ಅಕ್ರಮ ಆಸ್ತಿ ಗಳಿಕೆ ಪ್ರಕರಣ: ತಮಿಳುನಾಡು ಸಿಎಂ ಜಯಾಗೆ ಸುಪ್ರೀಂ ನೋಟಿಸ್
ಅಕ್ರಮ ಆಸ್ತಿ ಗಳಿಕೆ ಪ್ರಕರಣ ಸಂಬಂಧ ತಮಿಳುನಾಡು ಮುಖ್ಯಮಂತ್ರಿ ಜೆ.ಜಯಲಲಿತಾ ಅವರಿಗೆ ಸೋಮವಾರ ಸುಪ್ರೀಂ ಕೋರ್ಟ್ ನೋಟಿಸ್ ಜಾರಿ ಮಾಡಿದೆ.

ನವದೆಹಲಿ: ಅಕ್ರಮ ಆಸ್ತಿ ಗಳಿಕೆ ಪ್ರಕರಣ ಸಂಬಂಧ ತಮಿಳುನಾಡು ಮುಖ್ಯಮಂತ್ರಿ ಜೆ.ಜಯಲಲಿತಾ ಅವರಿಗೆ ಸೋಮವಾರ ಸುಪ್ರೀಂ ಕೋರ್ಟ್ ನೋಟಿಸ್ ಜಾರಿ ಮಾಡಿದೆ.
ಜಯಾಗೆ ಕ್ಲೀನ್‌ಚಿಟ್ ನೀಡಿದ್ದ ಕರ್ನಾಟಕ ಹೈಕೋರ್ಟ್ ತೀರ್ಪು ಪ್ರಶ್ನಿಸಿ ಕರ್ನಾಟಕ ಸರ್ಕಾರ ಸಲ್ಲಿಸಿದ್ದ ಮೇಲ್ಮನವಿ ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಪಿ.ಸಿ.ಘೋಸ್, ಈ ಸಂಬಂಧ ಜಯಲಲಿತಾ ಹಾಗೂ ಇತರರಿಗೆ ನೋಟಿಸ್ ಜಾರಿ ಮಾಡಿದೆ.
ಮೇ 13ರಂದು ಜಯಲಲಿತಾ ನಿರ್ದೋಷಿ ಎಂದು ಹೈಕೋರ್ಟ್ ತೀರ್ಪು ನೀಡಿತ್ತು. ಈ ತೀರ್ಪು ಪ್ರಶ್ನಿಸಿ ರಾಜ್ಯ ಸರ್ಕಾರ ಸುಪ್ರೀಂ ಕೋರ್ಟ್‌ನಲ್ಲಿ ಮೇಲ್ಮನವಿ ಸಲ್ಲಿಸಿದೆ.
ಅಕ್ರಮ ಆಸ್ತಿ ಗಳಿಕೆ ಲೆಕ್ಕಾಚಾರದಲ್ಲಿ ತಪ್ಪಾಗಿದ್ದು, ಲೆಕ್ಕಾಚಾರ ಸರಿಪಡಿಸಿದರೆ ಜಯಲಲಿತಾ ಅವರ ಅಕ್ರಮ ಆಸ್ತಿ ಪ್ರಮಾಣ ಶೇ.76ರಷ್ಟು ಹೆಚ್ಚಾಗುತ್ತದೆ. ಸ್ವತಃ ಆರೋಪಿಗಳೇ ಕೆಲ ಅಂಕಿ ಅಂಶಗಳನ್ನು ಒಪ್ಪಿಕೊಂಡಿದ್ದಾರೆ. ಆದರೆ ಹೈಕೋರ್ಟ್ ಕಡಿಮೆ ಅಂಕಿ ಅಂಶವನ್ನು ಪರಿಗಣಿಸಿದೆ. ಹೀಗಾಗಿ ಹೈಕೋರ್ಟ್ ತೀರ್ಪು ದೋಷಪೂರಿತವಾಗಿದ್ದು, ತೀರ್ಪು ರದ್ದುಪಡಿಸಬೇಕು ಎಂದು ಕರ್ನಾಟಕ ಮೇಲ್ಮನವಿ ಸಲ್ಲಿಸಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


