ಪ್ರಧಾನ ಸುದ್ದಿ

ಲಲಿತ್ ಮೋದಿ ಪ್ರಕರಣ ಸಂಬಂಧ ಮಾತನಾಡಲು ಸುಷ್ಮಾಗೆ ಅವಕಾಶ

ಸಂಸತ್ತಿನ ಮನ್ಸೂನ್ ಅಧಿವೇಶನದಲ್ಲಿ ಐಪಿಎಲ್ ಮಾಜಿ ಅಧ್ಯಕ್ಷ ಲಲಿತ್ ಮೋದಿ ಪ್ರಕರಣ ಸಂಬಂಧ ವಿದೇಶಾಂಗ ....

ಲಲಿತ್ ಮೋದಿ ಪ್ರಕರಣ ಸಂಬಂಧ ಮಾತನಾಡಲು ಸುಷ್ಮಾಗೆ ಅವಕಾಶ
ಸುಷ್ಮಾ ಸ್ವರಾಜ್
Published On :

ನವದೆಹಲಿ: ಸಂಸತ್ತಿನ ಮನ್ಸೂನ್ ಅಧಿವೇಶನದಲ್ಲಿ ಐಪಿಎಲ್ ಮಾಜಿ ಅಧ್ಯಕ್ಷ ಲಲಿತ್ ಮೋದಿ ಪ್ರಕರಣ ಸಂಬಂಧ ವಿದೇಶಾಂಗ ವ್ಯವಹಾರಗಳ ಸಚಿವೆ ಸುಷ್ಮಾ ಸ್ವರಾಜ್ ಮಾತನಾಡಲು ಬಯಸಿದರೆ ಅನುಮತಿ ನೀಡಲಾಗುವುದು ಎಂದು ಸರ್ಕಾರ ತಿಳಿಸಿದೆ.

ಸಂಸತ್ ಅಧಿವೇಶನದಲ್ಲಿ ಪ್ರಕರಣ ಸಂಬಂಧ ಸಮರ್ಥನೆ ನೀಡಲು ಸುಷ್ಮಾ ಸ್ವರಾಜ್ ಗೆ ಅವಕಾಶ ನೀಡುವುದಾಗಿ ಸರ್ಕಾರ ಹೇಳಿದೆ. ಆದರೆ ಸುಷ್ಮಾ ಸ್ವರಾಜ್ ಸಂಸತ್ತಿನಲ್ಲಿ ಪ್ರಕರಣ ಸಂಬಂಧ ಸಮರ್ಥನೆ ನೀಡಲು ಅರ್ಹರಲ್ಲ. ಸಚಿವೆಯಾಗಿರುವ ಅವರಿಗೆ ಕೆಲವೊಂದು ನೀತಿ ಸಂಹಿತೆ ಹಾಗೂ ಕಟ್ಟು ಪಾಡುಗಳಿರುತ್ತವೆ. ಹೀಗಾಗಿ ಅವರಿಗೆ ತಮ್ಮ ಹೇಳಿಕೆ ನೀಡಲು ಅವಕಾಶ ನೀಡಬಾರದು ಎಂದು ಕಾಂಗ್ರೆಸ್ ಪಟ್ಟು ಹಿಡಿದಿದೆ. ಜೊತೆಗೆ ಸುಷ್ಮಾ ಸ್ವರಾಜ್ ರಾಜೀನಾಮೆ ನೀಡಬೇಕು ಎಂದು ಕಾಂಗ್ರೆಸ್ ವಕ್ತಾರ ಟಾಮ್ ವಡಕ್ಕನ್ ಆಗ್ರಹಿಸಿದ್ದಾರೆ.

ಲಂಡನ್ ನಲ್ಲಿ ವಾಸಿಸಲು ಲಲಿತ್ ಮೋದಿ ಅವರಿಗೆ ಸಹಾಯ ಮಾಡಿದ ಆರೋಪದ ಮೇಲೆ ರಾಜಸ್ತಾನ ಮುಖ್ಯಮಂತ್ರಿ ವಸುಂದರಾ ರಾಜೇ ಹಾಗೂ ವಿದೇಶಾಂಗ ವ್ಯವಹಾರಗಳ ಸಚಿವೆ ಸುಷ್ಮಾ ಸ್ವರಾಜ್ ಅವರ ರಾಜೀನಾಮೆ ಪಡೆಯಬೇಕೆಂದು ಕಾಂಗ್ರೆಸ್ ಬಿಜೆಪಿಯನ್ನು ಒತ್ತಾಯಿಸಿತ್ತು,.


Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.