ಪ್ರಧಾನ ಸುದ್ದಿ

ನಾನು ಒಂದೇ ಒಂದು ಗುಂಟೆ ಜಾಗ ಡಿನೋಟಿಫಿಕೇಶನ್ ಮಾಡಿಲ್ಲ: ಸಿಎಂ

ನನ್ನ ಅಧಿಕಾರವಧಿಯಲ್ಲಿ ಒಂದೇ ಒಂದು ಗುಂಟೆ ಜಮೀನು ಸಹ ಡಿನೋಟಿಫಿಕೇಶನ್ ಆಗಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಶನಿವಾರ ಹೇಳಿದ್ದಾರೆ.

ನಾನು ಒಂದೇ ಒಂದು ಗುಂಟೆ ಜಾಗ ಡಿನೋಟಿಫಿಕೇಶನ್ ಮಾಡಿಲ್ಲ: ಸಿಎಂ
ಸಿದ್ದರಾಮಯ್ಯ
Published On :

ಮೈಸೂರು: ನನ್ನ ಅಧಿಕಾರವಧಿಯಲ್ಲಿ ಒಂದೇ ಒಂದು ಗುಂಟೆ ಜಮೀನು ಸಹ ಡಿನೋಟಿಫಿಕೇಶನ್ ಆಗಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಶನಿವಾರ ಹೇಳಿದ್ದಾರೆ.

ಅರ್ಕಾವತಿ ಡಿನೋಟಿಫಿಕೇಶನ್ ಪ್ರಕರಣ ಕುರಿತು ವರದಿಗಾರರ ಪ್ರಶ್ನೆಗೆ ಉತ್ತರಿಸಿದ ಸಿಎಂ, ಅರ್ಕಾವತಿ ಇಸ್ ಎ ರಬ್ಬೀಶ್... ಅರ್ಕಾವತಿ ಬಡಾವಣೆ ಡಿನೋಟಿಫಿಕೇಶನ್ ಬಿಜೆಪಿ ಸರ್ಕಾರದ ಅವಧಿಯಲ್ಲಿ ಆಗಿದೆ. ನಾನು ಬಂದ ಬಳಿಕ ಒಂದೇ ಒಂದು ಗುಂಟೆ ಜಮೀನು ಡಿನೋಟಿಫಿಕೇಶನ್ ಮಾಡಿಲ್ಲ. ಈ ಪ್ರಕರಣದ ಕುರಿತು ತನಿಖೆಯಾದರೆ, ಸಿಕ್ಕಿ ಬೀಳೋದು ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪನವರು ಎಂದು ಹೇಳಿದ್ದಾರೆ.

ಯಡಿಯೂರಪ್ಪನವರು ನಿನ್ನೆಯಷ್ಟೇ ಸಿಎಂ ವಿರುದ್ಧ ಕ್ರಮ ತೆಗೆದುಕೊಳ್ಳುವಂತೆ ಕೋರಿ ಶೀಘ್ರವೇ ರಾಜ್ಯಪಾಲರಿಗೆ ಮನವಿ ಸಲ್ಲಿಸಲಾಗುವುದು ಎಂದು ಹೇಳಿದ್ದರು. ಇದಕ್ಕೆ ಇಂದು ತಿರುಗೇಟು ನೀಡಿರುವ ಸಿಎಂ, ಅರ್ಕಾವತಿ ಡಿನೋಟಿಫಿಕೇಶನ್ ಪ್ರಕರಣದಲ್ಲಿ ನೀವು ಪ್ರಾಮಾಣಿಕರಾಗಿದ್ದರೆ ಸಾಬೀತುಪಡಿಸಿ ಎಂದು ಸವಾಲು ಹಾಕಿದ್ದಾರೆ. ಅಲ್ಲದೆ ಅರ್ಕಾವತಿ ಅಕ್ರಮದ ಆರೋಪವನ್ನು ನನ್ನ ಮೇಲೆ ಹೊರಿಸುವ ಮೂಲಕ ಬಿಜೆಪಿ ರಾಜಕೀಯ ಮಾಡುತ್ತಿದೆ ಎಂದು ಆರೋಪಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.