ಪ್ರಧಾನ ಸುದ್ದಿ

ಲೋಕಾ ಖಾಲಿ ಹುದ್ದೆ ಭರ್ತಿಗೆ 45 ದಿನ ಗಡುವು

ಮುಂದಿನ 45 ದಿನದ ಒಳಗಾಗಿ ಲೋಕಾಯುಕ್ತ ಪೊಲೀಸ್ ಇಲಾಖೆಯಲ್ಲಿ ಖಾಲಿ ಇರುವ ಹುದ್ದೆಗಳಲ್ಲಿ ಶೇ.50ರಷ್ಟಾದರೂ ತುಂಬುವಂತೆ ಹೈಕೋರ್ಟ್ ಸರ್ಕಾರಕ್ಕೆ ಆದೇಶಿಸಿದೆ...

ಲೋಕಾ ಖಾಲಿ ಹುದ್ದೆ ಭರ್ತಿಗೆ 45 ದಿನ ಗಡುವು
ಹೈ ಕೋರ್ಟ್ (ಸಂಗ್ರಹ ಚಿತ್ರ)
Published On :

ಬೆಂಗಳೂರು: ಮುಂದಿನ 45 ದಿನದ ಒಳಗಾಗಿ ಲೋಕಾಯುಕ್ತ ಪೊಲೀಸ್ ಇಲಾಖೆಯಲ್ಲಿ ಖಾಲಿ ಇರುವ ಹುದ್ದೆಗಳಲ್ಲಿ ಶೇ.50ರಷ್ಟಾದರೂ ತುಂಬುವಂತೆ ಹೈಕೋರ್ಟ್ ಸರ್ಕಾರಕ್ಕೆ ಆದೇಶಿಸಿದೆ.

ಲೋಕಾಯುಕ್ತದಲ್ಲಿ ಪ್ರಕಱಣ ದಾಖಲಾಗಿ 18 ತಿಂಗಳಾದರೂ ತನಿಖೆ ಪೂರ್ಣಗೊಳಿಸದ ಹಿನ್ನೆಲೆಯಲ್ಲಿ ಮಂಡ್ಯ ವೈದ್ಯಕೀಯ ವಿಜ್ಞ3ನಗಳ ಸಂಸ್ಥೆಯಲ್ಲಿವೆ ಸೇವೆ ಸಲ್ಲಿಸುತ್ತಿದ್ದ ಡಾ.ವಿ.ಎಲ್.ನಂದೀಶ್ ಹೈ ಕೋರ್ಟ್ ನಲ್ಲಿ ಅರ್ಜಿ ದಾಖಲಿಸಿದ್ದರು. ಈ ಹಿಂದೆ ವಿಚಾರಣೆ ನಡೆಸಿದ್ದ ನ್ಯಾ.ಎ.ಎನ್.ವೇಣುಗೋಪಾಲ್ ಗೌಡ ಅವರಿದ್ದ ಏಕಸದಸ್ಯ ಪೀಠ, ಲೋಕಾಯುಕ್ತ ಪೊಲೀಸ್ ಇಲಾಖೆಯಲ್ಲಿ ಖಾಲಿ  ಇರುವ ಹುದ್ದೆಗಳನ್ನು ಆದ್ಯತೆ ಮೇರೆಗೆ ಬುಧವಾರದ (ಜು.29) ಒಳಗಾಗಿ ಭರ್ತಿ ಮಾಡುವಂತೆ ರಾಜ್ಯ ಸರ್ಕಾರಕ್ಕೆ ಹೈ ಕೋರ್ಟ್ ಆದೇಶಿಸಿತ್ತು.

