ಪ್ರಧಾನ ಸುದ್ದಿ

ಕಲಾಂ ಪಾರ್ಥಿವ ಶರೀರ ದೆಹಲಿಗೆ; ರಾಷ್ಟ್ರಪತಿ, ಪ್ರಧಾನಿ ಅಂತಿಮ ನಮನ

ನಿನ್ನೆ ಮೇಘಾಲಯದ ಶಿಲ್ಲಾಂಗ್ ನಲ್ಲಿ ವಿಧಿವಶರಾದ ಮಾಜಿ ರಾಷ್ಟ್ರಪತಿ, ಭಾರತ ರತ್ನ ಡಾ. ಎಪಿಜೆ ಅಬ್ದುಲ್ ಕಲಾಂ ಅವರ ಪಾರ್ಥಿವ ಶರೀರವನ್ನು ದೆಹಲಿಗೆ ತರಲಾಗಿದೆ.

ಕಲಾಂ ಪಾರ್ಥಿವ ಶರೀರ ದೆಹಲಿಗೆ; ರಾಷ್ಟ್ರಪತಿ, ಪ್ರಧಾನಿ ಅಂತಿಮ ನಮನ
ಅಂತಿಮ ನಮನ ಸಲ್ಲಿಸುತ್ತಿರುವ ಪ್ರಧಾನಿ
Published On :

ನವದೆಹಲಿ: ನಿನ್ನೆ ಮೇಘಾಲಯದ ಶಿಲ್ಲಾಂಗ್ ನಲ್ಲಿ ವಿಧಿವಶರಾದ ಮಾಜಿ ರಾಷ್ಟ್ರಪತಿ, ಭಾರತ ರತ್ನ ಡಾ. ಎಪಿಜೆ ಅಬ್ದುಲ್ ಕಲಾಂ ಅವರ ಪಾರ್ಥಿವ ಶರೀರವನ್ನು ಮಂಗಳವಾರ ದೆಹಲಿಗೆ ತರಲಾಗಿದೆ.

ಅಸ್ಸಾಂನ ಗುವಾಹಟಿಯಿಂದ ವಾಯುಪಡೆಯ ವಿಶೇಷಾ ವಿಮಾನದಲ್ಲಿ ಕಲಾಂ ಅವರ ಪಾರ್ಥಿವ ಶರೀರವನ್ನು ದೆಹಲಿಗೆ ತರಲಾಗಿದ್ದು, ದೆಹಲಿ ಪಾಲಂ ವಿಮಾನ ನಿಲ್ದಾಣದಲ್ಲಿ ರಾಷ್ಟ್ರಪತಿ ಪ್ರಣಬ್ ಮುಖರ್ಜಿ ಅವರು ಪಾರ್ಥಿವ ಶರೀರವನ್ನು ಸ್ವೀಕರಿಸಿದರು.

ರಾಷ್ಟ್ರಪತಿ ಪ್ರಣಬ್ ಮುಖರ್ಜಿ, ಉಪ ರಾಷ್ಟ್ರಪತಿ ಹಮೀದ್ ಅನ್ಸಾರಿ, ಪ್ರಧಾನಿ ನರೇಂದ್ರ ಮೋದಿ, ರಕ್ಷಣಾ ಸಚಿವ ಮನೋಹರ್ ಪರಿಕ್ಕರ್ ಹಾಗೂ ಮೂರು ಸೇನಾಪಡೆಗಳ ಮುಖ್ಯಸ್ಥರು ಅಗಲಿದ ಭಾರತ ರತ್ನಕ್ಕೆ ಅಂತಿಮ ನಮನ ಸಲ್ಲಿಸಿದರು.

ಹಲವು ಗಣ್ಯರು ಅಂತಿಮ ನಮನ ಸಲ್ಲಿಸಿದ ಬಳಿಕ, ಪಾರ್ಥಿವ ಶರೀರವನ್ನು ತೆರೆದ ವಾಹನದಲ್ಲಿ ದೆಹಲಿಯ ರಾಜಾಜಿ ಮಾರ್ಗದಲ್ಲಿರುವ ಕಲಾಂ ಅವರ ನಿವಾಸಕ್ಕೆ ರವಾನಿಸಲಾಗಿದ್ದು, ಅಲ್ಲಿ ಮಧ್ಯಾಹ್ನ 3ಗಂಟೆಯಿಂದ ಸಂಜೆ 6 ಗಂಟೆಯವರೆಗೆ ಸಾರ್ವಜನಿಕ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದೆ.

83 ವರ್ಷದ ಅಬ್ದುಲ್ ಕಲಾಂ ನಿನ್ನೆ ಶಿಲ್ಲಾಂಗ್ ನ ಐಐಎಂ ನಲ್ಲಿ ಉಪನ್ಯಾಸ ನೀಡುತ್ತಿರಬೇಕಾದರೆ ಏಕಾಏಕಿ ಕುಸಿದುಬಿದ್ದಿದ್ದರು. ಈ ವೇಳೆ ಆರೋಗ್ಯದಲ್ಲಿ ತೀವ್ರ ವ್ಯತ್ಯಾಸ ಕಂಡುಬಂದಿತ್ತು. ಕೂಡಲೇ ಅವರನ್ನು ಶಿಲ್ಲಾಂಗ್ ನ ಬೆಥೇನಿ ಆಸ್ಪತ್ರೆಯ ಐಸಿಯುಗೆ ದಾಖಲಿಸಿ ಚಿಕಿತ್ಸೆ ನೀಡಲಾಯಿತು. ಆದರೆ ಚಿಕಿತ್ಸೆಗೆ ಸ್ಪಂದಿಸದ ಅವರು ಕೊನೆಯುಸಿರೆಳೆದಿದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.