ಲೋಕಾ ಭ್ರಷ್ಟಾಚಾರ: ಅಶ್ವಿನ್ ರಾವ್ 9 ದಿನ ಎಸ್‌ಐಟಿ ವಶಕ್ಕೆ
ಲೋಕಾಯುಕ್ತ ಸಂಸ್ಥೆಯಲ್ಲಿನ ಭ್ರಷ್ಟಾಚಾರ ಪ್ರಕರಣ ಸಂಬಂಧ ನಿನ್ನೆ ಬಂಧನಕ್ಕೊಳಗಾಗಿದ್ದ ಪ್ರಮುಖ ಆರೋಪಿ, ಲೋಕಾಯುಕ್ತ ನ್ಯಾಯಮೂರ್ತಿ ವೈ.ಭಾಸ್ಕರ್ ರಾವ್ ಅವರ ಪುತ್ರ...

ಬೆಂಗಳೂರು: ಲೋಕಾಯುಕ್ತ ಸಂಸ್ಥೆಯಲ್ಲಿನ ಭ್ರಷ್ಟಾಚಾರ ಪ್ರಕರಣ ಸಂಬಂಧ ನಿನ್ನೆ ಬಂಧನಕ್ಕೊಳಗಾಗಿದ್ದ ಪ್ರಮುಖ ಆರೋಪಿ, ಲೋಕಾಯುಕ್ತ ನ್ಯಾಯಮೂರ್ತಿ ವೈ.ಭಾಸ್ಕರ್ ರಾವ್ ಅವರ ಪುತ್ರ ಅಶ್ವಿನ್ ರಾವ್ ಅವರನ್ನು ಲೋಕಾಯುಕ್ತ ವಿಶೇಷ ಕೋರ್ಟ್ ಮಂಗಳವಾರ 9 ದಿನಗಳ ಕಾಲ ವಿಶೇಷ ತನಿಖಾ ತಂಡ(ಎಸ್‌ಐಟಿ)ದ ವಶಕ್ಕೆ ನೀಡಿದೆ.
ಮಹಾರಾಷ್ಟ್ರದ ಔರಂಗಬಾದ್‌ನಲ್ಲಿ ಅಶ್ವಿನ್ ರಾವ್ ಅವರನ್ನು ವಶಕ್ಕೆ ಪಡೆದಿದ್ದ ಬೆಂಗಳೂರು ಪಶ್ವಿಮ ವಲಯ ಡಿಸಿಪಿ ಲಾಬೂರಾಮ್ ನೇತೃತ್ವದ ಎಸ್‌ಐಟಿ ತಂಡ, ಇಂದು ಆರೋಪಿಯನ್ನು ಲೋಕಾಯುಕ್ತ ಕೋರ್ಟ್ ಗೆ ಹಾಜರುಪಡಿಸಲಾಗಿತ್ತು.
ವಿಚಾರಣೆ ನಡೆಸಿದ ಕೋರ್ಟ್, ಅಶ್ವಿನ್ ರಾವ್ ಅವರನ್ನು ಆಗಸ್ಟ್ 6ರವರೆಗೆ ಎಸ್ಐಟಿ ವಶಕ್ಕೆ ನೀಡಿದೆ. ಅಲ್ಲದೆ ವಿಚಾರಣೆ ವೇಳೆ ಆರೋಪಿಗೆ ಸೂಕ್ತ ಸಮಯಕ್ಕೆ ಆಹಾರ ಮತ್ತು ವೈದ್ಯಕೀಯ ಚಿಕಿತ್ಸೆ ಕೊಡಿಸುವಂತೆ ಎಸ್ಐಟಿ ಸೂಚಿಸಿದೆ.
ಪ್ರಕರಣ ಸಂಬಂಧ ಇದುವರೆಗೆ ಒಟ್ಟು ಆರು ಆರೋಪಿಗಳನ್ನು ಬಂಧಿಸಿರುವ ಎಸ್‌ಐಟಿ, ನಿನ್ನೆಯಷ್ಟೇ ಲೋಕಾಯುಕ್ತ ಪಿಆರ್‍ಒ, ಜಂಟಿ ಆಯುಕ್ತ ಸೈಯ್ಯದ್ ರಿಯಾಜ್ ಅವರನ್ನು ಆಗಸ್ಟ್ 5ರವರೆಗೆ ವಿಶೇಷ ತನಿಖಾ ತಂಡದ ವಶಕ್ಕೆ ಒಪ್ಪಿಸಿ ಲೋಕಾಯುಕ್ತ ವಿಶೇಷ ನ್ಯಾಯಾಲಯ ಆದೇಶಿಸಿತ್ತು.
ಮತ್ತೊಂದೆಡೆ ಪ್ರಕರಣದಲ್ಲಿ ಭಾಗಿಯಾಗಿ ತಲೆಮರೆಸಿಕೊಂಡಿರುವ ಬಿಡಿಎ ಬ್ರೋಕರ್ ವಾಸು, ವಿ.ಭಾಸ್ಕರ್ ಅಲಿಯಾಸ್ 420 ಭಾಸ್ಕರ್ ಗಾಗಿ ಎಸ್ಐಟಿ ತಂಡ ತೀವ್ರ ಶೋಧ ನಡೆಸಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


