ಪ್ರಧಾನ ಸುದ್ದಿ

ಲೋಕಾ ಭ್ರಷ್ಟಾಚಾರ: ಎಸ್‌ಐಟಿಯಿಂದ ಲೋಕಾಯುಕ್ತರ ಪುತ್ರ ಅಶ್ವಿನ್ ರಾವ್ ಬಂಧನ

ಲೋಕಾಯುಕ್ತ ಸಂಸ್ಥೆಯಲ್ಲಿನ ಭ್ರಷ್ಟಾಚಾರ ಪ್ರಕರಣದ ಪ್ರಮುಖ ಆರೋಪಿ ಲೋಕಾಯುಕ್ತ ನ್ಯಾಯಮೂರ್ತಿ ವೈ.ಭಾಸ್ಕರ್ ರಾವ್ ಅವರ ಪುತ್ರ...

ಲೋಕಾ ಭ್ರಷ್ಟಾಚಾರ: ಎಸ್‌ಐಟಿಯಿಂದ ಲೋಕಾಯುಕ್ತರ ಪುತ್ರ ಅಶ್ವಿನ್ ರಾವ್ ಬಂಧನ
ಅಶ್ವಿನ್ ರಾವ್
Published On :

ಬೆಂಗಳೂರು: ಲೋಕಾಯುಕ್ತ ಸಂಸ್ಥೆಯಲ್ಲಿನ ಭ್ರಷ್ಟಾಚಾರ ಪ್ರಕರಣದ ಪ್ರಮುಖ ಆರೋಪಿ ಲೋಕಾಯುಕ್ತ ನ್ಯಾಯಮೂರ್ತಿ ವೈ.ಭಾಸ್ಕರ್ ರಾವ್ ಅವರ ಪುತ್ರ ಅಶ್ವಿನ್ ರಾವ್ ಅವರನ್ನು ವಿಶೇಷ ತನಿಖಾ ತಂಡ(ಎಸ್‌ಐಟಿ) ಸೋಮವಾರ ಬಂಧಿಸಿದೆ.

ಬೆಂಗಳೂರು ಪಶ್ವಿಮ ವಲಯ ಡಿಸಿಪಿ ಲಾಬೂರಾಮ್ ನೇತೃತ್ವದ ಎಸ್‌ಐಟಿ ತಂಡ, ಇಂದು ಪ್ರಕರಣದ ಮೊದಲ ಆರೋಪಿ, ಅಶ್ವಿನ್ ರಾವ್ ಅವರನ್ನು ಮಹಾರಾಷ್ಟ್ರದ ಔರಂಗಬಾದ್‌ನಲ್ಲಿ ವಶಕ್ಕೆ ಪಡೆದಿದೆ.

ಪ್ರಕರಣ ಸಂಬಂಧ ಇದುವರೆಗೆ ಒಟ್ಟು ಆರು ಆರೋಪಿಗಳನ್ನು ಬಂಧಿಸಿರುವ ಎಸ್‌ಐಟಿ, ನಿನ್ನೆಯಷ್ಟೇ ಲೋಕಾಯುಕ್ತ ಜಂಟಿ ಆಯುಕ್ತ, ಸಾರ್ವಜನಿಕ ಸಂಪರ್ಕಾಧಿಕಾರಿ ಸೈಯದ್ ರಿಯಾಜ್ ಅವರನ್ನು ಬಂಧಿಸಿ, ವಿಚಾರಣೆ ನಡೆಸುತ್ತಿದೆ.

ಮತ್ತೊಂದೆಡೆ ಪ್ರಕರಣದಲ್ಲಿ ಭಾಗಿಯಾಗಿ ತಲೆಮರೆಸಿಕೊಂಡಿರುವ ಬಿಡಿಎ ಬ್ರೋಕರ್ ವಾಸು, ವಿ.ಭಾಸ್ಕರ್ ಅಲಿಯಾಸ್ 420 ಭಾಸ್ಕರ್ ಗಾಗಿ ಎಸ್ಐಟಿ ತಂಡ ತೀವ್ರ ಶೋಧ ನಡೆಸಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.