ಎಂ.ಎನ್. ರೆಡ್ಡಿ ವಿರುದ್ಧ ಲೋಕಾಯುಕ್ತಕ್ಕೆ ದೂರು: ಮಹಾಪಾತ್ರ ಅಮಾನತು ಸಾಧ್ಯತೆ
ನಗರ ಪೊಲೀಸ್ ಆಯುಕ್ತ ಎಂ.ಎನ್.ರೆಡ್ಡಿ ವಿರುದ್ಧ ಲೋಕಾಯುಕ್ತಕ್ಕೆ ದೂರು ನೀಡಿದ್ದ ಐಪಿಎಸ್ ಅಧಿಕಾರಿ, ಕರ್ನಾಟಕ ಪೊಲೀಸ್ ಗೃಹ ನಿರ್ಮಾಣ ನಿಗಮದ ಡಿಜಿಪಿ...

ಬೆಂಗಳೂರು: ನಗರ ಪೊಲೀಸ್ ಆಯುಕ್ತ ಎಂ.ಎನ್.ರೆಡ್ಡಿ ವಿರುದ್ಧ ಲೋಕಾಯುಕ್ತಕ್ಕೆ ದೂರು ನೀಡಿದ್ದ ಐಪಿಎಸ್ ಅಧಿಕಾರಿ, ಕರ್ನಾಟಕ ಪೊಲೀಸ್ ಗೃಹ ನಿರ್ಮಾಣ ನಿಗಮದ ಡಿಜಿಪಿ ಸುಶಾಂತ್ ಮಹಾಪಾತ್ರ ಅವರ ವಿರುದ್ಧ ಶಿಸ್ತು ಕ್ರಮಕ್ಕೆ ಮುಂದಾಗಿರುವ ಸರ್ಕಾರ ಅವರನ್ನು ಅಮಾನತು ಮಾಡುವ ಸಾಧ್ಯತೆ ಇದೆ.
ಎಂ.ಎನ್.ರೆಡ್ಡಿ ಅವರು ಪೊಲೀಸ್ ಗೃಹ ನಿಗಮದಲ್ಲಿ ವ್ಯವಸ್ಥಾಪಕ ನಿರ್ದೇಶಕರಾಗಿದ್ದ ವೇಳೆ ಅಧಿಕಾರ ದುರುಪಯೋಗ ಮಾಡಿಕೊಂಡು, ಗೃಹ ನಿರ್ಮಾಣ ಕಾಮಗಾರಿಗಳಲ್ಲಿ ಅಕ್ರಮ ಎಸಗಿದ್ದಾರೆ ಎಂದು ಆರೋಪಿಸಿ ಮಹಾಪಾತ್ರ ಅವರು ಉಪ ಲೋಕಾಯುಕ್ತ ಸುಭಾಶ್ ಬಿ.ಅಡಿ ಅವರಿಗೆ ದೂರು ನೀಡಿದ್ದರು.
ಮಹಾಪಾತ್ರ ಅವರು ಮಾಧ್ಯಮಗಳ ಮುಂದೆ ಬಹಿರಂಗವಾಗಿ ಪೊಲೀಸ್ ಆಯುಕ್ತರ ವಿರುದ್ಧ ಆರೋಪ ಮಾಡಿದ ನಂತರ, ಮುಖ್ಯಮಂತ್ರಿ ಸಿದ್ದರಾಮಯ್ಯ, ಗೃಹ ಸಚಿವ ಕೆ.ಜೆ.ಜಾರ್ಜ್, ಸರ್ಕಾರದ ಮುಖ್ಯ ಕಾರ್ಯದರ್ಶಿ ಕೌಶಿಕ್ ಮುಖರ್ಜಿ ಹಾಗೂ ಪೊಲೀಸ್ ಮಹಾ ನಿರ್ದೇಶಕ ಓಂ ಪ್ರಕಾಶ್ ಅವರು ಸಭೆ ಸೇರಿ, ಮಹಾಪಾತ್ರ ವಿರುದ್ಧ ಶಿಸ್ತು ಕ್ರಮ ತೆಗೆದುಕೊಳ್ಳುವ ಬಗ್ಗೆ ಚರ್ಚಿಸಿದ್ದಾರೆ ಎನ್ನಲಾಗಿದೆ.
ಎಂ.ಎನ್.ರೆಡ್ಡಿ ಅವರು ಸಿಬಿಐ ಬ್ಲಾಕ್ ಲಿಸ್ಟ್‌ನಲ್ಲಿದ್ದ ಪರ್ಲ್ಸ್ ಕನ್ಸ್‌ಟ್ರಕ್ಷನ್ ಕಂಪನಿಗೆ ಗುತ್ತಿಗೆ ನೀಡಿದ್ದಾರೆ. ಹೀಗಾಗಿ ಇದರಲ್ಲಿ ಭಾರಿ ಅವ್ಯವಹಾರ ನಡೆದಿರುವ ಸಾಧ್ಯತೆ ಇದ್ದು, ಈ ಬಗ್ಗೆ ಸೂಕ್ತ ತನಿಖೆ ನಡೆಸುವಂತೆ ಕಳೆದ ಮಂಗಳವಾರ ಮಹಾಪಾತ್ರ ಲೋಕಾಯುಕ್ತರಿಗೆ ದೂರು ನೀಡಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


