್ಕಿದೆ. ಒಳ್ಳೆಯ ಆಡಳಿತ ಮತ್ತು ದೆಹಲಿಯಲ್ಲಿ ಮಹಿಳೆಯರ ಸುರಕ್ಷತೆಯನ್ನು ಎದುರು ನೋಡುತ್ತಿದ್ದೇವೆ. ಆದರೆ ಅವರ ಸಂಪುಟದಲ್ಲಿ ಮಹಿಳಾ ಪ್ರತಿನಿಧಿತ್ವವೇ ಇಲ್ಲ" ಎಂದು ನಟಿ ಹುಮಾ ಖುರೇಶಿ ಟ್ವೀಟ್ ಮೂಲಕ ಅಸಮಧಾನ ವ್ಯಕ್ತಪಡಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


