ಮುಂದುವರಿದ ವಿರೋಧ ಪಕ್ಷಗಳ ಗದ್ದಲ: ಲೋಕಸಭಾ ಕಲಾಪ ಸೋಮವಾರಕ್ಕೆ ಮುಂದೂಡಿಕೆ
ಸಂಸತ್ ನ ಮುಂಗಾರು ಅಧಿವೇಶನ ಪ್ರಾರಂಭವಾದ 4 ನೇ ದಿನವೂ ಲೋಕಸಭಾ ಕಲಾಪ ವ್ಯರ್ಥವಾಗಿದೆ.

ನವದೆಹಲಿ: ಸಂಸತ್ ನ ಮುಂಗಾರು ಅಧಿವೇಶನದ 4 ನೇ ದಿನವೂ ಲೋಕಸಭಾ ಕಲಾಪ ವ್ಯರ್ಥವಾಗಿದ್ದು, ಪ್ರತಿಪಕ್ಷಗಳ ಗದ್ದಲ ತೀವ್ರಗೊಂಡಿದ್ದರಿಂದ ಸೋಮವಾರದವರೆಗೆ ಮುಂದೂಡಲಾಗಿದೆ.
ರಾಜ್ಯಸಭೆಯಲ್ಲೂ ವಿರೋಧ ಪಕ್ಷಗಳ ಗದ್ದಲ ಮುಂದುವರೆದಿದ್ದು ಕಲಾಪವನ್ನು ಮಧ್ಯಾಹ್ನದ ವರೆಗೆ ಮುಂದೂಡಲಾಗಿದೆ. ವ್ಯಾಪಂ ಹಗರಣ, ಲೈಟ್ ಮೋದಿ ಪ್ರಕರಣವನ್ನು ಮುಂದಿಟ್ಟುಕೊಂಡು ಸರ್ಕಾರದ ವಿರುದ್ಧ ವಿರೋಧಪಕ್ಷಗಳು ಸಂಸತ್ ನಲ್ಲಿ ಪ್ರತಿಭಟನೆ ನಡೆಸುತ್ತಿವೆ. ಇದರಿಂದಾಗಿ ಅಧಿವೇಶನ ಪ್ರಾರಂಭವಾದಾಗಿನಿಂದಲೂ ಉಭಯ ಸದನಗಳ ಕಲಾಪಕ್ಕೆ ಅಡ್ಡಿಯುಂಟಾಗುತ್ತಿದ್ದು, ನಿರಂತರವಾಗಿ ಮುಂದೂಡಲಾಗುತ್ತಿದೆ.
ಅಧಿವೇಶನದ ಮೂರನೇ ದಿನವಾದ ಜು.23 ರಂದೂ ಸಹ ಪ್ರತಿಪಕ್ಷಗಳು ಪ್ರತಿಭಟನೆ ನಡೆಸಿ ಕೋಲಾಹಲ ಸೃಷ್ಠಿಸಿದ್ದರಿಂದ, ಲೋಕಸಭೆ, ರಾಜ್ಯಸಭೆಯ ಕಲಾಪಗಳನ್ನು ಪದೇ ಪದೇ ಮುಂದೂಡಲಾಗಿತ್ತು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


