ಪಾಪ್ಯುಲರ್ ಫ್ರಂಟ್ ಗೆ ನಿಷೇಧ ಇಲ್ಲ, ಮುಂದುವರೆದ ಶಿವಮೊಗ್ಗ ಗಲಭೆ ತನಿಖೆ
ಶಿವಮೊಗ್ಗದಲ್ಲಿ ನಡೆದ ಇತ್ತೀಚಿನ ಗಲಭೆಗೆ ಕಾರಣ ಕಿಡಿಗೇಡಿಗಳು ಎಂದಿರುವ ಗೃಹ ಸಚಿವ ಕೆ ಜೆ ಜಾರ್ಜ್, ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ

ಬೆಂಗಳೂರು: ಶಿವಮೊಗ್ಗದಲ್ಲಿ ನಡೆದ ಇತ್ತೀಚಿನ ಗಲಭೆಗೆ ಕಾರಣ ಕಿಡಿಗೇಡಿಗಳು ಎಂದಿರುವ ಗೃಹ ಸಚಿವ ಕೆ ಜೆ ಜಾರ್ಜ್, ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ ಸಂಸ್ಥೆಯನ್ನು ನಿಷೇಧಿಸುವುದನ್ನು ಅಲ್ಲಗೆಳೆದಿದ್ದಾರೆ.
ಶುಕ್ರವಾರ ವರದಿಗಾರರೊಂದಿಗೆ ಮಾತನಾಡಿದ ಜಾರ್ಜ್, ಯಾವುದೇ ಸಂಸ್ಥೆ ಅಥವಾ ವ್ಯಕ್ತಿ ಶಿವಮೊಗ್ಗದಲ್ಲಿ ಶಾಂತಿ ಮತ್ತು ಸಾಮರಸ್ಯವನ್ನು ಕಡದುವವರಿಂದ ದೂರ ಉಳಿಯುವಂತೆ ತಾಕೀತು ಮಾಡಿದ್ದಾರೆ. ಪರಿಸ್ಥಿತಿಯನ್ನು ಹದ್ದುಬಸ್ತಿ ಗೆ ತರಲು ಶ್ರಮಿಸಿದ ಪೋಲಿಸರನ್ನು ಸಚಿವ ಅಭಿನಂದಿಸಿದ್ದಾರೆ. ಯಾವುದಾದರೂ ಹಿಂದೂ ಸಂಘಟನೆಗಳು ಈ ಕೋಮು ಗಲಭೆಯ ಹಿಂದೆ ಇದ್ದಾರೆಯೇ ಎಂಬ ಪ್ರಶ್ನೆಗೆ ಉತ್ತರ ನೀಡಲು ನಿರಾಕರಿಸಿದ ಜಾರ್ಜ್ "ಪೊಲೀಸರು ಪ್ರಕರಣವನ್ನು ತನಿಖೆ ನಡೆಸುತ್ತಿದ್ದಾರೆ" ಎಂದಷ್ಟೇ ಹೇಳಿದ್ದಾರೆ.
ವಿ ಎಚ್ ಪಿ ಮತ್ತು ಭಜರಂಗದಳದ ಕೈವಾಡ ಇದೆಯೇ ಎಂಬ ಪ್ರಶ್ನೆಗೆ "ಉತ್ತರ ಪ್ರಶ್ನೆಯಲ್ಲೇ ಇದೆ, ನಾನು ಇದರ ಬಗ್ಗೆ ಪ್ರತಿಕ್ರಿಯಿಸುವ ಅಗತ್ಯವಿಲ್ಲ" ಎಂದಿದ್ದಾರೆ.
ಈ ಘಟನೆ ದುರದೃಷ್ಟಕರ ಎಂದಿರುವ ಅವರು, ಎಲ್ಲ ಸಮುದಾಯದ ಜೀವ ಮತ್ತು ಆಸ್ತಿಯನ್ನು ರಕ್ಷಿಸುವುದು ಸರ್ಕಾರ ಆದ್ಯ ಕರ್ತವ್ಯ ಎಂದಿದ್ದಾರೆ.
ಹಿಂದು ವಿರೋಧಿ ನಿಲುವನ್ನು ಕಾಂಗ್ರೆಸ್ ಸರ್ಕಾರ ಹೊಂದಿದೆ ಎಂಬ ಆರೋಪವನ್ನು ನಿರಾಕರಿಸಿರುವ ಅವರು "ನಮ್ಮ ಪಕ್ಷ ಹಿಂದು ವಿರೋಧಿ ಎಂದು ಹೇಳುವುದು ಸರಿಯಲ್ಲ. ನಮ್ಮ ಮುಖ್ಯಮಂತ್ರಿ ಮತ್ತು ಅವರ ಹಲವು ಸಹೋದ್ಯೋಗಿಗಳು ಹಿಂದುಗಳು" ಎಂದಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