ಬುಧವಾರ ವಿಚಾರಣೆ ವೇಳೆ ರಾಜ್ಯ ಸರ್ಕಾರದ ಪರ ಹೆಚ್ಚುವರಿ ಅಡ್ವೋಕೇಟ್ ಜನರಲ್ ಎ.ಎಸ್.ಪೊನ್ನಣ್ಣ ವಾದ ಮಂಡಸಿ, ಕಳೆದ ಐದು ವರ್ಷದಿಂದ ಪೊಲೀಸ್ ಇಲಾಖೆಯಲ್ಲಿ ಖಾಲಿ ಇರುವ ಹುದ್ದೆ ಭರ್ತಿ ಮಾಡದೇ ಇರುವ ಪರಿಣಾಮ ಸಮಸ್ತೆಯ ಬಂದೊದಗಿದೆ. ಸದ್ಯ ಹಾಲಿ ಇರುವ ಸರ್ಕಾರಿ ಪೊಲೀಸ್ ಇಲಾಖೆಯಲ್ಲಿನ ಹುದ್ದೆಗಳ ಭರ್ತಿಗೆ ಅಗತ್ಯ ಕ್ರಮ ತೆಗೆದುಕೊಂಡಿದ್ದು, ಶೀಘ್ರವೇ ಭರ್ತಿ ಮಾಡುವುದಾಗಿ ಪೀಠಕ್ಕೆ ಭರವಸೆ ನೀಡಿದರು. ಅಲ್ಲದೇ ಹುದ್ದೆ ಭರ್ತಿ, ಖಾಲಿ ಇರುವ ಹುದ್ದೆ ಕುರಿತು ಅಗತ್ಯ ಮಾಹಿತಿ ಒಳಗೊಂಡ ಪ್ರಮಾಣ ಪತ್ರವನ್ನು ಪೀಠಕ್ಕೆ ಸಲ್ಲಿಸಿದರು.

ಇದಕ್ಕೆ ಅತೃಪ್ತಿ ವ್ಯಕ್ತಪಡಿಸಿದ ಪೀಠ, ಇಲಾಖೆಗೆ ಮಂಜೂರಾಗಿರುವ ಹುದ್ದೆಗಳನ್ನಾದರೂ ಭರ್ತಿ ಮಾಡಬಹುದಿತ್ತಲ್ಲವೇ? ಸರ್ಕಾರ ಈ ಕುರಿತು ಏಕೆ ಕ್ರಮ ತೆಗೆದುಕೊಂಡಿಲ್ಲ ಎಂದು ನ್ಯಾ. ವೇಣುಗೊಪಾಲ ಗೌಡಸರ್ಕಾರವನ್ನು ಪ್ರಶ್ನಿಸಿದರು. ಇದಕ್ಕೆ ಉತ್ತರಿಸಿದ ಪೊನ್ನಣ್ಣ, ಲೋಕಾಯುಕ್ತದಲ್ಲಿನ ಪೊಲೀಸು ಹುದ್ದೆಗಳ ಭರ್ತಿಗೇನೂ ವಿಶೇಷವಿಲ್ಲ. ಪೊಲೀಸ್ ಇಲಾಖೆಗೆ ಅನ್ವಯವಾಗುತ್ತವೆ. ಈ ಹುದ್ದೆ ಭರ್ತಿ ಪ್ರಸ್ತಾಪ ಹಣಕಾಸು ಸಚಿವಾಲಯದ ಮುಂದಿದ್ದು, ಅವರಿಂದ ಅನುಮತಿ ಕೋರಿದ್ದೇವೆ ಎಂದರು. ಇದಕ್ಕೆ ಆಶ್ಚರ್ಯ ವ್ಯಕ್ತಪಡಿಸಿದ ಪೀಠ, ಮಂಜೂರಾದ ಹುದ್ದೆಗಳ ಭರ್ತಿಗೆ ಹಣಕಾಸು ಇಲಾಖೆ ಅನುಮತಿ ಏಕೆ ಬೇಕ? ಪ್ರತಿ ವರ್ಷದ ಆಯವ್ಯಯದಲ್ಲಿ ಸಂಬಂಧಪಟ್ಟ ಇಲಾಖೆಗೆ ಹಣ ಮೀಸಲಿಟ್ಟಿದ್ದು, ಅದನ್ನೇ ಬಳಸಬಹುದಲ್ಲವೇ ಎಂದು ಸರ್ಕಾರದ ಹೇಳಿಕೆಯ ಔಚಿತ್ಯ ಪ್ರಶ್ನಿಸಿತು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.