ಪಾಕ್‌ಗೆ ಸೋಲು: ಆಟಗಾರರಿಗೆ ಅಣಕು ಶವಸಂಸ್ಕಾರ ಮಾಡಿದ ಪಾಕ್ ಅಭಿಮಾನಿಗಳು
ವಿಶ್ವಕಪ್ ಕ್ರಿಕೆಟ್ ಪಂದ್ಯಾಟದಲ್ಲಿಂದು ವೆಸ್ಟ್ ಇಂಡೀಸ್ ವಿರುದ್ಧ ಹೀನಾಯ ಸೋಲು ಅನುಭವಿಸಿದ ಪಾಕಿಸ್ತಾನ ತಂಡದ ವಿರುದ್ಧ...

ಮುಲ್ತಾನ್: ವಿಶ್ವಕಪ್ ಕ್ರಿಕೆಟ್ ಪಂದ್ಯಾಟದಲ್ಲಿಂದು ವೆಸ್ಟ್ ಇಂಡೀಸ್ ವಿರುದ್ಧ ಹೀನಾಯ ಸೋಲು ಅನುಭವಿಸಿದ ಪಾಕಿಸ್ತಾನ ತಂಡದ ವಿರುದ್ಧ ಪಾಕ್ ಅಭಿಮಾನಿಗಳು ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ಕಳೆದ ಭಾನುವಾರ ಭಾರತದ ವಿರುದ್ಧ ಪಾಕ್ ಪರಾಭವಗೊಂಡಾಗ ಬೇಸರಗೊಂಡ ಪಾಕ್ ಅಭಿಮಾನಿಗಳು ಟೀವಿಗಳನ್ನು ಒಡೆದು ಹಾಕಿ ಆಕ್ರೋಶ ವ್ಯಕ್ತಪಡಿಸಿದ್ದರು. ಆದರೆ ಇಂದು ಮುಲ್ತಾನ್‌ನಲ್ಲಿ ಪಾಕ್ ಅಭಿಮಾನಿಗಳು ಪಾಕ್ ತಂಡದ ಆಟಗಾರರ ಅಣಕು ಶವಸಂಸ್ಕಾರ ಮಾಡಿ ಆಕ್ರೋಶ ವ್ಯಕ್ತ ಪಡಿಸಿದ್ದಾರೆ.
ಶವಪೆಟ್ಟಿಗೆಯ ಮೇಲೆ ಬ್ಯಾಟ್ ಗಳನ್ನಿರಿಸಿ ಅಂತಿಮ ಯಾತ್ರೆಯ ಅಣಕು ಪ್ರದರ್ಶನ ಮಾಡಿ ತಮ್ಮೊಳಗಿನ ಸಿಟ್ಟನ್ನು ತೋರಿಸಿದ್ದಾರೆ.
ಇಂದು ನಡೆದ ಪಂದ್ಯದಲ್ಲಿ ವೆಸ್ಟ್ ಇಂಡೀಸ್ ವಿರುದ್ಧ ಪಾಕಿಸ್ತಾನ 150 ರನ್ ಗಳ ಸೋಲು ಅನುಭವಿಸಿತ್ತು.
1992ರ ವಿಶ್ವಕಪ್ ವಿಜೇತ ತಂಡವಾದ ಪಾಕಿಸ್ತಾನ ಇದೀಗ ಬಿ ಗುಂಪಿನ ತಂಡಗಳಲ್ಲಿ ಪಾಯಿಂಟ್ ಆಧಾರದಲ್ಲಿ ಕೊನೆಯ ಸ್ಥಾನದಲ್ಲಿದ್ದು, ಮಾರ್ಚ್ 1 ರಂದು ಜಿಂಬಾಬ್ವೆ ವಿರುದ್ಧ ಬ್ರಿಸ್ಬೇನ್‌ನಲ್ಲಿ ಸೆಣಸಾಡಲಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


