ಬಿಜೆಪಿಗೆ ಸೌರವ್ ಗಂಗೂಲಿ?
ಭಾರತೀಯ ಕ್ರಿಕೆಟ್ ತಂಡದ ಮಾಜಿ ನಾಯಕ ಸೌರವ್ ಗಂಗೂಲಿ ಬಿಜೆಪಿ ಪಕ್ಷಕ್ಕೆ ಸೇರ್ಪಡೆಯಾಗುವ ಇಚ್ಛೆ ವ್ಯಕ್ತ ಪಡಿಸಿದ್ದಾರೆ...

ನವದೆಹಲಿ: ಭಾರತೀಯ ಕ್ರಿಕೆಟ್ ತಂಡದ ಮಾಜಿ ನಾಯಕ ಸೌರವ್ ಗಂಗೂಲಿ ಬಿಜೆಪಿ ಪಕ್ಷಕ್ಕೆ ಸೇರ್ಪಡೆಯಾಗುವ ಇಚ್ಛೆ ವ್ಯಕ್ತ ಪಡಿಸಿದ್ದಾರೆ ಎಂಬ ಸುದ್ದಿ ಕೇಳಿಬರುತ್ತಿದೆ.
ಭಾರತದಲ್ಲಿ ಹೆಚ್ಚು ಅಭಿಮಾನಿಗಳನ್ನು ಹೊಂದಿರುವ ಅದರಲ್ಲೂ ಬಂಗಾಳದಲ್ಲಿ ಅತೀ ಹೆಚ್ಚು ಗೌರವಿಸಲ್ಪಡುವ ಕ್ರಿಕೆಟ್ ಪಟುವಾಗಿದ್ದಾರೆ ಸೌರವ್. 2008ರಲ್ಲಿ ಕ್ರಿಕೆಟ್‌ನಿಂದ ನಿವೃತ್ತಿ ಹೊಂದಿದ ನಂತರ ಸೌರವ್ ಕ್ರಿಕೆಟ್ ಕಾಮೆಂಟೇಟರ್ ಆಗಿ ಕಾಣಿಸಿಕೊಂಡಿದ್ದರು.
ಇದೀಗ ಸೌರವ್ ಅವರು ಬಿಜೆಪಿಯ ಹಿರಿಯ ನಾಯಕರೊಂದಿಗೆ ಮಾತುಕತೆ ನಡೆಸಿದ್ದು, ಅವರು ಬಿಜೆಪಿಗೆ ಸೇರುವ ಸಾಧ್ಯತೆಯಿದೆ ಎಂದು ಬಲ್ಲಮೂಲಗಳು ವರದಿ ಮಾಡಿವೆ.
2014ರ ಸಾರ್ವತ್ರಿಕ ಚುನಾವಣೆಯಲ್ಲಿ ಸ್ಪರ್ಧಿಸಲು ಬಿಜೆಪಿಯಿಂದ ಸೌರವ್‌ಗೆ ಆಹ್ವಾನ ನೀಡಲಾಗಿತ್ತು. ಆದರೆ ಅದನ್ನು ಸೌರವ್ ತಿರಸ್ಕರಿಸಿದ್ದರು.
"ನನಗೆ ಬಿಜೆಪಿ ಆಫರ್ ನೀಡಿತ್ತು ಎಂಬುದು ನಿಜ ಆದರೆ ನಾನು ಅದನ್ನು ತಿರಸ್ಕರಿಸಿದ್ದೇನೆ. ನಾನು ಯಾವ ಚುನಾವಣೆಯಲ್ಲೂ ಸ್ಪರ್ಧಿಸುವುದಿಲ್ಲ" ಎಂದು ಆವಾಗ ಸೌರವ್ ಹೇಳಿಕೆ ನೀಡಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


