ನಾಳೆ ಕಲಾಂ ಹುಟ್ಟೂರು ರಾಮೇಶ್ವರಂನಲ್ಲಿ ಅಂತ್ಯಸಂಸ್ಕಾರ
ನಿನ್ನೆ ನಿಧನರಾದ ಮಾಜಿ ರಾಷ್ಟ್ರಪತಿ, ಭಾರತ ರತ್ನ ಡಾ.ಎಪಿಜೆ ಅಬ್ದುಲ್ ಕಲಾಂ ಅವರ ಅಂತ್ಯಸಂಸ್ಕಾರವನ್ನು ನಾಳೆ ಅವರ ಹುಟ್ಟೂರು ರಾಮೇಶ್ವರಂನಲ್ಲಿ ನಡೆಸಲು...

ನವದೆಹಲಿ: ನಿನ್ನೆ ನಿಧನರಾದ ಮಾಜಿ ರಾಷ್ಟ್ರಪತಿ, ಭಾರತ ರತ್ನ ಡಾ.ಎಪಿಜೆ ಅಬ್ದುಲ್ ಕಲಾಂ ಅವರ ಅಂತ್ಯಸಂಸ್ಕಾರವನ್ನು ನಾಳೆ ಅವರ ಹುಟ್ಟೂರು ರಾಮೇಶ್ವರಂನಲ್ಲಿ ನಡೆಸಲು ಕೇಂದ್ರ ಸರ್ಕಾರ ನಿರ್ಧರಿಸಿದೆ.
ಈ ಸಂಬಂಧ ಅಧಿಕೃತ ಪ್ರಕಟಣೆ ಹೊರಡಿಸಿರುವ ಕೇಂದ್ರ, ಕುಟುಂಬ ಸದಸ್ಯರ ಇಚ್ಛೆಯಂತೆ, ತಮಿಳುನಾಡಿನ ರಾಮನಾಥಪುರಂ ಜಿಲ್ಲೆಯ ರಾಮೇಶ್ವರಂನಲ್ಲೇ ಕಲಾಂ ಅವರ ಅಂತ್ಯಸಂಸ್ಕಾರವನ್ನು ನೆರವೇರಿಸಲು ನಿರ್ಧರಿಸಲಾಗಿದೆ.
ಕಲಾಂ ಪಾರ್ಥಿವ ಶರೀರ ಈಗಾಗಲೇ ಶಿಲ್ಲಾಂಗ್ ನಿಂದ ದೆಹಲಿಯ ಪಾಲಂ ವಿಮಾನ ನಿಲ್ದಾಣ ತಲುಪಿದ್ದು, ಇಂದು ಮಧ್ಯಾಹ್ನ 1ಗಂಟೆಯಿಂದ ಸಂಜೆ 6 ಗಂಟೆಯವರೆಗೆ ಸಾರ್ವಜನಿಕ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದೆ. ಬಳಿಕ ಕಲಾಂ ಪಾರ್ಥಿವ ಶರೀರವನ್ನು ರಾಮೇಶ್ವರಂಗೆ ಕೊಂಡೊಯ್ಯಲಾಗುತ್ತದೆ.
ನಾಳೆ ಸಕಲ ಸರ್ಕಾರಿ ಗೌರವಗಳೊಂದಿಗೆ ಭಾರತ ರತ್ನ ಡಾ.ಎಪಿಜೆ ಅಬ್ದುಲ್ ಕಲಾಂ ಅವರ ಅಂತ್ಯಸಂಸ್ಕಾರ ನಡೆಯಲಿದೆ.
83 ವರ್ಷದ ಅಬ್ದುಲ್ ಕಲಾಂ ನಿನ್ನೆ ಶಿಲ್ಲಾಂಗ್ ನ ಐಐಎಂ ನಲ್ಲಿ ಉಪನ್ಯಾಸ ನೀಡುತ್ತಿರಬೇಕಾದರೆ ಏಕಾಏಕಿ ಕುಸಿದುಬಿದ್ದಿದ್ದರು. ಈ ವೇಳೆ ಆರೋಗ್ಯದಲ್ಲಿ ತೀವ್ರ ವ್ಯತ್ಯಾಸ ಕಂಡುಬಂದಿತ್ತು. ಕೂಡಲೇ ಅವರನ್ನು ಶಿಲ್ಲಾಂಗ್ ನ ಬೆಥೇನಿ ಆಸ್ಪತ್ರೆಯ ಐಸಿಯುಗೆ ದಾಖಲಿಸಿ ಚಿಕಿತ್ಸೆ ನೀಡಲಾಯಿತು. ಆದರೆ ಚಿಕಿತ್ಸೆಗೆ ಸ್ಪಂದಿಸದ ಅವರು ಕೊನೆಯುಸಿರೆಳೆದಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


