ಪ್ರಧಾನ ಸುದ್ದಿ

ಆತ್ಮಹತ್ಯೆಗೆ ಶರಣಾದ ರೈತರ ಮನೆಗೆ ಭೇಟಿ ನೀಡಿ: ಜಿಲ್ಲಾ ಉಸ್ತುವಾರಿ ಸಚಿವರಿಗೆ ಸಿಎಂ ಸೂಚನೆ

ಒಂದು ಕಡೆ ರಾಜ್ಯದಲ್ಲಿ ರೈತರ ಆತ್ಮಹತ್ಯೆ ಸರಣಿ ಮುಂದುವರೆದಿದೆ. ಮತ್ತೊಂದು ಕಡೆ ರೈತರ ಆತ್ಮಹತ್ಯೆ ವಿಚಾರದಲ್ಲಿ ಆಡಳಿತ ಹಾಗೂ ಪ್ರತಿಪಕ್ಷಗಳ....

ಆತ್ಮಹತ್ಯೆಗೆ ಶರಣಾದ ರೈತರ ಮನೆಗೆ ಭೇಟಿ ನೀಡಿ: ಜಿಲ್ಲಾ ಉಸ್ತುವಾರಿ ಸಚಿವರಿಗೆ ಸಿಎಂ ಸೂಚನೆ
ಸಿದ್ದರಾಮಯ್ಯ
Published On :

ಬೆಂಗಳೂರು: ಒಂದು ಕಡೆ ರಾಜ್ಯದಲ್ಲಿ ರೈತರ ಆತ್ಮಹತ್ಯೆ ಸರಣಿ ಮುಂದುವರೆದಿದೆ. ಮತ್ತೊಂದು ಕಡೆ ರೈತರ ಆತ್ಮಹತ್ಯೆ ವಿಚಾರದಲ್ಲಿ ಆಡಳಿತ ಹಾಗೂ ಪ್ರತಿಪಕ್ಷಗಳ ರಾಜಕೀಯವೂ ಜೋರಾಗಿದೆ.

ಪ್ರತಿಪಕ್ಷ ಬಿಜೆಪಿ ಆರು ತಂಡಗಳಲ್ಲಿ ಸಾಲಬಾಧೆಯಿಂದ ಆತ್ಮಹತ್ಯೆಗೆ ಶರಣಾದ ರೈತರ ಮನೆಗೆ ತೆರಳಿ, ಸಾಂತ್ವಾನ ಹೇಳಲು ಮುಂದಾಗಿರುವ ಬೆನ್ನಲ್ಲೇ, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸಹ ಆತ್ಮಹತ್ಯೆ ಮಾಡಿಕೊಂಡ ರೈತರ ಮನೆಗೆ ಭೇಟಿ ನೀಡುವಂತೆ ಜಿಲ್ಲಾ ಉಸ್ತುವಾರಿ ಸಚಿವರಿಗೆ ಸೂಚಿಸಿದ್ದಾರೆ.

ಈ ಸಂಬಂಧ ಎಲ್ಲಾ ಜಿಲ್ಲಾ ಉಸ್ತುವಾರಿ ಸಚಿವರಿಗೆ ಪತ್ರ ಬರೆದಿರುವ ಸಿಎಂ, ಖುದ್ದು ಆತ್ಮಹತ್ಯೆ ಮಾಡಿಕೊಂಡ ರೈತರ ಮನೆ ತೆರಳಿ, ಅವರ ಕುಟುಂಬಕ್ಕೆ ಸಾಂತ್ವಾನ ಹೇಳಿ ಮತ್ತು ಪರಿಹಾರ ನೀಡುವಂತೆ ಸೂಚಿಸಿದ್ದಾರೆ.

ಮಾಜಿ ಮುಖ್ಯಮಂತ್ರಿ ಎಸ್.ಎಂ.ಕೃಷ್ಣ ಮೃತ ರೈತರ ಕುಟುಂಬಗಳಿಗೆ ಬೇಟಿ ನೀಡಲು ನಿರ್ಧರಿಸಿದ್ದು, ಇಂದಿನಿಂದ ಎರಡು ದಿನಗಳ ಕಾಲ ಮಂಡ್ಯ ಜಿಲ್ಲೆಯಲ್ಲಿ ಪ್ರವಾಸ ಕೈಗೊಂಡು ರೈತರಿಗೆ ಆತ್ಮಸ್ಥೈಯ ತುಂಬಲು ಮುಂದಾಗಿದ್ದಾರೆ. ಇದಲ್ಲದೇ, ರಾಜ್ಯದ ಬೇರೆ ಭಾಗಗಳಲ್ಲಿ ಮೃತಪಟ್ಟ ರೈತರ ಕುಟುಂಬಗಳಿಗೂ ಭೇಟಿ ನೀಡಲು ನಿರ್ಧರಿಸಿದ್ದಾರೆ.

ಇನ್ನು ರೈತ ಆತ್ಮಹತ್ಯೆ ವಿಚಾರವನ್ನು ಗಂಭೀರವಾಗಿ ಪರಿಗಣಿಸಿದ್ದ ರಾಜ್ಯಪಾಲ ವಜುಭಾಯಿ ವಾಲಾ ಅವರು ನಿನ್ನೆಯಷ್ಟೇ ಈ ಸಂಬಂಧ ಸರ್ಕಾರಕ್ಕೆ ಪತ್ರ ಬರೆದು, ವರದಿ ನೀಡುವಂತೆ ಸೂಚಿಸಿದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.