ಪ್ರಧಾನ ಸುದ್ದಿ

ಬಿಜೆಪಿಗೆ ಪಾಸಿಟಿವ್ ಅಜೆಂಡಾ ಇಲ್ಲ: ಕೇಜ್ರಿವಾಲ್

ಪ್ರಧಾನಿ ನರೇಂದ್ರ ಮೋದಿ ಆಪ್ ವಿರುದ್ಧ ಟೀಕಾ ಪ್ರಹಾರ ಮಾಡಿದ್ದಕ್ಕೆ ತೀಕ್ಷ್ಣ ಪ್ರತಿಕ್ರಿಯೆ ನೀಡಿರುವ...

ಬಿಜೆಪಿಗೆ ಪಾಸಿಟಿವ್ ಅಜೆಂಡಾ ಇಲ್ಲ: ಕೇಜ್ರಿವಾಲ್
ಅರವಿಂದ್ ಕೇಜ್ರಿವಾಲ್
Published On :

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಆಪ್ ವಿರುದ್ಧ ಟೀಕಾ ಪ್ರಹಾರ ಮಾಡಿದ್ದಕ್ಕೆ ತೀಕ್ಷ್ಣ ಪ್ರತಿಕ್ರಿಯೆ ನೀಡಿರುವ ಆಮ್ ಆದ್ಮಿ ಪಕ್ಷದ ನಾಯಕ ಅರವಿಂದ್ ಕೇಜ್ರಿವಾಲ್ ಬಿಜೆಪಿಗೆ ನಡುಕ ಇದೆ ಎಂದಿದ್ದಾರೆ.

ಇವತ್ತಿನ ರ್ಯಾಲಿಯಲ್ಲಿ ಬಿಜೆಪಿ ನಾಯಕರನ್ನು ನೋಡಿದರೆ ಅವರ ಪಕ್ಷಕ್ಕೆ ನಡುಕವಿದೆ ಎಂಬುದು ಸ್ಪಷ್ಟವಾಗಿ ಗೊತ್ತಾಗುತ್ತಿದೆ. ಅದೇ ವೇಳೆ ದೆಹಲಿಗಾಗಿ ಬಿಜೆಪಿಯಲ್ಲಿ ಪಾಸಿಟಿವ್ ಅಜೆಂಡಾ ಯಾವುದೂ ಇಲ್ಲ ಎಂದು ಕೇಜ್ರಿವಾಲ್ ಹೇಳಿದ್ದಾರೆ.

ಬಿಜೆಪಿ ಸರ್ಕಾರ ಯು-ಟರ್ನ್ ಸರ್ಕಾರ ಎಂದು ಆರೋಪಿಸಿದ ಕೇಜ್ರಿವಾಲ್ ಕೇಂದ್ರದಲ್ಲಿ ಅಧಿಕಾರಕ್ಕೆ ಬರುವ ಮುನ್ನ ಬಿಜೆಪಿ ಹಲವಾರು ಭರವಸೆಗಳನ್ನು ನೀಡಿತ್ತು. ಬಿಜೆಪಿಯವರು ಬರೀ ಭರವಸೆಗಳನ್ನು ನೀಡುತ್ತಿದ್ದಾರೆ. ಜನರೆಲ್ಲರೂ ಬಿಜೆಪಿಯದ್ದು ಯು  ಟರ್ನ್ ಸರ್ಕಾರ ಎಂದು ಹೇಳುತ್ತಾರೆ. ಒಂದು ವೇಳೆ ಎರಡು ತಿಂಗಳಲ್ಲಿ ಹೊಸ ಚುನಾವಣೆ ಬಂದರೆ, ಆವಾಗಲೂ ಬಿಜೆಪಿ ಹೊಸ ಭರವಸೆಗಳನ್ನು ನೀಡಿ ಹಳೆಯದನ್ನು ಮರೆತು ಬಿಡುತ್ತದೆ ಎಂದಿದ್ದಾರೆ.

ಬಿಜೆಪಿಯವರು ನನ್ನನ್ನು ಸುಳ್ಳುಗಾರ, ಅರಾಜಕತಾವಾದಿ ಎಂದು ಕರೆದರು. ಇದು ಅವರ ಮಟ್ಟವನ್ನು ತೋರಿಸುತ್ತದೆ. ನಾವೆಂದೂ ಇಂಥಾ  ಪದಗಳನ್ನು ಬಳಸಿಲ್ಲ ಎಂದು ಕೇಜ್ರಿವಾಲ್ ಮೋದಿಯವರ ಟೀಕೆಗೆ  ಮರುತ್ತರ ನೀಡಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.