ಅಬ್ದುಲ್ ಕಲಾಂ ಅಂತ್ಯ ಸಂಸ್ಕಾರಕ್ಕೆ ಸಿದ್ದು, ರಾಹುಲ್ ಗಾಂಧಿ
ಮಾಜಿ ರಾಷ್ಟ್ರಪತಿ ಭಾರತ ರತ್ನ ಡಾ.ಎ.ಪಿ.ಜೆ. ಅಬ್ದುಲ್ ಕಲಾಂ ಅವರ ಅಂತ್ಯ ಸಂಸ್ಕಾರದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಕಾಂಗ್ರೆಸ್ ಉಪಾಧ್ಯಕ್ಷ ರಾಹುಲ್ ಗಾಂಧಿ ಅವರು ಪಾಲ್ಗೊಳ್ಳುತ್ತಿದ್ದಾರೆ.

ಬೆಂಗಳೂರು: ಮಾಜಿ ರಾಷ್ಟ್ರಪತಿ ಭಾರತ ರತ್ನ ಡಾ.ಎ.ಪಿ.ಜೆ. ಅಬ್ದುಲ್ ಕಲಾಂ ಅವರ ಅಂತ್ಯ ಸಂಸ್ಕಾರದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಕಾಂಗ್ರೆಸ್ ಉಪಾಧ್ಯಕ್ಷ ರಾಹುಲ್ ಗಾಂಧಿ ಅವರು ಪಾಲ್ಗೊಳ್ಳುತ್ತಿದ್ದಾರೆ.
ಮುಖ್ಯಮಂತ್ರಿಯವರು ಗುರುವಾರ ಮಧುರೈ ಹಾಗೂ ರಾಮನಾಥಪುರಂ ಮಾರ್ಗವಾಗಿ ರಾಮೇಶ್ವರಕ್ಕೆ ತೆರಳಿದ್ದಾರೆ. ಇದೇ ವೇಳೆ ಕಾಂಗ್ರೆಸ್ ಉಪಾಧ್ಯಕ್ಷ ರಾಹುಲ್ ಗಾಂಧಿ ಮತ್ತು ಪಕ್ಷದ ಮುಖಂಡ ಗುಲಾಂ ನಬಿ ಅಜಾದ್ ಅವರೂ ಕೂಡ ರಾಮೇಶ್ವರ ತಲುಪಿದ್ದು ಮೂವರು ನಾಯಕರು ಮಾಜಿ ರಾಷ್ಟ್ರಪತಿ ಅಬ್ದುಲ್ ಕಲಾಂ ಅವರ ಅಂತಿಮ ದರ್ಶನ ಪಡೆಯಲಿದ್ದಾರೆ.
ನಿನ್ನೆಯಷ್ಟೇ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಅಬ್ದುಲ್ ಕಲಾಂ ಅವರ ಅಂತಿಮ ವಿಧಿವಿಧಾನದಲ್ಲಿ ಪಾಲ್ಗೊಳ್ಳಲಿದ್ದಾರೆ ಎಂದು ಸರ್ಕಾರದ ಅಧಿಕೃತ ಪ್ರಕಟಣೆ ತಿಳಿಸಿತ್ತು. ಅಂತ್ಯಸಂಸ್ಕಾರ ದಲ್ಲಿ ಪಾಲ್ಗೊಂಡ ಬಳಿಕ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಧ್ಯಾಹ್ನ ಕರ್ನಾಟಕ ವಾಪಸಾಗಿ ವಿಧಾನಮಂಡಲದ ಅಧಿವೇಶನಕ್ಕೆ ಹಾಜರಾಗಲಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


