ಭ್ರಷ್ಟಾಚಾರ: 5 ವರ್ಷಗಳಲ್ಲಿ 100 ಐಎಎಸ್ ಅಧಿಕಾರಿಗಳ ವಿರುದ್ಧ ಸಿಬಿಐ ಕೇಸ್
ವಿವಿಧ ಭ್ರಷ್ಟಾಚಾರ ಪ್ರಕರಣಗಳಿಗೆ ಸಂಬಂಧಿಸಿದಂತೆ ಕಳೆದ ಐದು ವರ್ಷಗಳಲ್ಲಿ ಸಿಬಿಐ 100 ಐಎಎಸ್ ಅಧಿಕಾರಿಗಳ ವಿರುದ್ಧ ಪ್ರಕರಣ ದಾಖಲಿಸಿದೆ. ಈ ಪೈಕಿ 66...

ನವದೆಹಲಿ: ವಿವಿಧ ಭ್ರಷ್ಟಾಚಾರ ಪ್ರಕರಣಗಳಿಗೆ ಸಂಬಂಧಿಸಿದಂತೆ ಕಳೆದ ಐದು ವರ್ಷಗಳಲ್ಲಿ ಸಿಬಿಐ 100 ಐಎಎಸ್ ಅಧಿಕಾರಿಗಳ ವಿರುದ್ಧ ಪ್ರಕರಣ ದಾಖಲಿಸಿದೆ. ಈ ಪೈಕಿ 66 ಅಧಿಕಾರಿಗಳ ವಿರುದ್ಧ ಪ್ರಾಸಿಕ್ಯೂಷನ್‌ಗೆ ಕೇಂದ್ರ ಸರ್ಕಾರ ಅನುಮತಿ ನೀಡಿದೆ.
2010ರಿಂದ ಇಲ್ಲಿಯವರೆಗೆ 10 ಸಿಎಎಸ್‌ಎಸ್(ಕೇಂದ್ರ ಸಚಿವಾಲಯ ಸೇವೆ) ಗ್ರೂಪ್ ಎ ಅಧಿಕಾರಿಗಳು ಹಾಗೂ 9 ಸಿಬಿಐ ಗ್ರೂಪ್ ಎ ಅಧಿಕಾರಿಗಳು ಸೇರಿದಂತೆ ಒಟ್ಟು 100 ಐಎಎಸ್ ಅಧಿಕಾರಿಗಳ ವಿರುದ್ಧ ಪ್ರಾಸಿಕ್ಯೂಷನ್‌ಗೆ ಅನುಮತಿ ಕೋರಿ ಸಿಬಿಐ ಮನವಿ ಸಲ್ಲಿಸಿದೆ ಎಂದು ಸಿಬ್ಬಂದಿ, ಸಾರ್ವಜನಿಕ ಕುಂದುಕೊರತೆ ಹಾಗೂ ಪಿಂಚಣಿ ಖಾತೆ ರಾಜ್ಯ ಸಚಿವ ಜಿತೇಂದ್ರ ಸಿಂಗ್ ಅವರು ಇಂದು ರಾಜ್ಯಸಭೆಗೆ ಲಿಖಿತ ಉತ್ತರ ನೀಡಿದ್ದಾರೆ.
8 ಸಿಎಸ್‌ಎಸ್ ಗ್ರೂಪ್ ಎ ಹಾಗೂ 6 ಸಿಬಿಐ ಗ್ರೂಪ್ ಎ ಅಧಿಕಾರಿಗಳು ಸೇರಿದಂತೆ ಕೇಂದ್ರ ಸರ್ಕಾರ ಇದುವರೆಗೆ ಒಟ್ಟು 66 ಅಧಿಕಾರಿಗಳ ವಿರುದ್ಧ ಪ್ರಾಸಿಕ್ಯೂಷನ್‌ಗೆ ಅನುಮತಿ ನೀಡಿದೆ ಸಚಿವರು ತಿಳಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


