ಪ್ರಧಾನ ಸುದ್ದಿ

ರಾಹುಲ್ ಬಜೆಟ್ ಅಧಿವೇಶನದಲ್ಲಿ ಉಪಸ್ಥಿತರಿದ್ದರೆ ಚೆನ್ನಾಗಿತ್ತು: ಶಶಿ ತರೂರ್

ಬಜೆಟ್ ಅಧಿವೇಶನದಲ್ಲಿ ರಾಹುಲ್ ಗಾಂಧಿ ಅವರು ಉಪಸ್ಥಿತರಿದ್ದರೆ ಚೆನ್ನಾಗಿತ್ತು ಎಂದು ಹಿರಿಯ ಕಾಂಗ್ರೆಸ್ ನಾಯಕ ಶಶಿ ತರೂರ್

ರಾಹುಲ್ ಬಜೆಟ್ ಅಧಿವೇಶನದಲ್ಲಿ ಉಪಸ್ಥಿತರಿದ್ದರೆ ಚೆನ್ನಾಗಿತ್ತು: ಶಶಿ ತರೂರ್
ಶಶಿ ತರೂರ್
Published On :

ನವದೆಹಲಿ: ಬಜೆಟ್ ಅಧಿವೇಶನದಲ್ಲಿ ರಾಹುಲ್ ಗಾಂಧಿ ಅವರು ಉಪಸ್ಥಿತರಿದ್ದರೆ ಚೆನ್ನಾಗಿತ್ತು ಎಂದು ಹಿರಿಯ ಕಾಂಗ್ರೆಸ್ ನಾಯಕ ಶಶಿ ತರೂರ್ ಹೇಳಿದ್ದಾರೆ. ಆದರೆ ಕಾಂಗ್ರೆಸ್ ಪಕ್ಷದ ಉಪಾಧ್ಯಕ್ಷ ಬದಲಾವಣೆಯ ಸೂತ್ರದೊಂದಿಗೆ ತಮ್ಮ ವಿಶ್ರಾಮದ ನಂತರ ಪುಟಿದು ಬರಲಿದ್ದಾರೆ ಎಂಬ ಆತ್ಮವಿಶ್ವಾಸ ವ್ಯಕ್ತ ಪಡಿಸಿದ್ದಾರೆ.

ತಮ್ಮ ಹೊಸ ಪುಸ್ತಕ 'ಇಂಡಿಯಾ ಶಾಸ್ತ್ರ' ಬಿಡುಗಡೆ ವೇಳೆಯಲ್ಲಿ ಪತ್ರಕರ್ತ ರಾಜದೀಪ್ ಸರ್ದೇಸಾಯಿ ಜೊತೆ ಅವರು ಮಾತನಾಡಿದರು.
 
ಪ್ರಧಾನಿ ಮೋದಿ ಅವರನ್ನು ಹೊಗಳಿ ವಿವಾದ ಸೃಷ್ಟಿಸಿ, ಕಾಂಗ್ರೆಸ್ ಪಕ್ಷದ ಕೆಂಗಣ್ಣಿಗೆ ಗುರಿಯಾಗಿದ್ದ ತರೂರ್ ಪಕ್ಷದ ಅಧಿಕೃತ ವಕ್ತಾರ ಸ್ಥಾನವನ್ನು ಬಿಟ್ಟುಕೊಡಬೇಕಾಗಿತ್ತು.

ಆದರೆ ಪುಸ್ತಕದಲ್ಲಿ ಪ್ರಧಾನಿ ಮೋದಿ ಅವರ ಭಾಷಣ ಮತ್ತು ಕೃತಿ ಇವುಗಳ ನಡುವಿನ ವೈರುಧ್ಯಗಳನ್ನು ಸೆರೆ ಹಿಡಿದಿದ್ದಾರೆ ಎನ್ನಲಾಗಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.