ಪ್ರಧಾನ ಸುದ್ದಿ

ಲೋಕಾಯುಕ್ತರ ಪದಚ್ಯುತಿ ನಿರ್ಣಯ: ಚರ್ಚೆಗೆ ಸ್ಪೀಕರ್ ನಕಾರ

ತಮ್ಮ ಪುತ್ರ ಅಶ್ವಿನ್ ರಾವ್ ವಿರುದ್ಧದ ಭ್ರಷ್ಟಾಚಾರ ಪ್ರಕರಣ ಸಂಬಂಧ ಲೋಕಾಯುಕ್ತ ನ್ಯಾಯಮೂರ್ತಿ ವೈ.ಭಾಸ್ಕರ್ ರಾವ್ ಅವರ ಪದಚ್ಯುತಿ ಹಾಗೂ ಚರ್ಚೆಗೆ ಅವಕಾಶ ನೀಡಬೆಕೆಂಬ...

ಲೋಕಾಯುಕ್ತರ ಪದಚ್ಯುತಿ ನಿರ್ಣಯ: ಚರ್ಚೆಗೆ ಸ್ಪೀಕರ್ ನಕಾರ
ಕಾಗೋಡು ತಿಮ್ಮಪ್ಪ
Published On :

ಬೆಳಗಾವಿ/ಸುವರ್ಣಸೌಧ: ತಮ್ಮ ಪುತ್ರ ಅಶ್ವಿನ್ ರಾವ್ ವಿರುದ್ಧದ ಭ್ರಷ್ಟಾಚಾರ ಪ್ರಕರಣ ಸಂಬಂಧ ಲೋಕಾಯುಕ್ತ ನ್ಯಾಯಮೂರ್ತಿ ವೈ.ಭಾಸ್ಕರ್ ರಾವ್ ಅವರ ಪದಚ್ಯುತಿ ಹಾಗೂ ಚರ್ಚೆಗೆ ಅವಕಾಶ ನೀಡಬೆಕೆಂಬ ಪ್ರತಿಪಕ್ಷಗಳ ಪ್ರಸ್ತಾವನೆಗೆ ಅವಕಾಶ ನೀಡಲು ಸ್ಪೀಕರ್ ಕಾಗೋಡು ತಿಮ್ಮಪ್ಪ ಅವರು ಸೋಮವಾರ ನಿರಾಕರಿಸಿದ್ದಾರೆ.

ಪ್ರತಿಪಕ್ಷ ಬಿಜೆಪಿ ಮತ್ತು ಜೆಡಿಎಸ್ ಜಂಟಿಯಾಗಿ ಲೋಕಾಯುಕ್ತರ ಪದಚ್ಯುತಿ ಮಂಡನೆಗಾಗಿ ಶನಿವಾರ 57 ಶಾಸಕರ ಸಹಿಯುಳ್ಳ ಪ್ರಸ್ತಾವನೆಯನ್ನು ಸ್ಪೀಕರ್ ಗೆ ಸಲ್ಲಿಸಿದ್ದವು.

ಇಂದು ವಿಧಾನಸಭಾ ಕಲಾಪ ಆರಂಭವಾಗುತ್ತಿದ್ದಂತೆಯೇ ವಿಷಯ ಪ್ರಸ್ತಾಪಿಸಿದ ಜೆಡಿಎಸ್ ನಾಯಕ ಎಚ್.ಡಿ.ಕುಮಾರಸ್ವಾಮಿ ಅವರು, ಲೋಕಾಯುಕ್ತ ಸಂಸ್ಥೆಯಲ್ಲಿನ ಭ್ರಷ್ಟಾಚಾರದ ಬಗ್ಗೆ ಚರ್ಚೆಗೆ ಅವಕಾಶ ನೀಡುವಂತೆ ಮನವಿ ಮಾಡಿದರು. ಆದರೆ ಇದಕ್ಕೆ ಒಪ್ಪದ  ಸ್ಪೀಕರ್ ಕಾಗೋಡು ತಿಮ್ಮಪ್ಪ ಅವರು, ಇದು ಅತ್ಯಂತ ಗಂಭೀರವಾದ ವಿಚಾರ. ಈ ಬಗ್ಗೆ ಏಕಾಏಕಿ ನಿರ್ಧಾರ ಕೈಗೊಳ್ಳಲು ಸಾಧ್ಯವಿಲ್ಲ ಎಂದರು.

ನಮ್ಮ ನಿರ್ಧಾರ ಭವಿಷ್ಯದಲ್ಲಿಯೂ ಚರ್ಚೆಯಾಗಬೇಕು. ಚರ್ಚೆಗೆ ಅವಕಾಶ ಕೊಡುವುದು ಸದನದ ಇತಿಹಾಸದಲ್ಲೇ ಮೊದಲ ಬಾರಿಯಾಗಿದೆ. ಹಾಗಾಗಿ ಈ ಬಗ್ಗೆ ನಾನು ಕಾನೂನು ತಜ್ಞರ ಸಲಹೆ ಪಡೆದಿದ್ದೇನೆ. ಆ ನಿಟ್ಟಿನಲ್ಲಿ ಮಧ್ಯಾಹ್ನ ವಿಧಾನಸಭೆ, ವಿಧಾನಪರಿಷತ್ ನ ಸಲಹಾ ಸಮಿತಿಯಲ್ಲಿ ಚರ್ಚಿಸಿ ಅಂತಿಮ ನಿರ್ಧಾರ ಕೈಗೊಳ್ಳುವುದಾಗಿ ಹೇಳಿದರು.

ಆದರೆ ಬಿಜೆಪಿ ಮತ್ತು ಜೆಡಿಎಸ್ ಸದಸ್ಯರು ಚರ್ಚೆಗೆ ಅವಕಾಶ ನೀಡುವಂತೆ ಕಲಾಪದಲ್ಲಿ ತೀವ್ರ ಗದ್ದಲ ನಡೆಸಿದವು. ಈ ವಿಚಾರವಾಗಿ ವಿಧಾನಪರಿಷತ್ ನಲ್ಲೂ ತೀವ್ರ ಕೋಲಾಹಲ ನಡೆಯಿತು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.