ಕೇಜ್ರಿವಾಲ್ ವಿರುದ್ಧ ನೇರ ಸ್ಪರ್ಧೆಗೆ ಸಿದ್ಧ: ಕಿರಣ್ ಬೇಡಿ
ಜೀವನದಲ್ಲಿ ಯಾವುದೇ ಸವಾಲುಗಳನ್ನು ಎದುರಿಸಲು ನಾನು ಸಿದ್ಧ ಎಂದು ನಿವೃತ್ತ ಐಪಿಎಸ್ ಅಧಿಕಾರಿ ಹಾಗೂ ನಿನ್ನೆಯಷ್ಟೆ ಬಿಜೆಪಿ ಸೇರ್ಪಡೆಯಾಗಿರುವ ಕಿರಣ್ ಬೇಡಿ ಅವರು ಶುಕ್ರವಾರ ಹೇಳಿದ್ದಾರೆ.

ನವದೆಹಲಿ: ಜೀವನದಲ್ಲಿ ಯಾವುದೇ ಸವಾಲುಗಳನ್ನು ಎದುರಿಸಲು ನಾನು ಸಿದ್ಧ ಎಂದು ನಿವೃತ್ತ ಐಪಿಎಸ್ ಅಧಿಕಾರಿ ಹಾಗೂ ನಿನ್ನೆಯಷ್ಟೆ ಬಿಜೆಪಿ ಸೇರ್ಪಡೆಯಾಗಿರುವ ಕಿರಣ್ ಬೇಡಿ ಅವರು ಶುಕ್ರವಾರ ಹೇಳಿದ್ದಾರೆ.
ನವದೆಹಲಿ ವಿಧಾನಸಭಾ ಕ್ಷೇತ್ರದಲ್ಲಿ ಆಮ್ ಆದ್ಮಿ ಪಕ್ಷದ ಮುಖ್ಯಸ್ಥ ಅರವಿಂದ್ ಕೇಜ್ರಿವಾಲ್ ಅವರನ್ನು ನೇರವಾಗಿ ಎದುರಿಸಲು ನಾನು ಸಿದ್ಧ. ನಾನು ಸೋಲಿನ ಬಗ್ಗೆ ಚಿಂತಿಸುವುದಿಲ್ಲ ಎಂದು ಕಿರಣ್ ಬೇಡಿ ಅವರು ಇಂದು ಮಾಧ್ಯಮಕ್ಕೆ ತಿಳಿಸಿದ್ದಾರೆ.
2011ರವರೆಗೂ ಕೇಂದ್ರ ಸರ್ಕಾರದ ವಿರುದ್ಧದ ಭ್ರಷ್ಟಾಚಾರ ವಿರೋಧಿ ಅಂದೋಲನದಲ್ಲಿ ಕಿರಣ್ ಬೇಡಿ ಮತ್ತು ಅರವಿಂದ್ ಕೇಜ್ರಿವಾಲ್ ಜತೆಯಾಗಿದ್ದರು. ಆದರೆ 2012ರಲ್ಲಿ ಕೇಜ್ರಿವಾಲ್ ಅವರು ರಾಜಕೀಯ ಪಕ್ಷ ಸ್ಥಾಪಿಸಿದ ನಂತರ ಕಿರಣ್ ಬೇಡಿ ಕೆಜ್ರಿವಾಲ್‌ರಿಂದ ದೂರವಾಗಿದ್ದರು. ಇದೀಗ ಕಿರಣ್ ಬೇಡಿ ಸಹ ರಾಜಕೀಯಕ್ಕೆ ಎಂಟ್ರಿಕೊಟ್ಟಿದ್ದು, ತಮ್ಮ ಹಳೆಯ ಸ್ನೇಹಿತನ ವಿರುದ್ಧವೇ ಚುನಾವಣೆಗೆ ಸ್ಪರ್ಧಿಸಲು ಮುಂದಾಗಿದ್ದಾರೆ.
ಈ ಮಧ್ಯೆ, ಕೇಜ್ರಿವಾಲ್ ವಿರುದ್ಧ ಕಿರಣ್ ಬೇಡಿ ಅವರನ್ನೇ ಮುಖ್ಯಮಂತ್ರಿ ಅಭ್ಯರ್ಥಿಯಾಗಿ ಬಿಜೆಪಿ ಘೋಷಿಸುವ ಸಾಧ್ಯತೆ. ಆದರೆ ಈ ಬಗ್ಗೆ ಪ್ರತಿಕ್ರಿಯಿಸಿರುವ ಕಿರಣ್ ಬೇಡಿ, ಆ ಬಗ್ಗೆ ಪಕ್ಷ ನಿರ್ಧಾರ ತೆಗೆದುಕೊಳ್ಳಲಿದೆ ಎಂದಿದ್ದಾರೆ.
ಗುರುವಾರ ನವದೆಹಲಿಯಲ್ಲಿರುವ ಬಿಜೆಪಿ ಪ್ರಧಾನ ಕಚೇರಿಯಲ್ಲಿ ಪಕ್ಷದ ರಾಷ್ಟ್ರ ಅಧ್ಯಕ್ಷ ಅಮಿತ್ ಶಾ ಹಾಗೂ ಕೇಂದ್ರ ವಿತ್ತ ಸಚಿವ ಅರುಣ್ ಜೇಟ್ಲಿ ಅವರ ಸಮ್ಮುಖದಲ್ಲಿ ಕಿರಣ್ ಬೇಡಿ ಬಿಜೆಪಿಗೆ ಸೇರ್ಪಡೆಗೊಂಡಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


