ವ್ಯಾಪಂ ಹಗರಣ: ತನಿಖೆಗೆ ಇಂದು ಭೋಪಾಲ್ ತೆರಳಲಿರುವ ಸಿಬಿಐ ತಂಡ
ದೇಶವನ್ನೇ ಬೆಚ್ಚಿ ಬೀಳಿಸಿರುವ ವ್ಯಾಪಂ ಹಗರಣದ ತನಿಖೆಗೆ ಸಿಬಿಐ ತಂಡ ಮಂಗಳವಾರ ಭೋಪಾಲ್ ಗೆ ತೆರಳಲಿದೆ ಎಂದು ತಿಳಿದುಬಂದಿದೆ.

ನವದೆಹಲಿ: ದೇಶವನ್ನೇ ಬೆಚ್ಚಿ ಬೀಳಿಸಿರುವ ವ್ಯಾಪಂ ಹಗರಣದ ತನಿಖೆಗೆ ಸಿಬಿಐ ತಂಡ ಮಂಗಳವಾರ ಭೋಪಾಲ್ ಗೆ ತೆರಳಲಿದೆ ಎಂದು ತಿಳಿದುಬಂದಿದೆ.
ಈ ತನಿಖಾ ಏಜೆನ್ಸಿ ೪೦ ಅಧಿಕಾರಗಳ ತಂಡವನ್ನು ರಚಿಸಿದ್ದು, ಸಹ ನಿರ್ದೇಶಕ ಶ್ರೇಣಿಯ ಅಧಿಕಾರಿ ತಂಡವನ್ನು ಮುನ್ನಡೆಸಲಿದ್ದಾರೆ.
ವ್ಯಾಪಂ ಹಗರಣದ ಎಲ್ಲಾ ಪ್ರಕರಣಗಳನ್ನು, ಸುಪ್ರೀಂ ಕೋರ್ಟ್ ಕಳೆದ ವಾರ ಸಿಬಿಐಗೆ ವರ್ಗಾಯಿಸಿತ್ತು.
ರಾಜ್ಯದ ರಾಜ್ಯಪಾಲ ರಾಮ್ ನರೇಶ್ ಯಾದವ್ ಅವರ ವಜಾಕ್ಕಾಗಿ ಸಲ್ಲಿಸಿದ್ದ ಅರ್ಜಿ ವಿಚಾರಣೆ ಮಾಡಿದ್ದ ಸುಪ್ರೀಂ ಕೋರ್ಟ್, ಮಧ್ಯ ಪ್ರದೇಶ ಸರ್ಕಾರ ಮತ್ತು ಕೇಂದ್ರ ಸರ್ಕಾರಗಳಿಗೆ ನೋಟಿಸ್ ನೀಡಿ ನಾಲ್ಕು ವಾರದೊಳಗೆ ಉತ್ತರಿಸುವಂತೆ ಸೂಚಿಸಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


