ಪ್ರಧಾನ ಸುದ್ದಿ

ದೆಹಲಿ ಶಾಲೆಯೊಂದರಲ್ಲಿ ಇಬ್ಬರು ಭದ್ರತಾ ಸಿಬ್ಬಂದಿಗಳ ಅಸಹಜ ಸಾವು

ದೆಹಲಿಯ ಶಾಲೆಯೊಂದರ ಇಬ್ಬರು ಭದ್ರತಾ ಸಿಬ್ಬಂದಿಗಳು ಅಸಹಜವಾಗಿ ಮೃತಪಟ್ಟಿರುವುದು ಬುಧವಾರ ತಿಳಿದುಬಂದಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ದೆಹಲಿ ಶಾಲೆಯೊಂದರಲ್ಲಿ ಇಬ್ಬರು ಭದ್ರತಾ ಸಿಬ್ಬಂದಿಗಳ ಅಸಹಜ ಸಾವು
ಸಾಂದರ್ಭಿಕ ಚಿತ್ರ
Published On :

ನವದೆಹಲಿ: ದೆಹಲಿಯ ಶಾಲೆಯೊಂದರ ಇಬ್ಬರು ಭದ್ರತಾ ಸಿಬ್ಬಂದಿಗಳು ಅಸಹಜವಾಗಿ ಮೃತಪಟ್ಟಿರುವುದು ಬುಧವಾರ ತಿಳಿದುಬಂದಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಸುಮಾರು ೩೦ ಆಸುಪಾಸು ವಯಸ್ಸಿನ ಸಹೋದರರಾದ ಸುನಿಲ್ ಮತ್ತು ಅನಿಲ್ ಅವರ ಮೃತ ದೇಹಗಳು, ದೆಹಲಿಯ ಯುನೈಟೆಡ್ ಕ್ರಿಶ್ಚಿಯನ್ ಸೀನಿಯರ್ ಸೆಕಂಡರಿ ಶಾಲೆಯ ಆವರಣದಲ್ಲಿ ಬೆಳಗ್ಗೆ ೬ ಘಂಟೆಗೆ ಪತ್ತೆಯಾಗಿವೆ.

"ಯಾವುದೋ ತೂಕದ ವಸ್ತುವಿನಿಂದ ಅವರ ತಲೆಗೆ ಹೊಡೆದಿರುವುದು ಮೇಲ್ನೋಟಕ್ಕೆ ಕಂಡುಬರುತ್ತದೆ. ಇದರಿಂದ ಅವರು ಸಾವನ್ನಪ್ಪಿದ್ದಾರೆ. ಹಗ್ಗ ಬಳಸಿ ಅವರ ಕೈಗಳನ್ನು ಮತ್ತು ಕಾಲುಗಳನ್ನು ಕಟ್ಟಿಹಾಕಲಾಗಿದೆ" ಎಂದಿ ಪೊಲೀಸ್ ಅಧಿಕಾರಿ ತಿಳಿಸಿದ್ದಾರೆ.

ಈ ಸಹೋದರರ ಮೇಲೆ ರಾತ್ರಿಯ ವೇಳೆಯಲ್ಲಿ ದಾಳಿ ನಡೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.