ಪ್ರಧಾನ ಸುದ್ದಿ

ಸತೀಶ್ ಉಪಾಧ್ಯಾಯ ಬೆಂಬಲಿಗರಿಂದ ಬಿಜೆಪಿ ಪಕ್ಷದ ಕಚೇರಿ ಎದುರು ಪ್ರತಿಭಟನೆ

ದೆಹಲಿ ವಿಧಾನಸಭಾ ಚುನಾವಣೆಯ ಅಭ್ಯರ್ಥಿ ಪಟ್ಟಿಯಲ್ಲಿ ದೆಹಲಿ ಬಿಜೆಪಿ ಅಧ್ಯಕ್ಷ ಸತೀಶ್ ಉಪಾಧ್ಯಾಯ ಅವರ...

ಸತೀಶ್ ಉಪಾಧ್ಯಾಯ ಬೆಂಬಲಿಗರಿಂದ ಬಿಜೆಪಿ ಪಕ್ಷದ ಕಚೇರಿ ಎದುರು ಪ್ರತಿಭಟನೆ
ಸಾಂದರ್ಭಿಕ ಚಿತ್ರ
Published On :

ನವದೆಹಲಿ: ದೆಹಲಿ ವಿಧಾನಸಭಾ ಚುನಾವಣೆಯ ಅಭ್ಯರ್ಥಿ ಪಟ್ಟಿಯಲ್ಲಿ ದೆಹಲಿ ಬಿಜೆಪಿ ಅಧ್ಯಕ್ಷ ಸತೀಶ್ ಉಪಾಧ್ಯಾಯ ಅವರ ಹೆಸರು ಇಲ್ಲದಿರುವುದು ಅವರ ಬೆಂಬಲಿಗರಿಗೆ ಬೇಸರ ತರಿಸಿದೆ. ಇದರಿಂದ ಕುಪಿತಗೊಂಡಿರುವ ಬೆಂಬಲಿಗರು ಮಂಗಳವಾರ ಸಂಜೆ ಪಕ್ಷದ ಪಂತ್ ಮಾರ್ಗ್ ಕಚೇರಿಯ ಎದುರು ಪ್ರತಿಭಟನೆ ನಡೆಸಿದ್ದಾರೆ.

ಕಿರಣ್ ಬೇಡಿ ಅವರನ್ನು ದೆಹಲಿಯ ಬಿಜೆಪಿ ಪಕ್ಷದ ಮುಖ್ಯಮಂತ್ರಿ ಅಭ್ಯರ್ಥಿ ಎಂದು ಸರ್ವಾನುಮತದಿಂದ ಆಯ್ಕೆ ಮಾಡಲಾಗಿದೆ ಎಂದು  ಸೋಮವಾರ ತಡ ರಾತ್ರಿ ಬಿಜೆಪಿ ಪಕ್ಷದ ರಾಷ್ಟ್ರಾಧ್ಯಕ್ಷ ಅಮಿತ್ ಷಾ ಘೋಷಿಸಿದ್ದರು.

ಸತೀಶ್ ಉಪಾಧ್ಯಾಯ ಅವರ ಹೆಸರು ಪಕ್ಷದ ಅಭ್ಯರ್ಥಿಗಳ ಪಟ್ಟಿಯಲ್ಲಿ ಇಲ್ಲ ಎಂಬುದನ್ನ ತಿಳಿದು ಅವರ ಬೆಂಬಲಿಗರು ಪಕ್ಷದ ಕಚೇರಿ ಎದುರು ಸೇರಿ ಪ್ರತಿಭಟನೆ ನಡೆಸಿದ್ದಾರೆ. ಆದರೆ ಅಲ್ಲಿ ಪೋಲಿಸ್ ಪಡೆ ಸನ್ನದ್ಧವಾಗಿದ್ದರಿಂದ ಯಾವುದೇ ಅಹಿತಕರ ಘಟನೆ ನಡೆಯದಂತೆ ಕ್ರಮ ಕೈಗೊಳ್ಳಲಾಗಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.