ರೈತರ ಆತ್ಮಹತ್ಯೆ: ಸ್ವಾಮಿನಾಥನ್ ನೇತೃತ್ವದಲ್ಲಿ ವಿಷನ್ ಗ್ರೂಪ್ ನಿಂದ ತನಿಖೆ
ರಾಜ್ಯದಲ್ಲಿ ಹೆಚ್ಚುತ್ತಿರುವ ರೈತರ ಆತ್ಮಹತ್ಯೆಗೆ ಕಾರಣ ಹಾಗೂ ಪರಿಹಾರ ಕಂಡುಕೊಳ್ಳುವ ನಿಟ್ಟಿನಲ್ಲಿ ಕೃಷಿತಜ್ಞ ಸ್ವಾಮಿನಾಥನ್...

ಮೈಸೂರು: ರಾಜ್ಯದಲ್ಲಿ ಹೆಚ್ಚುತ್ತಿರುವ ರೈತರ ಆತ್ಮಹತ್ಯೆಗೆ ಕಾರಣ ಹಾಗೂ ಪರಿಹಾರ ಕಂಡುಕೊಳ್ಳುವ ನಿಟ್ಟಿನಲ್ಲಿ ಕೃಷಿತಜ್ಞ ಸ್ವಾಮಿನಾಥನ್ ಅವರ ಅಧ್ಯಕ್ಷತೆಯಲ್ಲಿ ವಿಷನ್ ಗ್ರೂಪ್ ರಚಿಸಲಾಗಿದೆ ಎಂದು ಗ್ರೂಪ್ ರಚಿಸಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.
ರೈತರ ಸರಣಿ ಆತ್ಮಹತ್ಯೆಯಿಂದ ಸರ್ಕಾರಕ್ಕೆ ದಿಗ್ಬ್ರಮೆ ಆಗಿದೆ. ಜೂನ್ ಮತ್ತು ಜುಲೈನಲ್ಲಿ ರೈತರ ಆತ್ಮಹತ್ಯೆ ಹೆಚ್ಚಾಗಿದೆ. ಬೇರೆ ಅವ„ಯಲ್ಲಿ ಇಷ್ಟೊಂದು ಆತ್ಮಹತ್ಯೆ ಆಗಿಲ್ಲ. ಇದಕ್ಕೆ ಕಾರಣ ಕಂಡುಕೊಳ್ಳಬೇಕಿದೆ. ಹೀಗಾಗಿ, ವಿಷನ್ ಗ್ರೂಪ್ ರಚಿಸಲಾಗಿದ್ದು, ಇವರು ರೈತರ ಸಮಸ್ಯೆ ಹಾಗೂ ಆತ್ಮಹತ್ಯೆಗೆ ಕಾರಣಗಳನ್ನು ಅಧ್ಯಯನ ಮಾಡಿ ಸರ್ಕಾರಕ್ಕೆ ವರದಿ ಸಲ್ಲಿಸಲಿದ್ದಾರೆ ಎಂದರು.
ರೈತರ ಆತ್ಮಹತ್ಯೆ ಹಿನ್ನಲೆಯಲ್ಲಿ ಎಲ್ಲ ಜಿಲ್ಲಾಧಿಕಾರಿಗಳು, ಎಸ್ಪಿ, ಉಪ ವಿಭಾಧಿಕಾರಿಗಳು, ಕೃಷಿ, ತೋಟಗಾರಿಕೆ, ಸಹಕಾರ, ಪಶುಸಂಗೋಪನಾ ಇಲಾಖೆಗಳ ಅ„ಕಾರಿಗಳಿಗೆ ಜನರ ಬಳಿಗೆ ಹೋಗಲು ಸೂಚಿಸಿದ್ದೇನೆ. ಕೃಷಿ ಸಂಬಂಧಿಸಿದ ಎಲ್ಲ ಇಲಾಖೆಗಳ ಅಧಿಕಾರಿಗಳು ತಾಲೂಕು ಮಟ್ಟದಲ್ಲಿ ರೈತರನ್ನು ಭೇಟಿ ಮಾಡಿ, ಅವರನ್ನು ಸಮಸ್ಯೆಗಳನ್ನು ಅರಿಯಲು ಸೂಚಿಸಿದ್ದೇನೆ ಅವರು ಹೇಳಿದರು.
ರಾಹುಲ್ ಬಂದರೆ ಸ್ವಾಗತ: ರೈತರ ಆತ್ಮಹತ್ಯೆ ಹಿನ್ನೆಲೆಯಲ್ಲಿ ಎಐಸಿಸಿ ಉಪಾಧ್ಯಕ್ಷ ರಾಹುಲ್ ಗಾಂಧಿ ಅವರು ರಾಜ್ಯಕ್ಕೆ ಬರುವುದರ ಬಗ್ಗೆ ಮಾಹಿತಿ ಇಲ್ಲ. ಅವರು ರಾಜ್ಯಕ್ಕೆ ಬಂದರೆ ಸ್ವಾಗತಿಸುತ್ತೇವೆ. ಮಂಡ್ಯ ಜಿಲ್ಲೆಯಲ್ಲಿ ಹೆಚ್ಚಿನ ರೈತರ ಆತ್ಮಹತ್ಯೆ ಮಾಡಿಕೊಂಡಿರುವ ಹಿನ್ನೆಲೆಯಲ್ಲಿ ರೈತರ ಮನೆಗಳಿಗೆ ಸದ್ಯದಲ್ಲೇ ಭೇಟಿ ನೀಡಲಿದ್ದೇನೆ. ಎಲ್ಲ ರೈತರ ಮನೆಗಳಿಗೆ ಭೇಟಿ ನೀಡಲು ಸಾಧ್ಯವಿಲ್ಲ. ಆತ್ಮಹತ್ಯೆ ಮಾಡಿಕೊಂಡಿರುವ ಕೆಲವು ರೈತರ ಮನೆಗೆ ಭೇಟಿ ನೀಡಿ ಸಾಂತ್ವನ ಹೇಳುವೆ ಎಂದು ಸಿದ್ದರಾಮಯ್ಯ ತಿಳಿಸಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


