ಲೋಕಾ ಭ್ರಷ್ಟಾಚಾರ: ಎಸ್‌ಐಟಿಯಿಂದ ಸರ್ಕಾರಕ್ಕೆ ಮಧ್ಯಂತರ ವರದಿ ಸಲ್ಲಿಕೆ
ರಾಜ್ಯದಲ್ಲಿ ತೀವ್ರ ಸಂಚಲನ ಮೂಡಿಸಿರುವ ಲೋಕಾಯುಕ್ತ ಸಂಸ್ಥೆಯಲ್ಲಿನ ಭ್ರಷ್ಟಾಚಾರ ಪ್ರಕರಣದ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ(ಎಸ್‌ಐಟಿ) ಗುರುವಾರ...

ಬೆಂಗಳೂರು: ರಾಜ್ಯದಲ್ಲಿ ತೀವ್ರ ಸಂಚಲನ ಮೂಡಿಸಿರುವ ಲೋಕಾಯುಕ್ತ ಸಂಸ್ಥೆಯಲ್ಲಿನ ಭ್ರಷ್ಟಾಚಾರ ಪ್ರಕರಣದ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ(ಎಸ್‌ಐಟಿ) ಗುರುವಾರ ಸರ್ಕಾರಕ್ಕೆ ಮಧ್ಯಂತರ ವರದಿ ಸಲ್ಲಿಸಿದೆ.
ಎಡಿಜಿಪಿ ಕಮಲ್ ಪಂಥ್ ನೇತೃತ್ವದ ಎಸ್‌ಐಟಿ ಇಂದು ಹೆಚ್ಚುವರಿ ಗೃಹ ಕಾರ್ಯದರ್ಶಿ ಎಸ್.ಕೆ.ಪಟ್ನಾಯಕ್ ಅವರಿಗೆ ಮಧ್ಯಂತರ ವರದಿ ಸಲ್ಲಿಸಿದೆ ಎಂದು ಮೂಲಗಳು ತಿಳಿಸಿವೆ.
ಆದರೆ ಪ್ರಕರಣದ ಪ್ರಮುಖ ಆರೋಪಿ ಹಾಗೂ ಲೋಕಾಯುಕ್ತ ನ್ಯಾಯಮೂರ್ತಿ ವೈ.ಭಾಸ್ಕರ್ ರಾವ್ ಅವರ ಪುತ್ರ ಅಶ್ವಿನ್ ರಾವ್ ಅವರನ್ನು ವಿಚಾರಣೆ ನಡೆಸದೇ ಎಸ್‌ಐಟಿ ಮಧ್ಯಂತರ ವರದಿ ನೀಡಿರುವುದು ಹಲವು ಅನುಮಾನಗಳಿಗೆ ಕಾರಣವಾಗಿದೆ.
ಇನ್ನು ಪ್ರಕರಣ ಸಂಬಂಧ ನಿನ್ನೆಯಷ್ಟೇ ವಿಚಾರಣೆಗೆ ಹಾಜರಾಗುವಂತೆ ಅಶ್ವಿನ್ ರಾವ್‌ಗೆ ನೋಟಿಸ್ ಜಾರಿ ಮಾಡಿದ್ದ ಎಸ್‌ಐಟಿ, ಇಂದು ಅಶ್ವಿನ್ ರಾವ್ ಬಂಧನಕ್ಕಾಗಿ ಹೈದರಾಬಾದ್ ಗೆ ತೆರಳಿದೆ ಎನ್ನಲಾಗುತ್ತಿದೆ.
ಲೋಕೋಪಯೋಗಿ ಇಲಾಖೆ ಕಾರ್ಯನಿರ್ವಾಹಕ ಎಂಜಿನಿಯರ್ ಕೃಷ್ಣಮೂರ್ತಿ ಅವರು ನೀಡಿದ ದೂರು ಆಧರಿಸಿ ತನಿಖೆ ನಡೆಸುತ್ತಿರುವ ಎಸ್ಐಟಿ ಅಧಿಕಾರಿಗಳು, ಕೃಷ್ಣಮೂರ್ತಿಯವರನ್ನು ಲೋಕಾಯುಕ್ತ ಕಚೇರಿಗೆ ಕರೆಸಿಕೊಂಡ ವ್ಯಕ್ತಿ ಯಾರು ಎನ್ನುವ ಬಗ್ಗೆ ತೀವ್ರ ವಿಚಾರಣೆ ನಡೆಸುತ್ತಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


