ಪ್ರಧಾನ ಸುದ್ದಿ

ಕೆಪಿಎಸ್‌ಸಿ ಅಕ್ರಮ ನೇಮಕಾತಿ ಪ್ರಕರಣ: ಆಶಾ ಫರ್ವಿನ್ ಸೇರಿ ಐವರು ವಿರುದ್ಧದ ಕೇಸ್ ರದ್ದು

ಕರ್ನಾಟಕ ಲೋಕಸೇವಾ ಆಯೋಗ(ಕೆಪಿಎಸ್‌ಸಿ)ದ ಅಕ್ರಮ ನೇಮಕಾತಿ ಪ್ರಕರಣಕ್ಕೆ ಸಂಬಂಧಿಸಿದಂತೆ ವಿವಾದಿತ ಕೆಎಎಸ್ ಅಧಿಕಾರಿ ಆಶಾ ಪರ್ವಿನ್ ಹಾಗೂ...

ಕೆಪಿಎಸ್‌ಸಿ ಅಕ್ರಮ ನೇಮಕಾತಿ ಪ್ರಕರಣ: ಆಶಾ ಫರ್ವಿನ್ ಸೇರಿ ಐವರು ವಿರುದ್ಧದ ಕೇಸ್ ರದ್ದು
ಹೈಕೋರ್ಟ್
Published On :

ಬೆಂಗಳೂರು: ಕರ್ನಾಟಕ ಲೋಕಸೇವಾ ಆಯೋಗ(ಕೆಪಿಎಸ್‌ಸಿ)ದ ಅಕ್ರಮ ನೇಮಕಾತಿ ಪ್ರಕರಣಕ್ಕೆ ಸಂಬಂಧಿಸಿದಂತೆ ವಿವಾದಿತ ಕೆಎಎಸ್ ಅಧಿಕಾರಿ ಆಶಾ ಪರ್ವಿನ್ ಹಾಗೂ ಸಲ್ಮಾ ಫಿರ್ದೋಸ್ ಸೇರಿದಂತೆ ಐವರು ವಿರುದ್ಧದ ಪ್ರಕರಣಗಳನ್ನು ಹೈಕೋರ್ಟ್ ಏಕ ಸದಸ್ಯ ಪೀಠ ಗುರುವಾರ ರದ್ದುಗೊಳಿಸಿದೆ.

1998ರ ಕೆಪಿಎಸ್‌ಸಿ ಅಕ್ರಮ ನೇಮಕಾತಿ ಪ್ರಕರಣ ಸಂಬಂಧ ಆಶಾ ಪರ್ವಿನ್‌, ಸಲ್ಮಾ ಫಿರ್ದೊಷ್‌, ಪಿ.ಗೋಪಿಕೃಷ್ಣ, ಎಂ.ಬಿ.ಬಣಕಾರ ಹಾಗೂ ಕೆ.ನರಸಿಂಹ ಸೇರಿದಂತೆ 19 ಅಧಿಕಾರಿಗಳ ವಿರುದ್ಧ ಸಿಐಡಿ ಎಫ್‌ಐಆರ್ ದಾಖಲಿಸಿ, ಚಾರ್ಜ್‌ಶೀಟ್ ಸಲ್ಲಿಸಿತ್ತು.

ನಕಲಿ ಜಾತಿ ಪ್ರಮಾಣ ಪತ್ರ, ದಾಖಲೆಗಳನ್ನು ತಿದ್ದಿರುವುದು ತನಿಖೆಯಲ್ಲಿ ಪತ್ತೆಯಾಗಿದೆ. ಕೆಪಿಎಸ್‌ಸಿ ಸದಸ್ಯರು ಹಾಗೂ ಅಧಿಕಾರಿಗಳು ಅಧಿಕಾರ ದುರುಪಯೋಗ ಮಾಡಿಕೊಂಡು ಕೆಲವರ ಪರವಾಗಿ ಸಂದರ್ಶನ ಹಾಗೂ ಪರೀಕ್ಷೆಯಲ್ಲಿ ಅವ್ಯವಹಾರ ನಡೆಸಿದ್ದಾರೆ ಎಂದು ಸಿಐಡಿ ಆರೋಪಿಸಿತ್ತು.

ಪ್ರಕರಣದ ವಿಚಾರಣೆ ನಡೆಸಿದ ಹೈಕೋರ್ಟ್ ಏಕ ಸದಸ್ಯ ಪೀಠ, ಸೂಕ್ತ ಸಾಕ್ಷ್ಯಾಧಾರಗಳು ಇಲ್ಲದ ಹಿನ್ನೆಲೆಯಲ್ಲಿ ಇಂದು ಆಶಾ ಪರ್ವಿನ್‌, ಸಲ್ಮಾ ಫಿರ್ದೊಷ್‌, ಪಿ.ಗೋಪಿಕೃಷ್ಣ, ಎಂ.ಬಿ.ಬಣಕಾರ ಹಾಗೂ ಕೆ.ನರಸಿಂಹ ವಿರುದ್ಧದ ಕೇಸ್ ಗಳನ್ನು ರದ್ದುಗೊಳಿಸಿ ತೀರ್ಪು ನೀಡಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.