ರಾಜ್ಯ ಸರ್ಕಾರದ ವೆಬ್‌ಸೈಟ್‌ನಲ್ಲಿ ನಿಮ್ಮ ಜಾತಿ, ಧರ್ಮ ಬಹಿರಂಗ
ಇನ್ನುಮುಂದೆ ನಿಮ್ಮ ಜಾತಿ, ಧರ್ಮ ಹಾಗೂ ಮೀಸಲಾತಿಯಡಿ ನೀವು ಸರ್ಕಾರದಿಂದ ಪಡೆಯು ಸೌಲಭ್ಯಗಳು ರಹಸ್ಯವಾಗಿ ಉಳಿಯುವುದಿಲ್ಲ.

ಬೆಂಗಳೂರು: ಇನ್ನುಮುಂದೆ ನಿಮ್ಮ ಜಾತಿ, ಧರ್ಮ ಹಾಗೂ ಮೀಸಲಾತಿಯಡಿ ನೀವು ಸರ್ಕಾರದಿಂದ ಪಡೆಯು ಸೌಲಭ್ಯಗಳು ರಹಸ್ಯವಾಗಿ ಉಳಿಯುವುದಿಲ್ಲ.
ಹೌದು, ರಾಜ್ಯ ಸರ್ಕಾರ ಇತ್ತೀಚಿಗೆ ನಡೆಸಿದ ಜಾತಿ ಸಮೀಕ್ಷೆಯಲ್ಲಿ ಸಂಗ್ರಹಿಸಿದ ನಿಮ್ಮ ಜಾತಿ, ಉಪ ಜಾತಿ, ಪಂಗಡ, ವರ್ಗ ಹಾಗೂ ಧರ್ಮ ಸೇರಿದಂತೆ ಇತರೆ ವಿವರಗಳು ಈಗ ರಹಸ್ಯವಾಗಿ ಉಳಿದಿಲ್ಲ.
ಸಮೀಕ್ಷೆ ವೇಳೆ ನೀವು ನೀಡಿದ ನಿಮ್ಮ ಸಾಮಾಜಿಕ, ಆರ್ಥಿಕ ಹಾಗೂ ಕುಟುಂಬಕ್ಕೆ ಸಂಬಂಧಿಸಿದ 21 ಬಗೆಯ ವಿವರಗಳು ಈಗ ರಾಜ್ಯ ಸರ್ಕಾರದ ವೆಬ್‌ಸೈಟ್‌ನಲ್ಲಿ ಪ್ರಕಟಿಸಲಾಗಿದೆ ಎಂದು ಆಂಗ್ಲ ಮಾಧ್ಯವೊಂದು ವರದಿ ಮಾಡಿದೆ.
ಎರಡು ತಿಂಗಳ ಹಿಂದಷ್ಟೇ ಹಿಂದುಳಿದ ವರ್ಗಗಳ ಆಯೋಗ ಕೈಗೊಂಡಿದ್ದ ಸಾಮಾಜಿಕ - ಆರ್ಥಿಕ ಸಮೀಕ್ಷಾ ವರದಿಯನ್ನು ಸರ್ಕಾರಕ್ಕೆ ಇನ್ನಷ್ಟೇ ಸಲ್ಲಿಸಬೇಕಾಗಿದೆ. ಹಾಗಿದ್ದರೂ ಈ ಸಮೀಕ್ಷೆಯಡಿ ಸಂಗ್ರಹಿಸಲಾದ ವಿವಾದಾತ್ಮಕ ಜನಗಣತಿಯ ವಿವರಗಳು ಈಗ ಸಾರ್ವಜನಿಕರಿಗೆ ಮುಕ್ತವಾಗಿ ಸಿಗುವಂತೆ ಸರ್ಕಾರದ ವೆಬ್‌ಸೈಟ್‌ನಲ್ಲಿ ಪ್ರಕಟಿಸಲಾಗಿದೆ.
ಇನ್ನು ಈ ಬಗ್ಗೆ ಪ್ರತಿಕ್ರಿಯಿಸಿರುವ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಪ್ರಧಾನ ಕಾರ್ಯದರ್ಶಿ ಶಾಲಿನಿ ರಜನೀಶ್ ಅವರು, ಜಾತಿ ಗಣತಿಯ ಸಂದರ್ಭದಲ್ಲಿ 21 ಬಗೆಯ ವಿವರಗಳನ್ನು ಸಂಗ್ರಹಿಸಲಾಗಿತ್ತು. ವ್ಯಕ್ತಿಯ ಜಾತಿ ಸಹಿತವಾಗಿ ಆ ವಿವರಗಳನ್ನು ಈಗ ಸರಕಾರದ ವೆಬ್ ಸೈಟಿಗೆ ಹಾಕಲಾಗಿದೆ. ಯಾವನೇ ಒಬ್ಬ ವ್ಯಕ್ತಿ ತನ್ನ ಜಾತಿ, ಸಮುದಾಯಕ್ಕೆ ಮೀಸಲಿರುವ ಸೌಕರ್ಯ - ಸೌಲಭ್ಯಗಳನ್ನು ಸರಕಾರದಿಂದ ಪಡೆಯುವುದಾದರೆ ಅದನ್ನು ಎಲ್ಲರಿಗೂ ತಿಳಿಯುವಂತೆ ಬಹಿರಂಗಪಡಿಸುವುದರಲ್ಲಿ ತಪ್ಪೇನಿದೆ? ಎಂದು ಪ್ರಶ್ನಿಸಿದ್ದಾರೆ. ಅಲ್ಲದೆ ಈ ಬಗ್ಗೆ ನಾವು ಕೇವಲ ಸರಕಾರದ ಸೂಚನೆಗಳನ್ನು ಮಾತ್ರವೇ ಅನುಸರಿಸುತ್ತಿದ್ದೇವೆ' ಎಂದಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


