ಪ್ರಧಾನ ಸುದ್ದಿ

ಉತ್ತರ ಪ್ರದೇಶ: ಪೊಲೀಸ್ ಠಾಣೆಯೊಳಗೆ ಮಹಿಳೆಗೆ ಬೆಂಕಿ ಹಚ್ಚಿದ ಪೊಲೀಸರು

ಉತ್ತರಪ್ರದೇಶದ ಬರಬಂಕಿ ಬಿಲ್ಲೆಯ ಪೊಲೀಸ್ ಠಾಣೆಯ ಇಬ್ಬರು ಪೊಲೀಸರು ಠಾಣೆಯೊಳಗೇ ಅಂಗನವಾಡಿ ಕಾರ್ಯಕರ್ತೆಗೆ ಬೆಂಕಿ ಹಚ್ಚಿದ್ದರ ಪರಿಣಾಮವಾಗಿ ತೀವ್ರವಾಗಿ

ಉತ್ತರ ಪ್ರದೇಶ: ಪೊಲೀಸ್ ಠಾಣೆಯೊಳಗೆ ಮಹಿಳೆಗೆ ಬೆಂಕಿ ಹಚ್ಚಿದ ಪೊಲೀಸರು
ಸಾಂದರ್ಭಿಕ ಚಿತ್ರ
Published On :

ಬರಾಬಂಕಿ: ಉತ್ತರಪ್ರದೇಶದ ಬರಬಂಕಿ ಬಿಲ್ಲೆಯ ಪೊಲೀಸ್ ಠಾಣೆಯ ಇಬ್ಬರು ಪೊಲೀಸರು ಠಾಣೆಯೊಳಗೇ ಅಂಗನವಾಡಿ ಕಾರ್ಯಕರ್ತೆಗೆ ಬೆಂಕಿ ಹಚ್ಚಿದ್ದರ ಪರಿಣಾಮವಾಗಿ ತೀವ್ರವಾಗಿ ಗಾಯಗೊಂಡು ಮಹಿಳೆ ಸಾವನ್ನಪ್ಪಿದ್ದಾರೆ.

ವರದಿಗಳ ಪ್ರಕಾರ ತನ್ನ ಗಂಡನನ್ನು ಪೊಲೀಸರಿಂದ ಬಿಡಿಸಿಕೊಂಡು ಬರಲು ಮಹಿಳೆ ಪೊಲೀಸ್ ಠಾಣೆಗೆ ತೆರಳಿದ್ದಳಂತೆ. ಪೊಲೀಸರು ವಿಚಾರಣೆಗೆಂದು ಮಹಿಳೆಯ ಗಂಡನನ್ನು ಠಾಣೆಯಲ್ಲಿ ಇಟ್ಟುಕೊಂಡಿದ್ದರು ಎಂದು ತಿಳಿದುಬಂದಿದೆ. ಪೊಲೀಸರು ಬಿಡುಗಡೆಗೆ ಲಂಚ ಕೇಳಿದ್ದಕ್ಕೆ ಕೊಡಲು ನಿರಾಕರಿಸಿದ ಮಹಿಳೆಗೆ ಬೆಂಕಿ ಹಚ್ಚಿದ್ದಾರೆ ಎಂದು ತಿಳಿದುಬಂದಿದೆ.

ಇದರಿಂದ ಆಕ್ರೋಶಗೊಂಡಿರುವ ಕುಟುಂಬ ನ್ಯಾಯಕ್ಕಾಗಿ ಮೊರೆಯಿಟ್ಟಿದ್ದು, ತಪ್ಪಿತಸ್ಥರನ್ನು ಶಿಕ್ಷಿಸುವಂತೆ ಆಗ್ರಹಿಸಿದೆ.

"ನಮಗೆ ನ್ಯಾಯ ಬೇಕು. ತಪ್ಪಿತಸ್ಥರಿಗೆ ಶಿಕ್ಷೆಯಾದರಷ್ಟೇ ನಮ್ಮ ತಾಯಿಯ ಆತ್ಮಕ್ಕೆ ಶಾಂತಿ ಸಿಗುತ್ತದೆ" ಎಂದು ಮೃತ ಮಹಿಳೆಯ ಮಗ ತಿಳಿಸಿದ್ದಾನೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.