ಗುರುವಾರ ಬೆಳಗ್ಗೆ 10.30ಕ್ಕೆ ಡಾ.ಕಲಾಂ ಅಂತ್ಯಕ್ರಿಯೆ
ತಮಿಳುನಾಡಿನ ರಾಮನಾಥಪುರಂ ಜಿಲ್ಲೆಯ ರಾಮೇಶ್ವರಂನಲ್ಲಿ ಗುರುವಾರ ಬೆಳಗ್ಗೆ ಮಾಜಿ ರಾಷ್ಟ್ರಪತಿ ಡಾ.ಎ.ಪಿ.ಜೆ.ಅಬ್ದುಲ್ ಕಲಾಂ ಅವರ...

ರಾಮೇಶ್ವರಂ: ತಮಿಳುನಾಡಿನ ರಾಮನಾಥಪುರಂ ಜಿಲ್ಲೆಯ ರಾಮೇಶ್ವರಂನಲ್ಲಿ ಗುರುವಾರ ಬೆಳಗ್ಗೆ ಮಾಜಿ ರಾಷ್ಟ್ರಪತಿ ಡಾ.ಎ.ಪಿ.ಜೆ.ಅಬ್ದುಲ್ ಕಲಾಂ ಅವರ ಅಂತ್ಯಸಂಸ್ಕಾರ ನಡೆಯಲಿದೆ ಎಂದು ಅವರ ಅಣ್ಣನ ಮಗ ಶೇಖ್ ಸಲೀಮ್ ಅವರು ಹೇಳಿದ್ದಾರೆ.
ನಾಳೆ ಇಡೀ ದಿನ ರಾಮೇಶ್ವರಂನಲ್ಲಿ ಸಾರ್ವಜನಿಕ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದ್ದು, ನಾಡಿದ್ದು ಬೆಳಗ್ಗೆ 10.30ಕ್ಕೆ ರಾಮೇಶ್ವರಂನ ಧನುಷ್ಕೋಟಿ ರಸ್ತೆಯಲ್ಲಿರುವ ಸರ್ಕಾರಿ ಜಮೀನಿನಲ್ಲಿ ಕಲಾಂ ಅವರ ಅಂತ್ಯಸಂಸ್ಕಾರ ನಡೆಯಲಿದೆ ಎಂದು ಸಲೀಮ್ ತಿಳಿಸಿದ್ದಾರೆ.
ಮಾಜಿ ರಾಷ್ಟ್ರಪತಿಯ ಅಂತ್ಯಕ್ರಿಯೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಹಾಗೂ ಆರು ರಾಜ್ಯಗಳ ಮುಖ್ಯಮಂತ್ರಿಗಳು ಸೇರಿದಂತೆ ಹಲವು ಗಣ್ಯರು ಭಾಗವಹಿಸಲಿದ್ದಾರೆ.
ಸಕಲ ಸರ್ಕಾರಿ ಗೌರವಗಳೊಂದಿಗೆ ಭಾರತ ರತ್ನ ಡಾ.ಎಪಿಜೆ ಅಬ್ದುಲ್ ಕಲಾಂ ಅವರ ಅಂತ್ಯಸಂಸ್ಕಾರ ನಡೆಯಲಿದೆ.
83 ವರ್ಷದ ಅಬ್ದುಲ್ ಕಲಾಂ ನಿನ್ನೆ ಶಿಲ್ಲಾಂಗ್ ನ ಐಐಎಂ ನಲ್ಲಿ ಉಪನ್ಯಾಸ ನೀಡುತ್ತಿರಬೇಕಾದರೆ ಏಕಾಏಕಿ ಕುಸಿದುಬಿದ್ದಿದ್ದರು. ಈ ವೇಳೆ ಆರೋಗ್ಯದಲ್ಲಿ ತೀವ್ರ ವ್ಯತ್ಯಾಸ ಕಂಡುಬಂದಿತ್ತು. ಕೂಡಲೇ ಅವರನ್ನು ಶಿಲ್ಲಾಂಗ್ ನ ಬೆಥೇನಿ ಆಸ್ಪತ್ರೆಯ ಐಸಿಯುಗೆ ದಾಖಲಿಸಿ ಚಿಕಿತ್ಸೆ ನೀಡಲಾಯಿತು. ಆದರೆ ಚಿಕಿತ್ಸೆಗೆ ಸ್ಪಂದಿಸದ ಅವರು ಕೊನೆಯುಸಿರೆಳೆದಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


