ಉಗ್ರ ಲಖ್ವಿಗೆ ಜೈಲೇ ಗತಿ
ಮುಂಬೈ ಸ್ಫೋಟ ದಾಳಿಯ ರೂವಾರಿ ಲಷ್ಕರ್ ಎ ತೊಯ್ಬಾ ಉಗ್ರ ಸಂಘಟನೆಯ ಕಮಾಂಡರ್ ಝಕಿ ಉರ್ ರೆಹಮಾನ್ ಲಖ್ವಿಗೆ ...

Published On :
ಇಸ್ಲಾಮಾಬಾದ್: ಮುಂಬೈ ಸ್ಫೋಟ ದಾಳಿಯ ರೂವಾರಿ ಲಷ್ಕರ್ ಎ ತೊಯ್ಬಾ ಉಗ್ರ ಸಂಘಟನೆಯ ಕಮಾಂಡರ್ ಝಕಿ ಉರ್ ರೆಹಮಾನ್ ಲಖ್ವಿಗೆ ಇಸ್ಲಾಮಾಬಾದ್ ಹೈಕೋರ್ಟ್ ನೀಡಿರುವ ಜಾಮೀನಿಗೆ ಪಾಕಿಸ್ತಾನ ಸುಪ್ರೀಂ ಕೋರ್ಟ್ ಬುಧವಾರ ತಡೆಯಾಜ್ಞೆ ನೀಡಿದೆ. ಈ ಆದೇಶದಿಂದಾಗಿ ಲಖ್ವಿಗೆ ಜೈಲುವಾಸ ಮುಂದುವರಿಸುವಂತಾಗಿದೆ.
ಮುಂಬೈ ದಾಳಿ ಮತ್ತು ಕಾನೂನು ವ್ಯವಸ್ಥೆಗೆ ಧಕ್ಕೆ ತಂದ ಪ್ರಕರಣಗಳಲ್ಲಿ ಕಳೆದ ತಿಂಗಳು ಲಖ್ವಿಗೆ ಜಾಮೀನು ಲಭಿಸಿತ್ತು. ಇನ್ನೇನು ಬಿಡುಗಡೆ ಹೊಂದಬೇಕು ಎನ್ನುವಷ್ಟರಲ್ಲಿ 6 ವರ್ಷ ಹಿಂದಿನ ಅಪಹರಣ ಪ್ರಕರಣಕ್ಕೆ ಮರುಜೀವ ಕೊಟ್ಟು ಪೊಲೀಸರು ಆತನನ್ನು ಬಂಧಿಸಿದ್ದರು.
ಇದಾದನಂತರ ಪಾಕ್ ಸರ್ಕಾರದ ಆದೇಶವನ್ನು ಹೈಕೋರ್ಟ್ ಅಮಾನತು ಮಾಡಿ ಆದೇಶ ನೀಡಿದ್ದು, ಇದನ್ನು ಪ್ರಶ್ನಿಸಿ ಪಾಕ್ ಸರ್ಕಾರ ಸುಪ್ರೀಂ ಕೋರ್ಟ್‌ನ ಮೆಟ್ಟಲೇರಿತ್ತು.
ಲಖ್ವಿಯನ್ನು ಶಾಲೀಮಾರ್ ಪೊಲೀಸ್ ಠಾಣೆಯಲ್ಲಿರಿಸಲಾಗಿದ್ದು, ಮಂಗಳವಾರ ಆತನನ್ನು ನ್ಯಾಯಾಂಗ ಬಂಧನಕ್ಕೊಳಪಡಿಸಿ ಅಡಿಲಾ ಜೈಲಿಗಟ್ಟಲಾಗಿತ್ತು. ಕಳೆದ 5 ವರ್ಷಗಳಿಂದ ಲಖ್ವಿ ಅಡಿಲಾ ಜೈಲಿನಲ್ಲೇ ಬಂಧಿತನಾಗಿದ್ದಾನೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
supreme courtHigh CourtZaki-ur-Rehman LakhviMumbai terror attackಝಕಿ ಉರ್ ರೆಹಮಾನ್ ಲಖ್ವಿ ಲಷ್ಕರ್ ಎ ತೊಯ್ಬಾ ಉಗ್ರ ಸಂಘಟನೆಜೈಲುವಾಸ
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


