ವ್ಯಾಪಂ ಹಗರಣ: ಮತ್ತೊಬ್ಬ ಮಹಿಳಾ ಎಸ್ಐ ಆತ್ಮಹತ್ಯೆ
ವ್ಯಾಪಂ ಹಗರಣಕ್ಕೆ ಸಂಬಂಧಪಟ್ಟಂತೆ ಮತ್ತೊಬ್ಬ ಮಹಿಳೆ ಸಾವನ್ನಪ್ಪಿದ್ದಾರೆ. ವ್ಯಾಪಮ್ ಪರೀಕ್ಷೆ ಮೂಲಕ ಎಸ್ ಐ ಆಗಿ ಆಯ್ಕೆಯಾಗಿದ್ದ ಮಹಿಳೆಯೊಬ್ಬರು...

ಭೋಪಾಲ್: ವ್ಯಾಪಂ ಹಗರಣಕ್ಕೆ ಸಂಬಂಧಪಟ್ಟಂತೆ ಮತ್ತೊಬ್ಬ ಮಹಿಳೆ ಸಾವನ್ನಪ್ಪಿದ್ದಾರೆ. ವ್ಯಾಪಂ ಪರೀಕ್ಷೆ ಮೂಲಕ ಎಸ್ ಐ ಆಗಿ ಆಯ್ಕೆಯಾಗಿದ್ದ ಮಹಿಳೆಯೊಬ್ಬರು ಆತ್ಮಹತ್ಯೆಗೆ ಶರಣಾಗಿದ್ದಾರೆ. ಎಸ್ ಐ ಅನಾಮಿಕ ಖುಶ್ವಾಹ್ ಇಂದು ಬೆಳಗ್ಗೆ 5 ಗಂಟೆಗೆ ಕೆರೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಮೂಲಗಳು ತಿಳಿಸಿವೆ.
ಮಧ್ಯಪ್ರದೇಶದ ಸಾಗರ್ ಪೊಲೀಸ್ ಅಕಾಡೆಮಿಯಲ್ಲಿ ಈ ಘಟನೆ ಸಂಭವಿಸಿದೆ. ಕಳೆದ ಫೆಬ್ರವರಿಯಲ್ಲಿ ಎಸ್ ಐ ಪರೀಕ್ಷೆ ಪಾಸು ಮಾಡಿದ್ದ ಅನಾಮಿಕ ಖುಶ್ವಾಹ್ ಪೊಲೀಸ್ ಅಕಾಡೆಮಿ ಕೇಂದ್ರದಲ್ಲಿ ತರಬೇತಿ ಪಡೆಯುತ್ತಿದ್ದರು.
ನಿನ್ನೆಯಷ್ಟೆ ಜಬಲ್ ಪುರದಲ್ಲಿರುವ ನೇತಾಜಿ ಸುಭಾಷ್ ಚಂದ್ರ ಬೋಸ್ ಮೆಡಿಕಲ್ ಕಾಲೇಜಿನ ಡೀನ್ ಡಾ. ಅರುಣ್ ಶರ್ಮಾ ಅವರ ಮೃತ ದೇಹ ನವದೆಹಲಿಯ ಹೊಟೆಲ್ ಒಂದರಲ್ಲಿ ಪತ್ತೆಯಾಗಿತ್ತು. ಅದರ ಹಿಂದಿನ ದಿನ ಇದೇ ಪ್ರಕರಣಕ್ಕೆ ಸಂಬಂಧಪಟ್ಟಂತೆ ತನಿಖಾ ವರದಿಗಾರ ಅಕ್ಷಯ್ ಸಿಂಗ್ ಅವರು ನಿಗೂಢವಾಗಿ ಸಾವನ್ನಪ್ಪಿದ್ದರು. ಇನ್ನೂ ಈ ಪ್ರಕರಣಕ್ಕೆ ಸಂಬಂಧಪಟ್ಟಂತೆ ಸಾವನ್ನಪ್ಪಿದವರ ಸಂಖ್ಯೆ 47ಕ್ಕೆ ಏರಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


