ಜನವರಿ ೨೫ ರಿಂದ ೨೭ರವರೆಗೆ ಒಬಾಮಾ ಭಾರತ ಪ್ರವಾಸ
ಅಮೇರಿಕಾ ರಾಷ್ಟ್ರಾಧ್ಯಕ್ಷ ಬರಾಕ್ ಒಬಾಮಾ ಜನವರಿ ೨೫ ರಿಂದ ೨೭ ರವರೆಗೆ

ನವದೆಹಲಿ: ಅಮೇರಿಕಾ ರಾಷ್ಟ್ರಾಧ್ಯಕ್ಷ ಬರಾಕ್ ಒಬಾಮಾ ಜನವರಿ ೨೫ ರಿಂದ ೨೭ ರವರೆಗೆ ಭಾರತ ಪ್ರವಾಸ ಮಾಡಲಿದ್ದಾರೆ ಎಂದು ಬುಧವಾರ ಮೂಲಗಳು ತಿಳಿಸಿವೆ.
ದೆಹಲಿಯಲ್ಲಿ ನಡೆಯಲಿರುವ ಗಣರಾಜ್ಯೋತ್ಸವ ಸಮಾರಂಭಕ್ಕೆ ಒಬಾಮಾ ಮುಖ್ಯ ಅಥಿತಿಯಾಗಿರುತ್ತಾರೆ ಹಾಗೂ ಆಗ್ರಾದ ತಾಜ್ ಮಹಲ್ ಗೆ ಕೂಡ ಭೇಟಿ ನೀಡಲಿದ್ದಾರೆ ಎಂದು ತಿಳಿದುಬಂದಿದೆ.
ಈ ಭೇಟಿಯ ವೇಳೆಯಲ್ಲಿ ಒಬಾಮ ಅವರ ಪತ್ನಿ ಮಿಶೆಲ್ ಜೊತೆಗಿರುತ್ತಾರೆ ಎಂದು ಮೂಲಗಳು ತಿಳಿಸಿವೆ.
ಈ ಭೇಟಿಗೂ ಮುನ್ನ ರಾಷ್ಟ್ರದ ರಾಜಧಾನಿಯಲ್ಲಿ ಭದ್ರತೆಯನ್ನು ಹೆಚ್ಚಿಸಲಾಗಿದೆ. ಅಮೇರಿಕಾದ ಗುಪ್ತಚರ ಇಲಾಖೆಯ ಒಂದು ತಂಡ ಕೂಡ ಆಗಲೇ ರಾಜಧಾನಿಯಲ್ಲಿ ಬೀಡುಬಿಟ್ಟಿದ್ದು, ಭಾರತೀಯ ಗುಪ್ತಚರದಳದೊಂದಿಗೆ ಮಾತುಕತೆ ನಡೆಸಿದೆ. ಶುಕ್ರವಾರ ಎರಡೂ ದೇಶದ ಭದ್ರತಾ ಪಡೆಗಳ ಮತ್ತೊಂದು ಸುತ್ತಿನ ಮಾತುಕತೆ ನಡೆಯಲಿದ್ದು, ಅಂದೆ ಒಬಾಮ ಪ್ರವಾಸದ ಅಂತಿಮ ವಿವರಗಳು ಚರ್ಚೆಯಾಗಲಿದೆ ಎಂದು ತಿಳಿದುಬಂದಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


