ರಾಜ್ಯದಲ್ಲಿ ಮತ್ತೆ ಇಬ್ಬರ ರೈತರ ಆತ್ಮಹತ್ಯೆ
ರಾಜ್ಯದಲ್ಲಿ ರೈತರ ಆತ್ಮಹತ್ಯೆ ಸರಣಿ ಮುಂದುವರೆದಿದೆ. ಕೊಪ್ಪಳ ಜಿಲ್ಲೆ ಗಂಗಾವತಿ ತಾಲೂಕಿನ ಸಿದ್ದಾಪುರದ ಗ್ರಾಮದಲ್ಲಿ ಸಾಲಬಾಧೆ...

ಗಂಗಾವತಿ: ರಾಜ್ಯದಲ್ಲಿ ರೈತರ ಆತ್ಮಹತ್ಯೆ ಸರಣಿ ಮುಂದುವರೆದಿದೆ. ಕೊಪ್ಪಳ ಜಿಲ್ಲೆ ಗಂಗಾವತಿ ತಾಲೂಕಿನ ಸಿದ್ದಾಪುರದ ಗ್ರಾಮದಲ್ಲಿ ಸಾಲಬಾಧೆ ತಾಳಲಾರದೇ ರೈತನೊಬ್ಬ ವಿಷಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ.
60 ವರ್ಷದ ಶೇಖರ ಗೌಡ ಸಾಲಮರಳ್ಳಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಐದು ಲಕ್ಷ ರು. ಕೈಸಾಲ ಮಾಡಿಕೊಂಡಿದ್ದ ಈತ, ಭೋಗ್ಯಕ್ಕೆ ಜಮೀನು ಪಡೆದು ಕೃಷಿ ಮಾಡುತ್ತಿದ್ದರು. ಆದರೆ ಸಾಲಬಾಧೆ ತಾಳಲಾರದೆ ಶೇಖರಗೌಡ ಗ್ರಾಮದ ಹೊರವಲಯದಲ್ಲಿ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಈ ಸಂಬಂಧ ಕಾರಟಗಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.
ಇನ್ನು ಚಿತ್ರದುರ್ಗ ಜಿಲ್ಲೆ ಪುಣಜೂರು ಗ್ರಾಮದಲ್ಲಿ ರೈತನೊಬ್ಬ ಸಾಲಬಾಧೆ ತಾಳಲಾರದೆ ಆತ್ಮಹತ್ಯೆಗೆ ಶರಣಾಗಿದ್ದಾರೆ. 38 ವರ್ಷದ ರಂಗಪ್ಪ ನೇಣಿಗೆ ಶರಣಾಗಿದ್ದಾರೆ. ರಂಗಪ್ಪ ಸುಮಾರು 2 ಲಕ್ಷ ರೂಪಾಯಿ ಸಾಲ ಮಾಡಿದ್ದರು. ಹೊಳೆಲ್ಕೆರೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


