ವ್ಯಾಪಂ ಹಗರಣ: ಮತ್ತೊಬ್ಬ ಪ್ರಮುಖ ಸಾಕ್ಷಿದಾರ ಸಾವು
ವ್ಯಾಪಂ ಹಗರಣಕ್ಕೆ ಸಂಬಂಧಿಸಿದಂತೆ ದಿನೇದಿನೇ ನಿಗೂಢ ಸಾವಿನ ಸಂಖ್ಯೆ ಹೆಚ್ಚಳವಾಗುತ್ತಿದ್ದು, ಪ್ರಕರಣದ ಪ್ರಮುಖ ಸಾಕ್ಷಿದಾರನೊಬ್ಬ ನಿಗೂಢವಾಗಿ...

ಭೂಪಾಲ್: ವ್ಯಾಪಂ ಹಗರಣಕ್ಕೆ ಸಂಬಂಧಿಸಿದಂತೆ ದಿನೇದಿನೇ ನಿಗೂಢ ಸಾವಿನ ಸಂಖ್ಯೆ ಹೆಚ್ಚಳವಾಗುತ್ತಿದ್ದು, ಪ್ರಕರಣದ ಪ್ರಮುಖ ಸಾಕ್ಷಿದಾರನೊಬ್ಬ ನಿಗೂಢವಾಗಿ ಸಾವನ್ನಪ್ಪಿರುವ ಘಟನೆ ತಡವಾಗಿ ಬೆಳಕಿಗೆ ಬಂದಿದೆ.
ಪೇದೆಗಳ ನೇಮಕಾತಿ ಹಗರಣದ ಸಾಕ್ಷಿದಾರ ಪೇದೆ ಸಂಜಯ್ ಯಾದವ್ ಅವರು ಎರಡು ತಿಂಗಳ ಹಿಂದೆಯೇ ನಿಗೂಢವಾಗಿ ಸಾವನ್ನಪ್ಪಿದ್ದಾರೆ ಎಂದು ವರದಿಯಾಗಿದೆ.
ಈತ ಮಧ್ಯಪ್ರದೇಶದ ವೃತ್ತಿಶಿಕ್ಷಣ ಪರೀಕ್ಷೆ ನೇಮಕಾತಿ ಹಗರಣದ ಪ್ರಮುಖ ಸಾಕ್ಷಿದಾರನಾಗಿದ್ದನು ಎಂದು ಹೇಳಲಾಗುತ್ತಿದೆ.
ಪ್ರಕರಣ ಸಂಬಂಧ ಸಂಜಯ್ ಯಾದವ್ ಗೆ ಎಸ್ ಟಿಎಫ್ ಸಮನ್ಸ್ ಜಾರಿ ಮಾಡಿತ್ತು. ಸಮನ್ಸ್ ಗೆ ಯಾವುದೇ ಉತ್ತರ ಬಾರದಿದ್ದಾಗ, ಆತ ನಿಗೂಢವಾಗಿ ಮೃತಪಟ್ಟಿರುವುದು ಬೆಳಕಿಗೆ ಬಂದಿದೆ. ಉತ್ತರ ಪ್ರದೇಶದ ಹಮೀರ್ ಪುರದಲ್ಲಿ ನಿಗೂಢವಾಗಿ ಸಾವನ್ನಪ್ಪಿದ್ದಾನೆ ಎಂದು ನಿನ್ನೆ ಎಸ್ ಟಿಎಫ್ ಹೈಕೋರ್ಟ್ ಗೆ ವರದಿ ಸಲ್ಲಿಸಿದೆ.
ಸಂಜಯ್ ಯಾದವ್ ಅವರು ಮಧ್ಯಪ್ರದೇಶದ ರಾಜ್ಯಪಾಲ ರಾಮ್ ನರೇಶ್ ಯಾದವ್ ಹಾಗೂ ಮಾಜಿ ವಿಶೇಷ ಶಿಕ್ಷಣಾಧಿಕಾರಿ ಧನರಾಜ್ ಯಾದವ್ ಅವರಿಗೆ ಆಪ್ತನಾಗಿದ್ದನು ಎಂದು ಹೇಳಲಾಗುತ್ತಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


