ಮೋದಿ ಆರು ದೇಶಗಳ ಪ್ರವಾಸ; ರಷ್ಯಾದಲ್ಲಿ ನವಾಜ್ ಶರೀಫ್ ಜೊತೆ ಮಾತುಕತೆ
ರಷ್ಯಾದ ಉಫಾದಲ್ಲಿ ನಡೆಯಲಿರುವ ಶಾಂಘೈ ಸಹಕಾರ ಸಂಘದ ವಾರ್ಷಿಕ ಸಮಾವೇಶದಲ್ಲಿ ಭಾಗವಹಿಸಲು ಅಲ್ಲಿಗೆ ತೆರಳಲಿರುವ ಭಾರತ ಪ್ರಧಾನಿ ನರೇಂದ್ರ ಮೋದಿ,

ನವದೆಹಲಿ: ರಷ್ಯಾದ ಉಫಾದಲ್ಲಿ ನಡೆಯಲಿರುವ ಶಾಂಘೈ ಸಹಕಾರ ಸಂಘದ ವಾರ್ಷಿಕ ಸಮಾವೇಶದಲ್ಲಿ ಭಾಗವಹಿಸಲು ಅಲ್ಲಿಗೆ ತೆರಳಲಿರುವ ಭಾರತ ಪ್ರಧಾನಿ ನರೇಂದ್ರ ಮೋದಿ, ಸಮಾವೇಶದ ಜೊತೆ ಜೊತೆಗೇ ಪಾಕಿಸ್ತಾನಿ ಪ್ರಧಾನಿ ನವಾಜ್ ಶರೀಫ್ ಅವರನ್ನು ಜುಲೈ ೧೦ರಂದು ಭೇಟಿ ಮಾಡಿ ಮಾತುಕತೆ ನಡೆಸಲಿದ್ದಾರೆ ಎಂದು ತಿಳಿದು ಬಂದಿದೆ.
ಪ್ರಧಾನಿಯವರ ರಷ್ಯಾ ಪ್ರವಾಸದ ಕೊನೆಯ ದಿನದಂದು ಈ ಭೇಟಿ ನಡೆಯಲಿದೆ. ಮೋದಿ ಅವರ ಮ್ಯಾರಥಾನ್ ಆರು ದೇಶಗಳ ಪ್ರವಾಸದ ಮೂರನೇ ದೇಶ ರಷ್ಯಾ.
ಈ ಇಬ್ಬರು ಪ್ರಧಾನಿಗಳ ನಡುವಿನ ಮೂರನೆ ಭೇಟಿ ಇದಾಗಲಿದೆ. ಮೊದಲು ಮೋದಿ ಅವರು ಅಧಿಕಾರ ಪ್ರಮಾಣವಚನ ಸಮಾರಂಭದಲ್ಲಿ ನವಾಜ್ ಶರೀಫ್ ಮೋದಿ ಅವರ ಕೈಕುಲುಕುಕಿದ್ದರು, ನಂತರ ಖಟ್ಮಂಡುವಿನಲ್ಲಿ ಕಳೆದ ವರ್ಷ ನಡೆದ ಸಾರ್ಕ್ ಸಮ್ಮೇಳನದಲ್ಲಿ ಕೂಡ ಭೇಟಿಯಾಗಿದ್ದರು. ಭಾರತ ಮತ್ತು ಪಾಕಿಸ್ತಾನ ನಡುವೆ ಹದಗೆಟ್ಟ ಸಂಬಂಧದ ಈ ಸ್ಥಿತಿಯಲ್ಲಿ ಈ ಸಭೆ ನಡೆಯುತ್ತಿರುವುದು ಕುತೂಹಲ ಕೆರಳಿಸಿದೆ. ಪಾಕಿಸ್ತಾನದ ರಾಯಭಾರಿ ಹುರಿಯತ್ ನಾಯಕರನ್ನು ಭೇಟಿ ಮಾಡಿದ್ದ ಹಿನ್ನಲೆಯಲ್ಲಿ ವಿದೇಶಾಂಗ ಕಾರ್ಯದರ್ಶಿಗಳ ಉನ್ನತ ಮಟ್ಟದ ಮಾತುಕತೆಗಳನ್ನು ರದ್ದುಪಡಿಸಲಾಗಿತ್ತು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


